ಕೆಎಎಸ್ ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ

Date:

ಕೆಎಎಸ್ ಅಧಿಕಾರಿಗಳ ಬಡ್ತಿ ಬೇಡಿಕೆಯನ್ನೂ ಪರಿಶೀಲಿಸಲಾಗುವುದು. ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ದವಿದೆ. ಮುಂದಿನ ಹತ್ತು ದಿನಗಳ ಒಳಗಾಗಿ ಬಿಡುಗಡೆ ಆಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಹೊರತಂದಿರುವ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆಗೊಳಿಸಿ ಮಾತನಾಡಿದರು.

“ಕೆಎಎಸ್ ಅಧಿಕಾರಿಗಳ ಸಂಘ ಮುಂದಿಟ್ಟಿರುವ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಕೆಎಎಸ್ ಅಧಿಕಾರಿಗಳ ಸಂಖ್ಯೆ ಹೆಚ್ಚಿಸಲು ನಾವು ಸಿದ್ದರಿದ್ದೇವೆ. ಆದರೆ ಸಂಖ್ಯೆ ಮುಖ್ಯವಲ್ಲ. ನಿಮ್ಮ ಗುಣಾತ್ಮಕ ಕರ್ತವ್ಯ, ಸೇವೆ ಮುಖ್ಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ. ಸೂಟು ಬೂಟು ಹಾಕಿಕೊಂಡು ಬರುವವರನ್ನು ಕುರ್ಚಿಯಲ್ಲಿ ಕೂರಿಸಿ ಮಾತನಾಡಿಸುವುದನ್ನು, ಮಾಸಲು ಬಟ್ಟೆಯಲ್ಲಿ ಬರುವ ಬಡವರನ್ನು ನಿರ್ಲಕ್ಷ್ಯದಿಂದ ಕಾಣುವುದು ನಮ್ಮ ಮಾನಸಿಕ ಗುಲಾಮಗಿರಿಯ ಧ್ಯೋತಕ. ಇದನ್ನು ಕಿತ್ತೊಗೆದು ಪ್ರತಿಯೊಬ್ಬರಿಗೂ ಸಮಾಜದಲ್ಲಿ ಅವಕಾಶಗಳು ಸಿಗುವಂತೆ ನೋಡಿಕೊಳ್ಳಿ” ಎಂದು ಕರೆ ನೀಡಿದರು.

“ಎರಡು ಹೊತ್ತಿನ ಊಟಕ್ಕೂ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ನಿಮ್ಮ ಬದ್ಧತೆ ತೋರಿಸಿ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಭೆಯಲ್ಲಿ ಮಾಡಿರುವ ಭಾಷಣವನ್ನು ನೀವೆಲ್ಲಾ ಓದಬೇಕು. ಐತಿಹಾಸಿಕ ಕಾರಣಗಳಿಂದಾಗಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದೆ. ಇದನ್ನು ಹೋಗಲಾಡಿಸಬೇಕು ಎನ್ನುವುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಈ ಆಶಯ ಈಡೇರಿಸಲು ನಾವು ನಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು” ಎಂದರು.

“ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೀವಿ. ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿ ಆಹಾರ, ಶಿಕ್ಷಣ, ಮಾಹಿತಿ ಹಕ್ಕುಗಳನ್ನು ಮಾಡುವ ಮೂಲಕ ಸಂವಿಧಾನದ ನಿರ್ದೇಶಕ ತತ್ವಗಳನ್ನು ಜನರ ಹಕ್ಕುಳನ್ನಾಗಿ ಮಾಡಿದರು. ಇವೆಲ್ಲವೂ ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸುವ ಉದ್ದೇಶವನ್ನೇ ಹೊಂದಿವೆ. ಆದ್ದರಿಂದ ಮಧ್ಯವರ್ತಿಗಳೇ ಇಲ್ಲದ ನಮ್ಮ ಗ್ಯಾರಂಟಿಗಳನ್ನು ಮನೆ ಮನೆ ತಲುಪಿಸಿ” ಎಂದು ಹೇಳಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ಶಿವಸ್ವಾಮಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಸತ್ಯವತಿ ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...