ಅಧಿವೇಶನ | ರಾಜ್ಯದಲ್ಲಿ 2,84,881 ಸರ್ಕಾರಿ ಹುದ್ದೆ ಖಾಲಿ, 56,432 ಭರ್ತಿಗೆ ಕ್ರಮ: ಸಿದ್ದರಾಮಯ್ಯ

Date:

ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಒಟ್ಟು 56,432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯ ಹಣಮಂತ ನಿರಾಣಿ ಅವರು ರಾಜ್ಯದಲ್ಲಿ ನಿಗಮ ಮಂಡಳಿಗಳು ಸೇರಿದಂತೆ ಸುಮಾರು 2,84,881 ಹುದ್ದೆಗಳು ಖಾಲಿಯಿದ್ದು,ಇವುಗಳನ್ನು ಶೀಘ್ರ ಗತಿಯಲ್ಲಿ ತುಂಬಲು ತೆಗೆದುಕೊಂಡಿರುವ ಕ್ರಮದ ಬಗ್ಗೆ ಮಾಹಿತಿ ಕೋರಿದ್ದರು.

ಸಿಎಂ ಅವರು ಹಣಮಂತ ನಿರಾಣಿ ಅವರ ಪ್ರಶ್ನೆಗೆ ಉತ್ತರಿಸುತ್ತ, “ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ101420 ಹುದ್ದೆಗಳು, ವಿಶ್ವವಿದ್ಯಾಲಯಗಳ್ಲಲಿ 14677 ಹುದ್ದೆಗಳು ಒಟ್ಟು 188037 ಹುದ್ದೆಗಳು ಖಾಲಿಯಿದೆ” ಎಂದು ಒಪ್ಪಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371 ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

“ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆಗೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು” ಎಂದು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...