ಅಧಿವೇಶನ | ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ಸರ್ಕಾರ: ಸಚಿವ ಚಲುವರಾಯಸ್ವಾಮಿ

Date:

ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಮತ್ತು ಜನಪ್ರತಿನಿಧಿಗಳೊಂದಿಗೆ ವಿಮೆ ಪರಿಹಾರ ಸುಧಾರಣೆ ತರಲು ಚರ್ಚಿಸಿ ಆಯಾ ಹಂಗಾಮಿನ ವಿಮೆ ಪರಿಹಾರವನ್ನು ಅದೇ ವಾರ್ಷಿಕ ವರ್ಷದ ಅವಧಿಯಲ್ಲಿ ಒದಗಿಸುವಂತೆ ಕ್ರಮ ಜರುಗಿಸಲಾಗಿದೆ” ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ವಿಧಾನಸಭೆ ಅಧಿವೇಶನದ ಕಲಾಪದಲ್ಲಿ ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಕೃಷಿ ಸಚಿವರು, “ಕಳೆದ ಮೂರು ವರ್ಷಗಳಲ್ಲಿ ಬಿತ್ತನೆ ಮಾಡಿದ ಕೆಲವೇ ದಿನಗಳಲ್ಲಿ ಅಧಿಕ ಮಳೆಯಿಂದ ಶೇ 5೦ ಕ್ಕೂ ಹೆಚ್ಚು ಬೆಳೆ ಹಾನಿ ಆದ ಸಂದರ್ಭದಲ್ಲಿ ತಕ್ಷಣವೇ ರೈತರಿಗೆ ಮಿಡ್ ಸೀಸನ್ ಅಡ್ವೈಸರಿ ನಿಯಾಮಾವಳಿ ಪ್ರಕಾರ ವಿಮೆ ಪರಿಹಾರವನ್ನು ನೀಡಿ ರೈತರ ನೇರವಿಗೆ ನಮ್ಮ ಸರ್ಕಾರ ಧಾವಿಸಿದೆ” ಎಂದು ತಿಳಿಸಿದರು.

“ವಿಶೇಷವಾಗಿ ಕಪ್ & ಕ್ಯಾಪ್ ಮಾದರಿಯಲ್ಲಿ ವಿಮೆ ಪರಿಹಾರವನ್ನು ನಿರ್ಧರಿಸಲು ಕ್ತಮ ಕೈಕೊಂಡಿರುವುದರಿಂದ
ವಿಮೆ ಪರಿಹಾರ ವಿತರಣೆಯಲ್ಲಿ ಸುಧಾರಣೆಯನ್ನು ತರಲಾಗಿದೆ. ಈ ಕುರಿತು ವಿಮಾ ಕಂಪನಿ ಅಧಿಕಾರಿಗಳೊಂದಿಗೆ ಹಲವು ಬಾರಿ ಸಭೆ ನಡೆಸಿರುವುದಲ್ಲದೇ, ಕ್ರಾಪ್ ಕಟಿಂಗ್ ಎಕ್ಸಪರಿಮೇಟ್ ಸರಿಯಾಗಿ ಹಾಗೂ ವೈಜ್ಞಾನಿಕವಾಗಿ ನಡೆಸಬೇಕೆಂದು ಸೂಚನೆ ನೀಡಲಾಗಿದ್ದರ ಪರಿಣಾಮ ರಾಜ್ಯದಲ್ಲಿ ಬೆಳೆ ವಿಮೆ ಯೋಜನೆಯನ್ನು ಅತ್ಯಂತ ಯಶ್ವಸಿಯಾಗಿ ಜಾರಿಗೊಳಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಮೂರು ವರ್ಷಗಳಲ್ಲಿ ಎಲ್ಲ ಹಂಗಾಮುಗಳಲ್ಲಿ ರಾಜ್ಯದಲ್ಲಿ ಒಟ್ಟು 73 ಲಕ್ಷ ರೈತರು ವಿಮೆ ಹಣ ಪಾವತಿಸಿ ನೊಂದಾಯಿಸಿಕೊಂಡವರ ಪೈಕಿ ಶೇ.60 ರಷ್ಟು ರೈತರು, 43 ಲಕ್ಷ ನೊಂದಾಯಿಸಿಕೊಂಡ ರೈತರಿಗೆ ಒಟ್ಟು 5534 ಕೋಟಿ ರೂಪಾಯಿಗಳ ವಿಮೆ ಪರಹಾರವನ್ನು ನೀಡಿ, ನಮ್ಮ ಸರ್ಕಾರ ರೈತರಿಗೆ ವಿಮೆ ಪರಿಹಾರ ನೀಡುವಲ್ಲಿ ಇತಿಹಾಸ ನಿರ್ಮಿಸಿದೆ” ಎಂದು ಹೇಳಿದರು.

“ಇನ್ನೂ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ, ಕಲಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2022- 23 ನೇ ಸಾಲಿನಿಂದ 2025-26 ನೇ ಸಾಲಿನ ಮುಂಗಾರು ಹಂಗಾಮಿನವರೆಗೆ ಒಟ್ಟು 23782 ರೈತರು 31338.13 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆ ವಿಮೆಗೆ ನೊಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ 5 ಲಕ್ಷದ 5 ಸಾವಿರ ರೈತರಿಗೆ 990 ಕೋಟಿ ರೂಪಾಯಿ ಬೆಳೆ ವಿಮಾ ಪರಿಹಾರ ಹಣ ನೀಡಲಾಗಿದೆ” ಎಂದು ಕೃಷಿ ಸಚಿವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...