ಅಧಿವೇಶನ | ಭೂ ಲೂಟಿಕೋರರನ್ನು ಸುಮ್ಮನೆ ಬಿಡಲ್ಲ: ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ

Date:

ಬಗರ್ ಹುಕುಂ ಫಾರ್ಮ್ 50-53 ರಲ್ಲಿ ಜಮೀನು ಮಂಜೂರು ಪ್ರಕರಣಗಳಲ್ಲಿ ಪ್ರಾಮಾಣಿಕರು ಮತ್ತು ಅಮಾಯಕರಿಗೆ ತೊಂದರೆ ನೀಡಲ್ಲ. ಆದರೆ, ಅಕ್ರಮವಾಗಿ ಭೂ ಮಂಜೂರಾತಿ ಪಡೆದ ಲೂಟಿ ಕೋರರು ಹಾಗೂ ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ತಿಳಿಸಿದರು.

ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಎಚ್.ಡಿ. ತಮ್ಮಯ್ಯ ಅವರು ಮಾತನಾಡಿ, “ಬಗರ್ ಹುಕುಂ ಫಾರ್ಮ್ 50-53ರ ಅಡಿಯಲ್ಲಿ ಹತ್ತಾರು ವರ್ಷಗಳ ಹಿಂದೆಯೇ ಬಡ ರೈತರಿಗೆ ಜಮೀನು ಮಂಜೂರಾಗಿದೆ. ರೈತರು ಆ ಜಮೀನಿನ ಮೇಲೆ ಸಾಲವನ್ನೂ ಸಹ ಪಡೆದಿದ್ದಾರೆ. ಆದರೆ, ಈಗ ಆ ಮಂಜೂರಾತಿಗಳನ್ನು ರದ್ದು ಮಾಡಿದರೆ ಕಡೂರು, ಮೂಡಿಗೆರೆ ಭಾಗದ ಬಡವರು, ರೈತರು ಬೀದಿಗೆ ಬೀಳುವ ಸ್ಥಿತಿ ಎದುರಾಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.

ಶಾಸಕರಾದ ಎಚ್.ಡಿ. ತಮ್ಮಯ್ಯ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಈ ವಿಚಾರದಲ್ಲಿ ಅಮಾಯಕರಿಗೆ ಹಾಗೂ ಪ್ರಾಮಾಣಿಕರಿಗೆ ತೊದರೆ ಮಾಡಲ್ಲ. ಯಾರು ಹಗರಣ ಮಾಡಿದ್ದಾರೆ, ಅಧಿಕಾರಿಗಳ ಜೊತೆ ಶಾಮೀಲಾಗಿ ಸರ್ಕಾರಕ್ಕೆ ಮೋಸ ಮಾಡಿದ್ದಾರೆ ಅವರು ಪಾಪದವರಲ್ಲ. ಅಂತವರಿಗೆ ವಿನಾಯಿತಿ ನೀಡುವಷ್ಟು ನಾವು ಉದಾರಿಗಳಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಬಗರ್ ಹುಕುಂ ಭೂ ಮಂಜೂರಾತಿ ಪ್ರಕರಣಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆಯೂ ಸದನಕ್ಕೆ ಮಾಹಿತಿ ನೀಡಿದ ಅವರು, “ನಮ್ಮ ಅಧಿಕಾರಿಗಳು ಭೂಮಿಗಾಗಿ ಅರ್ಜಿ ಕೊಡದವರು, ಸಾಗುವಳಿದಾರರಲ್ಲದವರಿಗೂ ಭೂ ಮಂಜೂರು ಮಾಡಿದ್ದಾರೆ. ಅರಣ್ಯ ಜಾಗದಲ್ಲಿ ಭೂ ಮಂಜೂರು ಮಾಡಿದ್ದಾರೆ. ಅಷ್ಟೇ ಏಕೆ ತುಮಕೂರಿನ ವ್ಯಕ್ತಿಗೆ ಚಿಕ್ಕಮಗಳೂರಿನಲ್ಲಿ ಭೂ ಮಂಜೂರು ಮಾಡಲಾಗಿದೆ. ಅಂದಾಜಿನ ಪ್ರಕಾರ ಕಡೂರು ತಾಲೂಕು ಒಂದರಲ್ಲೇ ಸುಮಾರು 6000 ಎಕರೆ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿ ಖಾತೆ ಮಾಡಿಕೊಡಲಾಗಿದೆ” ಎಂದು ಹೇಳಿದರು.

“ಅಕ್ರಮದಲ್ಲಿ ಬಾಗಿ ಆಗಿ ಲೂಟಿ ಮಾಡಿದವರ ವಿರುದ್ಧ ನಾವು ಉದಾರತೆ ಮೆರೆಯಲು ಸಧ್ಯವಿಲ್ಲ. ತಪ್ಪು ಮಾಡಿದವರು ಅಮಾಯಕರಲ್ಲ. ಇಂತಹ ಅಕ್ರಮಗಳಲ್ಲಿ ಭಾಗಿಯಾದ 24 ಅಧಿಕಾರಿಗಳ ವಿರುದ್ಧ ಈಗಾಗಲೇ ದೋಷಾರೋಪ ಪಟ್ಟಿ ಸಿದ್ದ ಮಾಡಿದ್ದೇನೆ. ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಹೀಗಾಗಿ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳಿಗೆ ಒಂದು ಕಾನೂನು ಹಾಗೂ ಅವರ ಜೊತೆ ಶಾಮೀಲಾದ ಭೂ ಕಬಳಿಕೆದಾರರಿಗೆ ಒಂದು ಕಾನೂನು ಮಾಡಲಾಗದು” ಎಂದು ಸ್ಪಷ್ಟಪಡಿಸಿದರು.

“ನಾವು ಅಮಾಯಕರ, ಪ್ರಮಾಣಿಕರ ಪರ ಇದ್ದೇವೆ. ಹೀಗಾಗಿ, ಭೂ ಮಂಜೂರಾತಿ ವಿಚಾರದಲ್ಲಿ ತಪ್ಪು ಮಾಡದವರ ಹೆಸರು ದೋಷಾರೋಪ ಪಟ್ಟಿಯಲ್ಲಿ ಬಂದಿದ್ದರೆ, ಅಮಾಯಕರ ಮಂಜೂರು ರದ್ದಾಗಿದ್ದರೆ ಆ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಮಾತಾಡಿ ಸರಿಪಡಿಸುತ್ತೇನೆ. ಆದರೆ, ಅಕ್ರಮದಲ್ಲಿ ಭಾಗಿಯಾದ ಲೂಟಿಕೋರರಿಗೆ ಉದಾರತೆ ತೋರಿಸಲಾಗದು” ಎಂದು ಅವರು ಸದನಕ್ಕೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...