ಅಧಿವೇಶನ | ಕೆಪಿಎಸ್‌ಸಿ ಪರೀಕ್ಷೆ ಎಡವಟ್ಟು, ಭ್ರಷ್ಟಾಚಾರ ಬಗ್ಗೆ ಗಂಭೀರ ಚರ್ಚೆ

Date:

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ವಿಳಂಬ ಪರೀಕ್ಷೆ ನಡೆಸುವಲ್ಲಿ ಎಡವಟ್ಟು, ವ್ಯವಸ್ಥೆಯ ವೈಫಲ್ಯದ ಆರೋಪದ ಕುರಿತ ವಿಚಾರ ವಿಧಾನಸಭೆಯಲ್ಲಿ ಮಂಗಳವಾರ ಚರ್ಚೆ ನಡೆಯಿತು.

ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಅವರು ನಿಲುವಳಿ ಸೂಚನೆ ಪೂರ್ವಭಾವಿಯಾಗಿ ಮಾತನಾಡಿ, “2 ಲಕ್ಷ ಅಭ್ಯರ್ಥಿಗಳಿಗೆ ಕೆಪಿಎಸ್‌‍ಸಿಯಿಂದ ತೊಂದರೆಯಾಗಿದೆ. ಸರ್ಕಾರದ 30 ಕೋಟಿ ರೂ. ಹಣ ಖರ್ಚಾಗಿದೆ. ಕನ್ನಡ ಭಾಷೆಗೆ ಅಪಮಾನವಾಗಿದೆ” ಎಂದು ಆರೋಪಿಸಿದರು.

“ನಿರುದ್ಯೋಗ ಪದವೀಧರರ ಪಾಲಿಗೆ ಆಶಾಕಿರಣವಾಗಬೇಕಿದ್ದ ಕೆಪಿಎಸ್‌‍ಸಿ ಅವ್ಯವಸ್ಥೆಗಳ ಆಗರವಾಗಿದೆ. ಕೆಎಎಸ್‌‍ ಪರೀಕ್ಷೆ ಮತ್ತು ಮರುಪರೀಕ್ಷೆ ನಡೆಸುವಲ್ಲಿ ಪದೇಪದೆ ಎಡವಟ್ಟು ಮಾಡಿದೆ. ಪ್ರಶ್ನೆಪತ್ರಿಕೆಗಳ ತಯಾರಿಕೆ ಮತ್ತು ಅನುವಾದ ಮಾಡುವಲ್ಲಿ ಆಗುತ್ತಿರುವ ತಪ್ಪುಗಳಿಂದ ಪರೀಕ್ಷೆ ಸಂದರ್ಶನ ನಡೆಸಿ ಅಂತಿಮ ಆಯ್ಕೆ ಪ್ರಕಟಿಸುವಲ್ಲೂ ವಿಳಂಬವಾಗುತ್ತಿದೆ. ಇದರಿಂದ ಉದ್ಯೋಗಾಕಾಂಕ್ಷಿಗಳು ತೊಂದರೆಗೊಳಗಾಗುತ್ತಿದ್ದಾರೆ. ಸರ್ಕಾರದ ರಾಜಕೀಯ ಹಸ್ತಕ್ಷೇಪ, ಭ್ರಷ್ಟಾಚಾರ, ಸ್ವಜನಪಕ್ಷಪಾತ ಈ ಎಲ್ಲ ಗೊಂದಲಗಳಿಗೆ ಮೂಲ ಕಾರಣವಾಗಿದೆ. ಪ್ರತಿಯೊಂದು ಹುದ್ದೆಗೂ ದರ ನಿಗದಿ ಮಾಡಲಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತೀ ಪರೀಕ್ಷೆಗೆ 15 ಕೋಟಿ ರೂ. ವೆಚ್ಚವಾಗಿದೆ. ಬರಗಾಲ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತೀ ರೂಪಾಯಿ ಅನುದಾನಕ್ಕೂ ನಾವು ಮುಖ್ಯಮಂತ್ರಿಗಳ ಮನೆಗೆ ಹೋಗುತ್ತೇವೆ. 2 ಲಕ್ಷ ಅಭ್ಯರ್ಥಿಗಳು ಕೆಪಿಎಸ್‌‍ಸಿ ವ್ಯವಸ್ಥೆ ವೈಫಲ್ಯದಿಂದ ಬೀದಿಗೆ ಬಂದಿದ್ದಾರೆ. ಹೀಗೇ ಮುಂದುವರೆದರೆ ಎಷ್ಟು ಮಂದಿ ಉದ್ಯೋಗಾಕಾಂಕ್ಷಿಗಳು ಆತಹತ್ಯೆ ಮಾಡಿಕೊಳ್ಳುತ್ತಾರೋ ಗೊತ್ತಿಲ್ಲ. ಈ ವಿಚಾರದ ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕೆಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು.

ಕೆಪಿಎಸ್‌‍ಸಿ ವಿರುದ್ಧ ರಸ್ತೆ ತಡೆ, ಪ್ರತಿಭಟನೆ ಆಗುತ್ತಿದೆ. ಸಭಾಧ್ಯಕ್ಷರೂ ಪತ್ರ ಬರೆದಿದ್ದಾರೆ. ಕೆಪಿಎಸ್‌‍ಸಿಯಿಂದ ಕನ್ನಡದ ಕೊಲೆಯಾಗಿದೆ. ಕನ್ನಡ ಉಳಿಯಬೇಕಲ್ಲವೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಎಚ್‌ ಕೆ ಪಾಟೀಲ್‌ ಮಧ್ಯ ಪ್ರವೇಶಿಸಿ, “ವಿರೋಧ ಪಕ್ಷದ ನಾಯಕರು ಮಾತನಾಡುವಾಗ ಜಾಗೃತೆ ಇರಲಿ. ಜನರಲ್‌ ಆಗಿ ಮಾತನಾಡುವುದು ಬೇಡ. ಆರೋಪಗಳನ್ನು ದಾಖಲೆ ಸಮೇತ ಮಾಡಲಿ” ಎಂದರು. ಅರಸೀಕೆರೆ ಶಾಸಕ ಶಿವಲಿಂಗೇಗೌಡ ಮಾತನಾಡಿ, “ಕೆಪಿಎಸ್‌ಸಿ ಹಣೆಬರಹ ನಿಮಗೂ ಗೊತ್ತು, ನಮಗೂ ಗೊತ್ತು. ಸುಮ್ಮನೇ ಸರ್ಕಾರದ ಮೇಲೆ ಆರೋಪ ಬೇಡ. ಕೆಪಿಎಸ್‌ಸಿ ರದ್ದು ಮಾಡಿ ಎಂದು ಚರ್ಚೆ ಮಾಡಿ” ಎಂದು ಹೇಳಿದರು.

ಸಭಾಧ್ಯಕ್ಷ ಯು.ಟಿ.ಖಾದರ್‌ ಮಾತನಾಡಿ, “ಈ ವಿಚಾರವನ್ನು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಸಂದರ್ಭದಲ್ಲೂ ಪ್ರಸ್ತಾಪಿಸಲು ಅವಕಾಶವಿದೆ” ಎಂದರು. ಆಗ ಅಶೋಕ್‌ ಮಾತನಾಡಿ, “ನಿಮ್ಮ ಸಲಹೆಯನ್ನು ಒಪ್ಪುತ್ತೇವೆ. ಆದರೆ ಈ ವಿಚಾರದ ಬಗ್ಗೆ ನಿರ್ದಿಷ್ಟವಾದ ಉತ್ತರ ಸರ್ಕಾರದಿಂದ ಸಿಗುವುದಿಲ್ಲ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸರ್ಕಾರ ಒಟ್ಟಾರೆ ಉತ್ತರವನ್ನು ನೀಡುತ್ತದೆ. ಹೀಗಾಗಿ ನಿಲುವಳಿ ಚರ್ಚೆಯಡಿ ವಿಸ್ತೃತ ಚರ್ಚೆಗೆ ಅವಕಾಶ ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

ಮತ್ತೆ ಸದನ ಸಮಾವೇಶಗೊಂಡಾಗ ಸಭಾಧ್ಯಕ್ಷರು ನಿಲುವಳಿ ಸೂಚನೆಯಡಿ ವಿರೋಧಪಕ್ಷದ ನಾಯಕರು ಮಾಡಿರುವ ಪ್ರಸ್ತಾಪವನ್ನು ಮಾರ್ಪಾಡು ಮಾಡಿ ನಿಯಮ 69 ರಡಿ ಚರ್ಚೆಗೆ ಅವಕಾಶ ನೀಡುವುದಾಗಿ ಪ್ರಕಟಿಸಿ, ಸದನದ ಕಾರ್ಯಕಲಾಪವನ್ನು ಭೋಜನದ ವಿರಾಮಕ್ಕೆ ಮುಂದೂಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...