ಅಧಿವೇಶನ | ಬಿಜೆಪಿ ನಾಯಕರಿಗೆ ಏನೂ ಸಮಸ್ಯೆ ಸಿಗದಿರುವುದೇ ದೊಡ್ಡ ಸಮಸ್ಯೆ: ಕೃಷ್ಣ ಬೈರೇಗೌಡ

Date:

ಆಡಳಿತ ಪಕ್ಷವನ್ನು ಸದನದಲ್ಲಿ ಇಕ್ಕಟ್ಟಿಗೆ ಸಿಲುಕಿಸಲು ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಬಿಜೆಪಿಗರ ಪಾಲಿಗೆ ಸಮಸ್ಯೆಯಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಟೀಕಿಸಿದರು.

ಮಂಗಳವಾರ ಸುವರ್ಣಸೌಧದ ವಿಧಾನಸಭೆ ಕಲಾಪದಲ್ಲಿ ಮೊದಲು ನಿಗದಿಯಂತೆ ಪ್ರಶ್ನೋತ್ತರ ಅವಧಿ ಆರಂಭವಾಗಬೇಕಿತ್ತು. ಆದರೆ, ವಿಪಕ್ಷ ನಾಯಕರಾದ ಆರ್. ಅಶೋಕ್ ಹಾಗೂ ಶಾಸಕರಾದ ಅಶ್ವತ್ಥನಾರಾಯಣ ಅವರು ಪ್ರಶ್ನೋತ್ತರ ಅವಧಿಗೆ ಮುನ್ನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ನಿಲುವಳಿ ಮಂಡಿಸಿದರು.

ಈ ವೇಳೆ ವಿರೋಧ ಪಕ್ಷದ ನಾಯಕರ ವರ್ತನೆಯನ್ನು ಬಹಿರಂಗವಾಗಿ ಖಂಡಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಬಿಜೆಪಿ ನಾಯಕರಿಗೆ ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಸಮಸ್ಯೆಯಾಗಿದೆ. ಅದೇ ಕಾರಣಕ್ಕೆ ಪ್ರಶ್ನೋತ್ತರ ಅವಧಿಗೆ ಮುನ್ನವೇ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿ ಎನ್ನುತ್ತಿದ್ದಾರೆ. ಆದರೆ, ನಿಯಮದ ಪ್ರಕಾರ ಪ್ರಶ್ನೋತ್ತರ ಅವಧಿಗೆ ಮುನ್ನ ಯಾವುದೇ ಚರ್ಚೆ ಮಾಡಲು ಅವಕಾಶ ಇಲ್ಲ. ಪ್ರಶ್ನೋತ್ತರ ಅವಧಿಯ ನಂತರ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರವೇ ಸಲಹೆ ನೀಡಿದೆ. ಆದರೂ, ಇದರಲ್ಲಿ ವಿರೋಧ ಪಕ್ಷದ ತಕರಾರು ಏಕೆ?” ಎಂದು ಟೀಕಾಪ್ರಹಾರ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಸದನದ ಈ ಹಿಂದಿನ ಇತಿಹಾಸವನ್ನೂ ಮೆಲುಕು ಹಾಕಿದ ಅವರು,” ಬಿಜೆಪಿ ನಾಯಕರಲ್ಲಿ ಸೆಲೆಕ್ಟೀವ್ ಜ್ಞಾಪಕ ಶಕ್ತಿ ಅಧಿಕವಾಗಿದೆ. ಈ ಹಿಂದೆ ಬಿಜೆಪಿಯೇ ಅಧಿಕಾರದಲ್ಲಿದ್ದಾಗ ವಿಶ್ವೇಶ್ವರ ಹೆಗಡೆ ಅವರು ಸ್ಪೀಕರ್ ಆಗಿದ್ದ ಸಂದರ್ಭದಲ್ಲಿ ʼಪ್ರಶ್ನೋತ್ತರದ ಅವಧಿ ವೇಳೆ ಯಾವುದೇ ವಿಚಾರಗಳ ಬಗ್ಗೆ ಚರ್ಚೆ ಬೇಡʼ ಎಂದು ಅವರೇ ಹೇಳಿದ್ದರು. ಆದರೆ, ಇಂದು ಬಿಜೆಪಿ ನಾಯಕರೇ ಈ ನಿಯಮವನ್ನು ಗಾಳಿಗೆ ತೂರುತ್ತಿರುವುದು ಸರಿಯಲ್ಲ” ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಉಚ್ಛಾಟಿತ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, “ಕೆಲವರು ಪ್ರತಿಷ್ಠೆಗಾಗಿ ಪ್ರಶ್ನೋತ್ತರ ಅವಧಿ ಮುಂದೆ ಹಾಕುವುದು ಸರಿ ಇಲ್ಲ. ಪ್ರತಿಯೊಬ್ಬ ಶಾಸಕರಿಗೂ ಅವರವರ ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯೇ ಮಹತ್ವದ ಪ್ರಶ್ನೆ ಇರುತ್ತೆದೆ. ನಾನೂ ಸಹ ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸ್ಟಾರ್ ಗುರುತಿನ ಪ್ರಶ್ನೆ ಕೇಳಿದ್ದೇನೆ. ಇಂತಹ ಸಂದರ್ಭದಲ್ಲಿ ಪ್ರಶ್ನೋತ್ತರ ಅವಧಿಯನ್ನು ಮುಂದೂಡುವುದು ಸರಿಯಲ್ಲ. ಪ್ರಶ್ನೋತ್ತರ ಅವಧಿಯ ನಂತರ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿ” ಎಂದು ಸಲಹೆ ನೀಡಿದರು.

ಹಿರಿಯ ಸಚಿವರಾದ ಎಚ್.ಕೆ. ಪಾಟೀಲ್ ಮಾತನಾಡಿ, “ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆಗೆ ನಮ್ಮ ಸಹಮತ ಇದೆ. ಈ ಚರ್ಚೆಯನ್ನು ಈಗಾಗಲೇ ಇಂದಿನ ಅಜೆಂಡಾಗೂ ಸೇರಿಸಿಯಾಗಿದೆ. ಪ್ರಶ್ನೋತ್ತರ ಅವಧಿಗೆ ಮುನ್ನ ಈ ಚರ್ಚೆ ಆರಂಭಿಸಲು ನಮ್ಮದೇನು ತಕರಾರು ಇಲ್ಲ. ಆ ನಿರ್ಧಾರ ಸ್ಪೀಕರ್ ಅವರ ವಿವೇಚನೆಗೆ ಬಿಟ್ಟದ್ದು” ಎಂದು ವಿಪಕ್ಷ ನಾಯಕರ ಬೇಡಿಕೆಗೆ ಸಹಮತ ವ್ಯಕ್ತಪಡಿಸಿದರು.

ಅಂತಿಮವಾಗಿ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಪ್ರಶ್ನೋತ್ತರ ಅವಧಿಗೆ ಮನ್ನಣೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...