ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿ 43 ಕ್ರಿಮಿನಲ್‌ ಪ್ರಕರಣ ಹಿಂಪಡೆದ ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್‌

Date:

ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ.

ಸಂಘಟನಾ ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ 43 ಪ್ರಕರಣಗಳನ್ನು ಅಕ್ಟೋಬರ್ 10, 2024 ರಂದು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಹೈಕೋರ್ಟ್​ ದ್ವಿಸದಸ್ಯ ಪೀಠ ಇಂದು (ಮೇ 29) ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಿಐಎಲ್‌ ವಿಚಾರಣೆಯ ಸಂದರ್ಭದಲ್ಲೇ ಕೋರ್ಟ್‌ ಸಚಿವ ಸಂಪುಟದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪುವುದಿಲ್ಲ, ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ ಎಂದು ಹೇಳಿತ್ತು. ಅರ್ಜಿದಾರರ ಪರ ವಕೀಲರು ಪ್ರಭಾವಿ ವ್ಯಕ್ತಿಗಳೂ ಸೇರಿದಂತೆ ಕೆಲವು ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳನ್ನು ಅಪರಾಧ ದಂಡ ಸಂಹಿತೆ ಸೆಕ್ಷನ್‌ 321ಕ್ಕೆ ವಿರುದ್ಧವಾಗಿ ಸರಕಾರ ಹಿಂಪಡೆದಿದೆ ಎಂದು ಹೇಳಿರುವುದು ಮೇಲ್ನೋಟಕ್ಕೆ ಸಮರ್ಥನೀಯವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

ನ್ಯಾ.ಎನ್.ವಿ.ಅಂಜಾರಿಯಾ ಅವರು ಸುಪ್ರೀಂ ಕೋರ್ಟ್‌ ಜಡ್ಜ್‌ ಆಗಿ ನೇಮಕವಾಗಿದ್ದು ಇಂದು ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಕೊನೆಯ ಬಾರಿ ತೀರ್ಪು ಪ್ರಕಟಿಸಿದರು. ಈ ವೇಳೆ, “ನಿಮ್ಮೆಲ್ಲರಿಗೂ ತುಂಬಾ ಧನ್ಯವಾದಗಳು. ಇದು ನನ್ನ ಕೊನೆಯ ಬಾರಿ ಹೈಕೋರ್ಟ್‌ ಪೀಠದಲ್ಲಿ ಕುಳಿತಿದ್ದೇನೆ. ಎಲ್ಲ ವಕೀಲರಿಗೆ ಮತ್ತು ಸಿಬ್ಬಂದಿಗೆ ಧನ್ಯವಾದ ಹೇಳುತ್ತೇನೆ. ಇದು ನನ್ನ ಕೊನೆಯ ಆದೇಶ” ಎಂದು ತಿಳಿಸಿದರು.

ಏಪ್ರಿಲ್ 16, 2022 ರಂದು ಯುವಕನೊಬ್ಬ ವಿವಾದಾತ್ಮಕ ಪೋಸ್ಟ್ ಒಂದನ್ನು ಹಾಕಿದ್ದ. ಈ ವಿಚಾರಕ್ಕೆ ಸಂಬಂಧಿಸಿ ಗಲಭೆ ನಡೆದು ಉದ್ರಿಕ್ತರು ಹಳೆ ಹುಬ್ಬಳ್ಳಿ ಠಾಣೆ ಎದುರು ಪೊಲೀಸರು ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಸಂಬಂಧ 11 ಎಫ್‌ಐಆರ್‌ ದಾಖಲಾಗಿ 155 ಮದಿ ಮೇಲೆ ಕೇಸ್‌ ದಾಖಲಾಗಿತ್ತು. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಪೊಲೀಸ್‌ ವಾಹನಗಳಿಗೆ ಹಾನಿಯಾಗಿದ್ದರೆ ಇಬ್ಬರು ಪೊಲೀಸ್‌ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...