‘ಶಾಲಿನಿ ರಜನೀಶ್ ಹಗಲು ಸಿಎಂಗೆ, ರಾತ್ರಿ ಸರ್ಕಾರಕ್ಕೆ ಕೆಲಸ’: ‌ನಾಲಿಗೆ ಹರಿಬಿಟ್ಟ ಬಿಜೆಪಿಯ ಎನ್ ರವಿಕುಮಾರ್

Date:

ಬಿಜೆಪಿ ಎಂಎಲ್‌ಸಿ ಮತ್ತು ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್ ರವಿಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ‌ವಿರುದ್ಧ ನಾಲಿಗೆ ಹರಿಬಿಟ್ಟಿದ್ದು, ಕೀಳುಮಟ್ಟದ ಪದದ ಮೂಲಕ ಟೀಕಿಸಿ, ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

“ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ” ಎಂದು ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ರವಿಕುಮಾರ್‌ ನಗುನಗುತ್ತಾ ಹೇಳಿರುವ ಬಗ್ಗೆ ‘ಇಂಡಿಯಾ ಟುಡೇ’ ವರದಿ ಮಾಡಿದೆ.

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟಿಸುತ್ತಿರುವ ವೇಳೆ ಉಪ ಪೊಲೀಸ್ ಆಯುಕ್ತ (ವಿಧಾನಸೌಧ ಭದ್ರತೆ) ಎಂ ಎನ್ ಕರಿಬಸವನಗೌಡ ಅವರೊಂದಿಗೆ ಮಾತನಾಡುತ್ತಿರುವಾಗ ರವಿಕುಮಾರ್‌ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರವಿಕುಮಾರ್ ಈ ಹಿಂದೆಯೂ ಸಹ ಸರ್ಕಾರಿ ಮಹಿಳಾ ಅಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಮೇ 24 ರಂದು ಕಲಬುರಗಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ರವಿಕುಮಾರ್‌, “ಕಲಬುರಗಿ ಜಿಲ್ಲಾಧಿಕಾರಿ ಡಾ.ಫೌಝಿಯಾ ತರನ್ನುಮ್‌ ಅವರು ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿನ ಐಎಎಸ್ ಅಧಿಕಾರಿಯೋ ನನಗೆ ಗೊತ್ತಿಲ್ಲ. ನಿಮ್ಮ ಚಪ್ಪಾಳೆ ನೋಡಿದರೆ, ಜಿಲ್ಲಾಧಿಕಾರಿ ನಿಜಕ್ಕೂ ಪಾಕಿಸ್ತಾನದಿಂದ ಬಂದಿರುವಂತೆ ಕಾಣುತ್ತಿದೆ” ಎಂದು ಹೇಳಿದ್ದರು.

ಕಲಬುರಗಿ ಈ ಹೇಳಿಕೆಯ ನಂತರ ರವಿಕುಮಾರ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಹಾಗೆಯೇ ರಾಜ್ಯಪಾಲ ಮತ್ತು ಸಭಾಪತಿಗಳಿಗೆ ಕಾಂಗ್ರೆಸ್‌ ನಾಯಕರು ಈ ಬಗ್ಗೆ ದೂರು ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...