ಮಸೀದಿ ಬಳಿ ಜೈ ಶ್ರೀರಾಮ್ ಕೂಗಿದರೆ ತಪ್ಪಲ್ಲ: ಕರ್ನಾಟಕ ಹೈಕೋರ್ಟ್‌

Date:

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನಲ್ಲಿ ಮಸೀದಿ ಮುಂದೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಇಬ್ಬರ ವಿರುದ್ಧದ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಈ ಸಂಬಂಧ ಪುತ್ತೂರಿನ ಬಿಳಿನೆಲೆಯ ಕೀರ್ತನ್ ಕುಮಾರ್‌ (28) ಮತ್ತು ಎನ್‌.ಎಂ.ಸಚಿನ್ ಕುಮಾರ್ (26) ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಹಿಂದೂ, ಮುಸಲ್ಮಾನರು ಸೌಹಾರ್ದತೆಯಿಂದ ಜೀವಿಸುತ್ತಿದ್ದೇವೆ ಎಂದು ಸ್ವತಃ ದೂರುದಾರರೇ ಹೇಳಿದ್ದಾರೆ. ಆದರೆ, ಅರ್ಜಿದಾರರ ವಿರುದ್ಧ 1860ರ (ಐಪಿಸಿ) ಕಲಂ 295ಎ (ಧಾರ್ಮಿಕ ಭಾವನೆ, ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದು) ಅಡಿಯಲ್ಲಿ ದೂರು ದಾಖಲಿಸಲಾಗಿದೆ’ ಎಂದು ನ್ಯಾಯಪೀಠ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೊಲೀಸರಿಗೆ-ಸರ್ಕಾರಕ್ಕೆ ಸವಾಲಾಗಿರುವ ಸೈಬರ್ ಕ್ರೈಮ್

ಜೈ ಶ್ರೀರಾಮ್ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗೆ ಹೇಗೆ ಧಕ್ಕೆಯಾಗುತ್ತದೆ ಎಂಬುದು ಅರ್ಥವಾಗುತ್ತಿಲ್ಲ. ಈ ಪ್ರಕರಣದಲ್ಲಿ ಯಾವುದೇ ಅಪರಾಧ ಕಂಡು ಬರುತ್ತಿಲ್ಲ. ಹಾಗಾಗಿ, ಅರ್ಜಿದಾರರ ವಿರುದ್ಧ ವಿಚಾರಣೆಗೆ ಅನುಮತಿ ನೀಡುವುದು ಕಾನೂನು ಪ್ರಕ್ರಿಯೆಯ ದುರುಪಯೋಗ ವಾಗುತ್ತದೆ’ ಎಂದಿದೆ.

ಅರ್ಜಿದಾರರ ಪರ ವಕೀಲ ಬಿ ಎಸ್‌ ಸಚಿನ್‌ ಅವರು “ಅರ್ಜಿದಾರರ ವಿರುದ್ಧದ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾದದ್ದು, ಮಸೀದಿಯೂ ಸಾರ್ವಜನಿಕ ಸ್ಥಳವಾಗಿದ್ದು ಅದನ್ನು ಪ್ರವೇಶಿಸಿದ ಮಾತ್ರಕ್ಕೆ ಅತಿಕ್ರಮಣ ಮಾಡಿದ್ದಾರೆ ಎಂದು ಆಪಾದನೆ ಮಾಡುವುದು ಒಪ್ಪುವಂತದಲ್ಲ. ಹೀಗಾಗಿ ಪ್ರಕರಣ ರದ್ದುಗೊಳಿಸಬೇಕು” ಎಂದು ಮನವಿ ಮಾಡಿದರು.

ಸರ್ಕಾರದ ಪರ ವಾದಿಸಿದ ವಕೀಲೆ ಸೌಮ್ಯಾ ಅವರು “ಪ್ರಕರಣದಲ್ಲಿ ತನಿಖೆಯ ಅಗತ್ಯವಿದೆ. ಹಾಗಾಗಿ ಆರೋಪಿಗಳ ಮನವಿಯನ್ನು ತಿರಸ್ಕರಿಸಬೇಕು” ಎಂದು ಮನವಿ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕು ಐತ್ತೂರು ಗ್ರಾಮದ ಮರ್ಧಾಳ ಎಂಬಲ್ಲಿರುವ ಬದ್ರಿಯಾ ಜುಮ್ಮಾ ಮಸೀದಿಯ ಆವರಣಕ್ಕೆ ಸೆಪ್ಟೆಂಬರ್‌ 24 ರಂದು ರಾತ್ರಿ ಸುಮಾರು 10.50 ರ ಸಮಯಕ್ಕೆ  ಆರೋಪಿಗಳು ಅಕ್ರಮವಾಗಿ ಪ್ರವೇಶಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದು, ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲ ಎಂದು ಬೊಬ್ಬೆ ಹಾಕಿದ್ದಾರೆ ಎಂದು ಆರೋಪಿಸಿ ಮಸೀದಿ ಸಿಬ್ಬಂದಿಗಳು ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಆರೋಪಿಗಳಿಬ್ಬರ ವಿರುದ್ಧ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣಕ್ಕೆ ಶಿಕ್ಷೆ), 505 (ಸಾರ್ವಜನಿಕ ಕಿರುಕುಳಕ್ಕೆ ಕಾರಣವಾಗುವ ಹೇಳಿಕೆಗಳು), 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), 34 (ಸಾಮಾನ್ಯ ಉದ್ದೇಶ) ಮತ್ತು 295 ಎ ಅಡಿ ಎಫ್‌ಐಆರ್‌ ದಾಖಲಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...