ಮಾನವ ಹಕ್ಕುಗಳ ಆಯೋಗಕ್ಕೆ ಭ್ರಷ್ಟಾಚಾರ ಆರೋಪ ಹೊತ್ತ ಶ್ಯಾಮ್ ಭಟ್ ನೇಮಕ; ಸರ್ಕಾರದ ಹೊಸ ವಿವಾದ

Date:

ಭ್ರಷ್ಟ ಬಿಜೆಪಿ ಸರ್ಕಾರದಿಂದ ಬೇಸತ್ತ ರಾಜ್ಯದ ಜನತೆ ಮುಂದಿನ ದಿನಗಳಲ್ಲಾದರೂ ತಾವು ನೆಮ್ಮದಿಯಿಂದ ಜೀವನ ನಡೆಸುವ ಸಲುವಾಗಿ ಕಾಂಗ್ರೆಸ್‌ಗೆ ಬಹುಮತ ನೀಡಿ ಗೆಲ್ಲಿಸಿದರು. ಆದರೆ ಜನತೆಯ ನಂಬಿಕೆಗೆ ಚ್ಯುತಿ ತರುವಂತಹ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಆರಂಭಿಸಲು ಶುರು ಮಾಡಿದೆಯೇ ಎಂಬ ಅನುಮಾನ ಶುರುವಾಗಿದೆ. ಹಲವು ಭ್ರಷ್ಟಾಚಾರ ಆರೋಪಗಳನ್ನು ಹೊತ್ತಿರುವ ಟಿ. ಶ್ಯಾಮ್‌ ಭಟ್‌ ಎಂಬ ವಿವಾದಾತ್ಮಕ ವ್ಯಕ್ತಿಯನ್ನು ಮಾನವ ಹಕ್ಕುಗಳ ಆಯೋಗದ ಸದಸ್ಯನನ್ನಾಗಿ ನೇಮಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಟಿ ಶ್ಯಾಮ್ ಭಟ್ ಈ ಹಿಂದೆ ಬಿಡಿಎ ಆಯುಕ್ತರಾಗಿದ್ದರು. ಆಗ ನಿವೇಶನದ ಮೂಲ ಹಂಚಿಕೆದಾರರ ಒಪ್ಪಿಗೆಯನ್ನು ಪಡೆಯದೇ ಬಡಾವಣೆ ನಕ್ಷೆಯನ್ನೇ ತಿದ್ದುಪಡಿ ಮಾಡಿ ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪ ಎದುರಾಗಿತ್ತು. ಆ ಪ್ರಕರಣ ಸಂಬಂಧದ ತನಿಖೆ ಎದುರಿಸುತ್ತಿರುವ ಟಿ ಶ್ಯಾಮ್ ಭಟ್ ಅವರನ್ನು ರಾಜ್ಯ ಸರ್ಕಾರ ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದ ಟಿ ಶ್ಯಾಮ್ ಭಟ್‌ ಅವರನ್ನು ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ಸದಸ್ಯರನ್ನಾಗಿ 2023ರ ನವೆಂಬರ್ 25ರಂದು ನೇಮಕ ಮಾಡಿ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸಚಿವರಾಗಿರುವ ಎಚ್ ಕೆ ಪಾಟೀಲ್ ಅವರ ಅನುಮೋದನೆ ಮೇರೆಗೆ ಈ ನೇಮಕಾತಿ ನಡೆದಿದೆ ಎನ್ನಲಾಗಿದೆ. ಸರ್ಕಾರ ಮಾಡಿದ್ದ ಶಿಫಾರಸ್ಸನ್ನು ರಾಜ್ಯಪಾಲರಾದ ತಾವರ್ ಚಂದ್ ಗೆಹಲೋತ್ ಅವರು ಅನುಮೋದಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿಯುತ್ತಿರುವ ಬಿಜೆಪಿಯಲ್ಲಿ ಗಳ ಇರಿಯುತ್ತಿರುವ ನಾಯಕರು

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಮೊದಲನೇ ಅವಧಿಯಲ್ಲಿಯೂ ಕರ್ನಾಟಕ  ಲೋಕಸೇವಾ ಆಯೋಗಕ್ಕೆ ಅಧ್ಯಕ್ಷರನ್ನಾಗಿ ಟಿ ಶ್ಯಾಮ್ ಭಟ್‌ ಅವರನ್ನು ನೇಮಿಸಿದ್ದರು. ಅವರ ಅಧಿಕಾರವಧಿಯಲ್ಲಿ ಕೆಪಿಎಸ್‌ಸಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವವಾಡಿತ್ತು ಎನ್ನುವ ಆರೋಪಗಳು ಬಂದಿದ್ದವು. ಇದೀಗ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿರುವ ಅವಧಿಯಲ್ಲಿಯೂ ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ಅವರನ್ನು ಸದಸ್ಯರನ್ನಾಗಿ ನೇಮಿಸಿರುವುದು ವಿವಾದಕ್ಕೆ ಗುರಿಯಾಗಿದೆ. ಭ್ರಷ್ಟಾಚಾರ ಎಲ್ಲ ಸರ್ಕಾರಗಳಲ್ಲೂ ಮಾಮೂಲು ಎಂಬುದನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಸಾಬೀತುಪಡಿಸಲು ಹೊರಟಿದೆ ಎಂಬ ಅನುಮಾನ ಕಾಡತೊಡಗಿದೆ.

ಭ್ರಷ್ಟಚಾರ ಆರೋಪ ಹೊತ್ತಿರುವ ಟಿ ಶ್ಯಾಮ್ ಭಟ್‌ ನೇಮಕ ಖಂಡಿತವಾಗಿಯು ಪ್ರತಿಪಕ್ಷಗಳಿಗೆ ಮತ್ತೊಂದು ಪ್ರಬಲ ಅಸ್ತ್ರವಾಗುವುದಲ್ಲಿ ಸಂದೇಹವಿಲ್ಲ.

ಶ್ಯಾಮ್‌ ಭಟ್ ಆದೇಶ
shyam bhat order

 

ಶ್ಯಾಮ್ ಭಟ್‌ ಬಿಡಿಎ ಆಯುಕ್ತರಾಗಿದ್ದ ಸಂದರ್ಭದಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಪ್ರಕರಣದಲ್ಲಿ ತನಿಖೆ ಕೈಗೊಳ್ಳಲು ಹಿಂದಿನ ಬಿಜೆಪಿ ಸರ್ಕಾರವು ಪೂರ್ವಾನುಮತಿ ನೀಡಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 100 ದಿನದೊಳಗೇ ಟಿ ಶ್ಯಾಮ್ ಭಟ್, ಐಎಎಸ್ ಅಧಿಕಾರಿ ರೂಪ ಅವರ ವಿರುದ್ಧ ವಿಚಾರಣೆ ಕೈಗೊಳ್ಳಲು ಪೂರ್ವಾನುಮತಿ ನೀಡಿ ಇತ್ತೀಚೆಗಷ್ಟೆ ಆದೇಶ ಹೊರಡಿಸಿತ್ತು ಎಂಬುದನ್ನು ಗಮನಿಸಬಹುದು.

ಆದರೆ ಈಗ ವಿವಾದಾತ್ಮಕ ಅಧಿಕಾರಿಯನ್ನು ಮಾನವ ಹಕ್ಕುಗಳ ಆಯೋಗದ ಸದಸ್ಯರನ್ನಾಗಿ ಮಾಡಿರುವುದು ಸರ್ಕಾರದ ಇಬ್ಬಗೆ ನೀತಿಯನ್ನು ತೋರಿಸುತ್ತದೆ.

ಶ್ಯಾಮ್ ಭಟ್‌ ವಿರುದ್ಧ ಇರುವ ಕೆಲವು ಆರೋಪಗಳು

2012ರಲ್ಲಿ ಭಾಸ್ಕರ್ ರೆಡ್ಡಿ ಮತ್ತು ಇತರರಿಗೆ ಹಂಚಿಕೆಯಾಗಿದ್ದ 60*40 ಅಳತೆಯ ನಿವೇಶನಗಳನ್ನು ಬಿಡಿಎ ಆಯುಕ್ತರ ಆದೇಶದಂತೆ 30*40 ಅಳತೆಯ 12 ನಿವೇಶನಗಳನ್ನಾಗಿ ವಿಂಗಡಿಸಿ ಪ್ರತ್ಯೇಕ ನಿವೇಶನ ಸಂಖ್ಯೆಗಳನ್ನು ನೀಡಲಾಗಿತ್ತು. ಆದರೆ ಈ ಪ್ರಕ್ರಿಯೆ ಸಂಬಂಧ 60*40 ಅಳತೆಯ ನಿವೇಶನದ ಮೂಲ ಹಂಚಿಕೆದಾರರ ಒಪ್ಪಿಗೆಯನ್ನು ಸಹ ಪಡೆಯದೇ ಬಡಾವಣೆ ನಕ್ಷೆ ತಿದ್ದುಪಡಿ ಮಾಡಲಾಗಿತ್ತು. ಇದಕ್ಕೆ ಅಭಿಯಂತರರ ವಿಭಾಗ ಮತ್ತು ಆಡಳಿತ ವಿಭಾಗದ ಅಧಿಕಾರ ದುರುಪಯೋಗವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿತ್ತು.

ಅಲ್ಲದೇ ಈ ನಿವೇಶನಗಳನ್ನು ವಿಭಾಗ ಮಾಡಿ ನಂತರ ವಿಶೇಷ ಪ್ರೋತ್ಸಾಹ ಯೋಜನೆ ಅಡಿಯಲ್ಲಿ 30*40 ಅಳತೆ ನಿವೇಶನಗಳನ್ನು ವಿವಿಧ ವ್ಯಕ್ತಿಗಳಿಗೆ ಹಂಚಿಕೆ ಮಾಡಲಾಗಿತ್ತು. ಈ ಪೈಕಿ ಭಾಸ್ಕರ್ ರೆಡ್ಡಿ ಅವರಿಗೆ ಹಂಚಿಕೆಯಾಗಿದ್ದ ನಿವೇಶನದಲ್ಲಿ 30*40 ಅಳತೆ ವಿಸ್ತೀರ್ಣಕ್ಕೆ ಪರಿವರ್ತಿಸಿದ್ದ ನಿವೇಶನ (ಸಂಖ್ಯೆ 1607/69 ಎ)ಯನ್ನು ಪುಟ್ಟಲಕ್ಷ್ಮಮ್ಮ ಎಂಬುವರಿಗೆ ಹಂಚಿಕೆ ಮಾಡಲಾಗಿತ್ತು. ಅದೇ ರೀತಿ 1607/67 ಎ ನಿವೇಶನವನ್ನು ಗಂಗಮ್ಮ ಎಂಬುವರಿಗೆ, 1607/66 ಎ ನಿವೇಶನವನ್ನು ಕೃಷ್ಣ ಎಂಬುವರಿಗೆ, 1607/70 ಎ ನಿವೇಶನವನ್ನು ನಾಗರತ್ನಮ್ಮ ಅವರಿಗೆ, ನಿವೇಶನ ಸಂಖ್ಯೆ 201607/70 16073/71ನ್ನು ರಾಮಚಂದ್ರ ಪಣಿಕಲ್ ಅವರಿಗೆ ಹಂಚಿಕೆ ಮಾಡಲಾಗಿತ್ತು.

ಈ ಪ್ರಕರಣದಲ್ಲಿ  ಅಂದಿನ ಬಿಡಿಎ ಆಯುಕ್ತ ಟಿ ಶ್ಯಾಮ್‌ ಭಟ್‌,  ಅಂದಿನ ಉಪ ಕಾರ್ಯದರ್ಶಿ ಐಎಎಸ್ ಅಧಿಕಾರಿ ರೂಪಾ ಮತ್ತು ಇತರೆ ಅಧಿಕಾರಿಗಳು ನೇರ ಶಾಮೀಲಾಗಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಅಂಥ ಅಧಿಕಾರಿಗೆ ಈಗ ಸರ್ಕಾರ ಹೊಸ ಜವಾಬ್ದಾರಿ ನೀಡಿ ವಿವಾದಕ್ಕೆ ಗುರಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...