ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದರು.
ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋಂವಿಂದರಾಜು ಅವರ ನೇತೃತ್ವದಲ್ಲಿ ತಮ್ಮನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದ ಇಬ್ಬರೂ ಪಟುಗಳಿಗೆ ಶುಭಾಶಯ ಕೋರಿದ ಮುಖ್ಯಮಂತ್ರಿಗಳು, ಸನ್ಮಾನ ಮಾಡಿ ತಲಾ ಐದು ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ರಾಜೇಶ್ ಮತ್ತು ತರಬೇತುದಾರರಾದ ಬಿ.ಎನ್.ಸುಧಾಕರ್ ಅವರುಗಳು ಉಪಸ್ಥಿತರಿದ್ದರು.





