ಕಬ್ಬು ಬೆಳೆಗಾರರ ಸಂಕಷ್ಟ ಅರ್ಥಮಾಡಿಕೊಳ್ಳುವಲ್ಲಿ ಸಿದ್ದರಾಮಯ್ಯ ಸರ್ಕಾರ ವಿಫಲ: ಬಿ.ವೈ.ವಿಜಯೇಂದ್ರ

Date:

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ರೈತರ ಬಗ್ಗೆ ನೈಜ ಕಾಳಜಿಯಿಂದ ಕೆಲಸ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, “ರೈತರಿಗೆ ಸಹಕಾರಿ ಆಗುವಂಥ ಕಾರ್ಯಕ್ರಮಗಳನ್ನು ನೀಡುವಲ್ಲಿ ಸಿದ್ದರಾಮಯ್ಯರ ನೇತೃತ್ವದ ಸರಕಾರ ವಿಫಲವಾಗಿದೆ. ಅತಿವೃಷ್ಟಿ ಸಂದರ್ಭದಲ್ಲೂ ಕೃಷಿ ಸಚಿವರು, ಕಂದಾಯ ಸಚಿವರು, ಇಲಾಖೆಯ ಕಾರ್ಯದರ್ಶಿಗಳು ಯಾವುದೇ ಜಿಲ್ಲೆಗೆ ತೆರಳಿಲ್ಲ; ಅಲ್ಲಿನ ರೈತರ ಪರಿಸ್ಥಿತಿಯನ್ನು ಅಧ್ಯಯನ ಮಾಡುವ ಪ್ರಯತ್ನವನ್ನೂ ಮಾಡಿಲ್ಲ” ಎಂದು ಟೀಕಿಸಿದರು.

“ನೆರೆಯ ಮಹಾರಾಷ್ಟ್ರ ಸರಕಾರವು ರೈತರಿಗೆ ಪರಿಹಾರ ಘೋಷಿಸಿ, ನೀಡಿದ್ದರೂ ನಮ್ಮ ರಾಜ್ಯದಲ್ಲಿ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರವು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ. ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡಲು ಇವರಿಗೆ ಸಾಧ್ಯವಾಗಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಹಸೀಲ್ದಾರರ ಕಚೇರಿಗೆ ಹತ್ತಾರು ಬಾರಿ ಸುತ್ತಾಡಿದರೂ ಕೆಲಸ ಆಗದೇ ಮಂಡ್ಯದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಿನ್ನೆ ನಡೆದಿದೆ. ಮತ್ತೊಂದೆಡೆ ಕಬ್ಬು ಬೆಳೆಗಾರರು ಕಳೆದ ಐದಾರು ದಿನಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ. ಬೆಳಗಾವಿ, ಬಾಗಲಕೋಟೆ, ಬಿಜಾಪುರ ಭಾಗದ ಬೆಳೆಗಾರರು ರಾಜ್ಯ ಸರಕಾರದ ಗಮನ ಸೆಳೆಯುವ ಕೆಲಸ ಮಾಡಿದರೂ, ಪರಿಹಾರ ಕೊಟ್ಟಿಲ್ಲ; ಯಾವುದೇ ಸಚಿವರು ಬೆಳೆಗಾರರನ್ನು ಭೇಟಿ ಮಾಡುವ ಪ್ರಯತ್ನ ಮಾಡಿರಲಿಲ್ಲ” ಎಂದು ದೂರಿದರು.

“ನಾನು ಮೊನ್ನೆ ಹೋರಾಟ, ಪ್ರತಿಭಟನೆಯಲ್ಲಿ, ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿದ್ದೇನೆ. ನನ್ನ ಜನ್ಮದಿನವನ್ನು ಅಲ್ಲಿನ ಕಬ್ಬು ಬೆಳೆಗಾರರ ಜೊತೆ ಆಚರಿಸಿ ಬಂದಿದ್ದೇನೆ. ನಿನ್ನೆ ಹೋರಾಟದ ಬಿಸಿ ತಟ್ಟಿದ್ದರಿಂದ ಸಚಿವ ಎಚ್.ಕೆ.ಪಾಟೀಲರು ಅಲ್ಲಿಗೆ ಬಂದಿದ್ದಾರೆ. ಆದರೆ, ರೈತರ ಕೋರಿಕೆ ಈಡೇರಿಸಿಲ್ಲ; ಆ ನಿಟ್ಟಿನಲ್ಲಿ ಪ್ರಯತ್ನವನ್ನೂ ಮಾಡಿಲ್ಲ ಎಂದು ಟೀಕಿಸಿದರು.
ಪಾಟೀಲರು ನೀಡಿದ ಹೇಳಿಕೆಯನ್ನು ಬೆಂಗಳೂರಿನ ಎ.ಸಿ. ಕೊಠಡಿಯಲ್ಲಿ ಕುಳಿತೇ ಕೊಡಬಹುದಾಗಿತ್ತು. ಹೋರಾಟದ ಸ್ಥಳದಲ್ಲಿ ಬಂದು ಹೇಳುವ ಅವಶ್ಯಕತೆ ಇರಲಿಲ್ಲ ಎಂದು ಆಕ್ಷೇಪಿಸಿದರು. ಅಲ್ಲಿ ಬಂದಾಗ ಕಬ್ಬು ಬೆಳೆಗಾರರ ಪರಿಸ್ಥಿತಿ ಅರ್ಥ ಮಾಡಿಕೊಂಡು ಪರಿಹಾರ ಕಲ್ಪಿಸಬೇಕಿತ್ತು” ಎಂದರು.

“ಈಗಲೂ ಕಾಲ ಮಿಂಚಿಲ್ಲ; ಕೇಂದ್ರ ಸರಕಾರವನ್ನು ದೂರುವುದನ್ನು ಬದಿಗಿಡಿ; ಕೇಂದ್ರದ ಬಗೆಗಿನ ಮುಖ್ಯಮಂತ್ರಿಗಳ, ಸಕ್ಕರೆ ಸಚಿವರ ಹೇಳಿಕೆ ಅರ್ಧ ಸತ್ಯ ಮಾತ್ರ ಎಂದು ತಿಳಿಸಿದರು. ರಾಜ್ಯ ಸರಕಾರ ಮನಸ್ಸು ಮಾಡಿದರೆ, ಸಕ್ಕರೆ ಕಾರ್ಖಾನೆ ಮಾಲೀಕರನ್ನು ಕೂರಿಸಿಕೊಂಡು ಕಬ್ಬು ಬೆಳೆಗಾರರಿಗೆ ನ್ಯಾಯ ಕೊಡಲು ಸಾಧ್ಯವಿದೆ” ಎಂದು ತಿಳಿಸಿದರು.

“2014ರಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಯಡಿಯೂರಪ್ಪ ಅವರು ಸದನದ ಒಳಗೆ ಮತ್ತು ಹೊರಗಡೆ ಹೋರಾಟ ಮಾಡಿದ್ದರಿಂದ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರವು ಹೆಚ್ಚು ದರ ನಿಗದಿ ಪಡಿಸಿತ್ತು ಎಂದು ವಿವರಿಸಿದರು. ಇಷ್ಟೆಲ್ಲ ಉದಾಹರಣೆಗಳಿದ್ದರೂ ಸಿಎಂ ಕುರ್ಚಿಗೆ ಪೈಪೋಟಿ ನಡೆದಿದೆ; ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳೇ ಸ್ಥಳಕ್ಕೆ ತೆರಳಿ ಸಮಸ್ಯೆ ಪರಿಹರಿಸಬೇಕಿತ್ತು” ಎಂದರು.

“ಕಾಂಗ್ರೆಸ್ ಸರಕಾರವು ರೈತರಿಗೆ ಬರೆ ಎಳೆಯುವ ಕೆಲಸ ಮಾಡುತ್ತಿದೆ. ರೈತವಿರೋಧಿ ನಡವಳಿಕೆ ತೋರುತ್ತಿದ್ದು, ಇದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳು ತಾತ್ಸಾರ ಮಾಡದೇ, ಕಬ್ಬು ಬೆಳೆಗಾರರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಪರಿಹಾರ ಕೊಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...