ನಕಲಿ ವೋಟರ್‌ ಐಡಿ ಪ್ರಕರಣದಲ್ಲಿ ಸಿದ್ದರಾಮಯ್ಯ ಶಾಮೀಲು: ಬಿಜೆಪಿ ಆರೋಪ

Date:

  • ‘ಕಾಂಗ್ರೆಸ್‌ ಗೆಲುವಿನ ಹಿಂದೆ ಅನೈತಿಕತೆ, ಅಕ್ರಮ ಚಟುವಟಿಕೆಗಳು ಮಾತ್ರ ಇವೆ’
  • ‘ಸಿಎಂ ಆಪ್ತ ಭೈರತಿ ಸುರೇಶ್‌ ಬೆಂಬಲಿಗರಿಂದ ನಕಲಿ ವೋಟರ್‌ ಐಡಿ ತಯಾರಿಕೆ’

ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದ ಫಾರ್ಮುಲಾ ಈಗ ಬಯಲಾಗಿದೆ. ಮತದಾರರಿಗೆ ಮೋಸ ಮಾಡಲು ನುಡಿದಂತೆ ಜಾರಿಯಾಗದ ಗ್ಯಾರಂಟಿಗಳು ಅರ್ಧದಷ್ಟು ಸಹಾಯ ಮಾಡಿದರೆ ಉಳಿದವೆಲ್ಲಾ ನಕಲಿ ಮತಗಳು ಎಂದು ಬಿಜೆಪಿ ಕಿಡಿಕಾರಿದೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯ ಅವರ ಆಪ್ತ ಬೈರತಿ ಸುರೇಶ್‌ ಸಂಗಡಿಗರು ನಕಲಿ ವೋಟರ್‌ ಐಡಿ ಮಾಡುತ್ತಿದ್ದಾಗ ಸಿಕ್ಕಿಬಿದ್ದಿರುವುದು ಈ ಹಗರಣದಲ್ಲಿ ಸಿದ್ದರಾಮಯ್ಯರವರೇ ಶಾಮೀಲಾಗಿರುವುದಕ್ಕೆ ಸ್ಪಷ್ಟ ಸಾಕ್ಷಿ” ಎಂದು ಆರೋಪಿಸಿದೆ.

“ಮತದಾರರಿಂದ ದೇಶಾದ್ಯಂತ ತಿರಸ್ಕೃತವಾಗಿರುವ ಕಾಂಗ್ರೆಸ್‌ ಪಕ್ಷದ ಗೆಲುವಿನ ಹಿಂದೆ ಸದಾ ಇರುವುದು ಅನೈತಿಕತೆ ಮತ್ತು ಅಕ್ರಮ ಚಟುವಟಿಕೆಗಳು ಮಾತ್ರ” ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಪ್ರಕರಣ?

ನಕಲಿ ಮತದಾರರ ಗುರುತಿನ ಚೀಟಿ, ಆಧಾರ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್ಸ್‌ಗಳನ್ನು ಮಾಡಿಕೊಡುತ್ತಿರುವ ಆರೋಪದ ಮೇಲೆ ಸಚಿವ ಭೈರತಿ ಸುರೇಶ್‌ ಅವರ ಆಪ್ತ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದುಡ್ಡು ಕೊಟ್ಟರೆ ವೋಟರ್ ಐಡಿ, ಆಧಾರ್, ಡಿಎಲ್ ಮಾಡಿಕೊಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಹೆಬ್ಬಾಳದ ಕನಕ ನಗರದಲ್ಲಿರುವ ಎಂಎಸ್ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ದಾಳಿ ಮಾಡಿ, ಮೌನೇಶ್‌ ಕುಮಾರ್‌, ಭಗತ್‌ ಹಾಗೂ ರಾಘವೇಂದ್ರ ಅವರನ್ನು ವಶಕ್ಕೆ ಪಡೆದಿದ್ದಾರೆ.

ಇವರಲ್ಲಿ ಮೌನೇಶ್‌ ಎಂಬುವವ ಸಚಿವ ಭೈರತಿ ಸುರೇಶ್‌ ಅವರಿಗೆ ಆಪ್ತನಾಗಿದ್ದು, ಅವರ ಜೊತೆಗಿನ ಸಾಕಷ್ಟು ಫೋಟೋಗಳು ವೈರಲ್‌ ಆಗುತ್ತಿದೆ.

 

 

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...