ಹುಬ್ಬಳ್ಳಿ- ಧಾರವಾಡದಲ್ಲಿ ಏಮ್ಸ್ ಸ್ಥಾಪನೆ; ಕನ್ನಡಿಗರ ಕಿವಿಗೆ ಹೂವಿಟ್ಟ ಮೋದಿ: ಸಿದ್ದರಾಮಯ್ಯ ಟೀಕೆ

Date:

  • ‘ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಯ ಪ್ರಸ್ತಾವನೆ ಕೇಂದ್ರ ಸರ್ಕಾರ ಅಂಗೀಕರಿಸಿಲ್ಲ’
  • ‘ಸಬ್ ಅರ್ಬನ್ ರೈಲು ಯೋಜನೆಗೆ ಇನ್ನೂ ಕೇಂದ್ರ ಸರ್ಕಾರದ ಅನುದಾನವಿಲ್ಲ’

ಹುಬ್ಬಳ್ಳಿ- ಧಾರವಾಡದಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸರ್ಕಾರದ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ ಎಂದು 2022ರಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಕನ್ನಡಿಗರ ಕಿವಿಗೆ ಹೂವಿಟ್ಟಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಸರಣಿ ಮುಂದುವರಿಸಿರುವ ಅವರು, “ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಭಾರತಿ ಪ್ರವೀಣ್ ಅವರು 2023ರ ಆಗಸ್ಟ್ ನಲ್ಲಿ ರಾಜ್ಯಸಭೆಗೆ ನೀಡಿರುವ ಉತ್ತರದಲ್ಲಿ ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಯ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿಲ್ಲ ಎಂದಿದೆ” ಎಂದಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರೇ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಒತ್ತಾಯಿಸಿ ಎರಡೆರಡು ಬಾರಿ ನಿಮ್ಮ ಸರ್ಕಾರದ ಸಚಿವರಿಗೆ ಪತ್ರ ಬರೆದಿದ್ದೆ, ಈ ವರೆಗೆ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ. ಬೆಂಗಳೂರಿಗೆ ಮಂಜೂರಾದ ಏಮ್ಸ್ ಸಂಸ್ಥೆ ಕೇಂದ್ರ ಸರ್ಕಾರದ ಅನುದಾನ ಕಾಣದೆ ಘೋಷಣೆಗಷ್ಟೇ ಸೀಮಿತವಾಗಿದೆ.
ಕರ್ನಾಟಕಕ್ಕೆ ಮಾತ್ರ ಯಾಕೆ ಈ ಅನ್ಯಾಯ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಗ್ನಿ ದುರಂತ ತಡೆಗೆ ಕ್ರಿಯಾ ಯೋಜನೆ ಸಲ್ಲಿಸಿದ ಕಮಲ್‌ ಪಂತ್

“ಬೆಂಗಳೂರು ನಗರದ ಜನರಿಗೆ ಸುಗಮ ಸಂಚಾರ ಸೌಲಭ್ಯ ಕಲ್ಪಿಸುವ ಸಬ್ ಅರ್ಬನ್ ರೈಲು ಯೋಜನೆಯು ಕೇಂದ್ರ ಸರ್ಕಾರದ ಅನುದಾನವಿಲ್ಲದೆ ಇನ್ನೂ ಕನ್ನಡಿಗರ ಕನಸಾಗಿಯೇ ಉಳಿದಿದೆ. ಪ್ರಧಾನಿ ಮೋದಿ ಅವರೇ,
ಯಾಕೆ ಕನ್ನಡಿಗರಿಗೆ ಭರವಸೆ ನೀಡಿ ಈ ರೀತಿ ಪದೇ ಪದೇ ವಂಚಿಸುತ್ತಿದ್ದೀರಿ?” ಎಂದು ಕುಟುಕಿದ್ದಾರೆ.

“ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕಾದ ನಷ್ಟ ತುಂಬಿಕೊಡಲು 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ರೂ.5,495 ಕೋಟಿ ವಿಶೇಷ ಅನುದಾನ ನೀಡುವಂತೆ ಶಿಫಾರಸು ಮಾಡಿತ್ತು. ನಮ್ಮದೇ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿ, ವಿತ್ತ ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಶಿಫಾರಸನ್ನು ತಿರಸ್ಕರಿಸಿ, ನಾಡದ್ರೋಹ ಎಸಗಿದರು. ಪ್ರಧಾನಿ ಮೋದಿ ಅವರೇ, ಮೋದಿ ಮುಖ ನೋಡಿ ಮತ ನೀಡಿ ಎನ್ನುವ ನಿಮ್ಮವರ ಅನ್ಯಾಯಕ್ಕೆ ಕನ್ನಡಿಗರು ಯಾರ ಬಳಿ ನ್ಯಾಯ ಕೇಳಬೇಕು?” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...