ಮೋದಿ ವಿರುದ್ಧ ‘ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ’ ಅಭಿಯಾನ ಆರಂಭಿಸಿದ ಸಿದ್ದರಾಮಯ್ಯ

Date:

  • ಮೋದಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?: ಸಿಎಂ ಸಿದ್ದರಾಮಯ್ಯ
  • ‘ಒಕ್ಕೂಟ ವ್ಯವಸ್ಥೆಯ ಮೂಲ ಆಶಯಕ್ಕೆ ಧಕ್ಕೆ, ಹೀಗಾಗಿ ಇದರ ವಿರುದ್ಧ ಧ್ವನಿಯೆತ್ತಿದ್ದೇವೆ’

ಕರ್ನಾಟಕ ಎಂದು ಮರುನಾಮಕರಣಗೊಂಡು 50 ವಸಂತಗಳು ತುಂಬುತ್ತಿರುವ ಹೊತ್ತಿನಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ’ ಎಂಬ ಅಭಿಯಾನವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆರಂಭಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ನಮ್ಮ ನಾಡು ಕರ್ನಾಟಕ ಎಂದು ಮರುನಾಮಕರಣಗೊಂಡು 50 ವಸಂತಗಳು ತುಂಬುತ್ತಿರುವ ಹೊತ್ತಿನಲ್ಲಿ ಕರ್ನಾಟಕವು ಸಾಗಿಬಂದ ಹಾದಿಯನ್ನು ಸ್ಮರಿಸಿಕೊಳ್ಳಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ” ಎಂದು ಹೇಳಿದ್ದಾರೆ.

“ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾಗಿರುವ ಅನುದಾನ, ತೆರಿಗೆಯಲ್ಲಿ ಪಾಲು, ಬರ ಮತ್ತು ಜಿಎಸ್‌ಟಿ ಪರಿಹಾರ ಪೂರ್ಣಪ್ರಮಾಣದಲ್ಲಿ ಬಂದಿಲ್ಲ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳು ಮತ್ತು ಐಬಿಪಿಎಸ್‌ ನೇಮಕಾತಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಎದುರಿಸಲು ಅವಕಾಶ ನೀಡದೆ ಲಕ್ಷಾಂತರ ಯುವ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಮಾಡಲು ಪ್ರಯತ್ನಿಸಿ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಲಾಗುತ್ತಿದೆ. ನಾಡಿನ ರೈತರ ಜೀವನಾಧಾರವಾಗಿರುವ ಕಾವೇರಿ, ಮಹದಾಯಿ, ಕೃಷ್ಣಾ, ಭದ್ರಾಮೇಲ್ದಂಡೆ ಮೊದಲಾದ ನದಿಗಳ ನೀರಾವರಿ ಯೋಜನೆಗಳಿಗೆ ಬೆಂಬಲ ನೀಡದೆ, ಅನ್ನದಾತನನ್ನು ಸಂಕಷ್ಟಕ್ಕೆ ನೂಕಲಾಗಿದೆ” ಎಂದಿದ್ದಾರೆ.

“ಕನ್ನಡಿಗರೇ ಬೆವರು-ರಕ್ತ ಸುರಿಸಿ ಕಟ್ಟಿ ಬೆಳೆಸಿದ ಕರ್ನಾಟಕದ ಹೆಮ್ಮೆಯ ವಿಜಯಾ ಬ್ಯಾಂಕ್‌, ಸಿಂಡಿಕೇಟ್‌ ಬ್ಯಾಂಕ್‌, ಕಾರ್ಪೊರೇಷನ್‌ ಬ್ಯಾಂಕ್‌ ಮತ್ತು ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರು ಮೊದಲಾದ ಲಾಭದಲ್ಲಿದ್ದ ಬ್ಯಾಂಕುಗಳನ್ನು ನಷ್ಟದಲ್ಲಿದ್ದ ಬ್ಯಾಂಕುಗಳ ಜೊತೆ ವಿಲೀನ ಮಾಡಿ ಕನ್ನಡಿಗರಿಗೆ ದ್ರೋಹ ಎಸಗಲಾಗಿದೆ. ಹೀಗೆ ಕರ್ನಾಟಕದ ವಿರುದ್ಧ ಕೇಂದ್ರದ ಬಿಜೆಪಿ ಸರ್ಕಾರ‌ ನಡೆಸುತ್ತಿರುವ ಅನ್ಯಾಯದ ಸರಮಾಲೆ ಮುಂದುವರೆದಿದೆ, ನಿರಂತರವಾಗಿ ಸ್ವಾಭಿಮಾನಿ ಕನ್ನಡಿಗರನ್ನು ನಿರ್ಲಕ್ಷಿಸಿ ಅವಮಾನಿಸಲಾಗುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರದ ಈ ನಡವಳಿಕೆಗಳು ಒಕ್ಕೂಟ ವ್ಯವಸ್ಥೆಯ ಮೂಲ ಆಶಯಕ್ಕೆ ವಿರುದ್ಧವಾಗಿರುವುದರಿಂದ ಅದರ ವಿರುದ್ಧ ಧ್ವನಿಯೆತ್ತುವುದು ಅನಿವಾರ್ಯವೆಂದು ಭಾವಿಸಿ, ಇಂದಿನಿಂದ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಎಂಬ ಹ್ಯಾಷ್‌ಟ್ಯಾಗ್ ಅಡಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೇಡು ತೀರಿಸಿಕೊಳ್ಳುತ್ತಿದೆಯೇ? 

ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ, ಈವರೆಗೆ ಕೇಂದ್ರದಿಂದ ನಯಾಪೈಸೆ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಪ್ರಧಾನಿ ನರೇಂದ್ರ ಅವರೇ, ಜಗತ್ತಿನ ಕಷ್ಟ – ದು:ಖಕ್ಕೆಲ್ಲ ಮಿಡಿಯುವ ನಿಮ್ಮ ‘ವಿಶಾಲ ಹೃದಯ’ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ? ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ. ಇದಕ್ಕೆ ಉತ್ತರಿಸಿ ಮೋದಿ” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...