ಸಿದ್ದರಾಮಯ್ಯ ದಿಢೀರ್‌ ದೆಹಲಿ ಭೇಟಿ, ರಾಹುಲ್‌ ಗಾಂಧಿ ಜೊತೆ ಕ್ಲೋಸ್‌ ಡೋರ್ ಮೀಟಿಂಗ್

Date:

ಬಿಹಾರ ಚುನಾವಣೆಯ ಫಲಿತಾಂಶ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ಗರಿಗೆದರಿವೆ. ಶನಿವಾರ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ.

ಸಚಿವ ಸಂಪುಟ ಪುನಾರಚನೆ ಆಗುವ ಸಾಧ್ಯತೆ ದಟ್ಟವಾಗಿದ್ದು, ರಾಹುಲ್‌ ಗಾಂಧಿ ಅವರ ಜೊತೆ ಸಿದ್ದರಾಮಯ್ಯ ಕ್ಲೋಸ್‌ ಡೋರ್‌ ಮೀಟಿಂಗ್‌ ನಡೆಸಿದ್ದಾರೆ. ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮತ್ತೊಮ್ಮೆ ದೆಹಲಿಗೆ ಬಂದು ಎಐಸಿಸಿ ಅಧ್ಯಕ್ಷರ ಜೊತೆ ಚರ್ಚಿಸಿ, ಬಳಿಕ ಸಂಪುಟ ಪುನಾರಚನೆ ಮಾಡಿ ಅಂತ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರಂತೆ. ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದ ದಿನಾಂಕದಂದೇ ಸಚಿವ ಸಂಪುಟ ಪುನಾರಚನೆಗೆ ಮುಹೂರ್ತ ನೀಡಲಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್‌ ಗಾಂಧಿ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, “ಬಿಹಾರ ಎಲೆಕ್ಷನ್ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವೆಲ್ಲ ನಿಮ್ಮ ಜೊತೆ ಇದ್ದೇವೆ ಅಂತಾ ಹೇಳಿದ್ದೇವೆ. ಇವತ್ತಿನ ಮೀಟಿಂಗ್ ಅನ್ ಪ್ಲಾನ್ ಆಗಿತ್ತು” ಎಂದು ಹೇಳಿದರು.

“ನವೆಂಬರ್ ಕ್ರಾಂತಿ ಏನು? ಯಾವ ಕ್ರಾಂತಿಯೂ ಆಗುವುದಿಲ್ಲ. ನೀವು ಕೇಳ್ತಿದ್ದೀರಿ ಅಷ್ಟೇ. ಇದೆಲ್ಲ ಚರ್ಚೆ ಆಗುತ್ತಿರುವುದು ಮಾಧ್ಯಮದಲ್ಲಿ ಅಷ್ಟೇ” ಎನ್ನುವ ಮೂಲಕ ಪರೋಕ್ಷವಾಗಿ ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದುನ್ನು ತಿಳಿಸಿದ್ದಾರೆ.

ಡಿಸಿಎಂ ಡಿ ಕೆ ಶಿವಕುಮಾರ್‌ ಅವರಿಗೂ ಮುನ್ನವೇ ಸಿದ್ದರಾಮಯ್ಯ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದು ಸಹಜವಾಗಿಯೇ ಕುತೂಹಲ ಕೆರಳಿಸಿದೆ. ಈ ಮೂಲಕ ರಾಜ್ಯದಲ್ಲಿ ಏನೆಲ್ಲ ಚರ್ಚೆಯಾಗುತ್ತಿದೆ? ಈ ಚರ್ಚೆಯನ್ನು ಹೇಗೆ ಜೀವಂತವಿಡಲಾಗಿದೆ? ಹೀಗೆ ಎಲ್ಲವನ್ನು ರಾಹುಲ್‌ ಗಾಂಧಿ ಗಮನಕ್ಕೆ ಸಿಎಂ ವಿವರಿಸಿರುವ ಸಾಧ್ಯತೆ ಹೆಚ್ಚಿದೆ.

ರಾಹುಲ್‌ ಗಾಂಧಿ ಭೇಟಿ ಸಿದ್ದರಾಮಯ್ಯ ಅವರಿಗೆ ಒಂದಿಷ್ಟು ಬಲ ತಂದಿರುತ್ತದೆ. ಸಂಪುಟ ಪುನಾರಚನೆ ಮೂಲಕ ಸಿಎಂ ಕುರ್ಚಿ ಮತ್ತೆ ಭದ್ರವಾಗುವ ಸಾಧ್ಯತೆಯೇ ಹೆಚ್ಚಿದೆ.

ಬಿಹಾರ ಫಲಿತಾಂಶ ರಾಹುಲ್‌ ಗಾಂಧಿಗೆ ತೀವ್ರ ಬೇಸರ!

ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಮಹಾಘಟಬಂಧನ್ ಹೀನಾಯವಾಗಿ ಸೋತಿದ್ದಕ್ಕೆ ರಾಹುಲ್ ಗಾಂಧಿ ಬೇಸರಿಸಿಕೊಂಡಿದ್ದಾರಂತೆ. ಈ ವಿಚಾರವಾಗಿ ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಧೈರ್ಯ ಹೇಳಿ, “ಸೋಲಿನ ಬಗ್ಗೆ ಅತಿಯಾಗಿ ಬೇಸರ ಮಾಡಿಕೊಳ್ಳಬೇಡಿ. ಈ ವೇಳೆ ನಿಮ್ಮ ಜತೆ ನಾವಿದ್ದೇವೆ” ಎಂದು ಧೈರ್ಯ ತುಂಬಿದ್ದಾರಂತೆ.

ಬಿಹಾರದ ಚುನಾವಣೆ ಸೋಲಿನ ಬಳಿಕ ಕರ್ನಾಟಕ ಮಾತ್ರವಲ್ಲದೇ ತೆಲಂಗಾಣದ ಸಿಎಂ ಜೊತೆಗೂ ರಾಹುಲ್‌ ಗಾಂಧಿ ಚರ್ಚಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡಿ ಸಂದೇಶ ನೀಡಿದ್ದಾರೆ ಎನ್ನಲಾಗಿದೆ.

ಡಿ ಕೆ ಶಿವಕುಮಾರ್‌ ಸಹ ದೆಹಲಿ ಭೇಟಿ

ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಇಂದು ರಾತ್ರಿ ಹೈಕಮಾಂಡ್ ನಾಯಕರನ್ನು ಅವರು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...