ಮೀರ್ ಸಾದಿಕ್‌ನ ಆಧುನಿಕ ಅವತಾರಿ ಸಿದ್ದರಾಮಯ್ಯ: ಕುಮಾರಸ್ವಾಮಿ ಟೀಕೆ

Date:

  • ‘ದುರುದ್ದೇಶಕ್ಕಾಗಿ ನೆಲ ಡೊಂಕು ಮಾಡುವುದು ಕಷ್ಟವೇ?’
  • ‘ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ಚಿದಂಬರ ರಹಸ್ಯವೇ?’

ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು ಸಿದ್ದರಾಮಯ್ಯನವರೇ? ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ? ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಸಿಎಂಗೆ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರ ಟೀಕೆಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಮೀರ್ ಸಾದಿಕ್‌ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂತಹ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ. ಅದನ್ನೇ ನೀವು ಸುತ್ತಿಬಳಸಿ ಹೇಳುತ್ತಿದ್ದೀರಿ. ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ? ಹೇಳಿ, ಕುಮಾರಸ್ವಾಮಿ ಸರಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ?” ಎಂದು ಸವಾಲು ಹಾಕಿದರು.

“ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಅನ್ಯರಿಗೆ ಕಾಣದು ಎನ್ನುವಷ್ಟು ಕಿಲಾಡಿತನವೇ? ಇದು ಕಿಲಾಡಿತನವೋ ಅಥವಾ ಕಿಡಿಗೇಡಿತನವೋ? ತಮ್ಮ ಇಂಥ ಸಿದ್ದಲೀಲೆಗಳು ನಮಗೇನೂ ಹೊಸತಲ್ಲ. ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲ ಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೆದ್ದ ಗ್ಯಾರಂಟಿಯನ್ನು ಗೆಲುವನ್ನಾಗಿ ಮಾಡಿಕೊಳ್ಳದ ಮೂರ್ಖರು

“ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನೇ ಹಂಚಿಕೆ ಮಾಡುತ್ತಿದ್ದೆವು. ನೀವು ಕೇಳಬಹುದಿತ್ತು. ಕುತಂತ್ರ, ಕುಯುಕ್ತಿಯೇ ಸಿದ್ದಸೂತ್ರ ಆಗಿರುವಾಗ ಭಂಗಲೆ ಬಿಟ್ಟುಕೊಡುವಷ್ಟು ಉದಾರತೆ ನಿಮಗೆ ಎಲ್ಲಿಂದ ಬರಬೇಕು? ಇಷ್ಟಕ್ಕೂ ಇನ್ನೊಬ್ಬರು ಇದ್ದ, ಅದರಲ್ಲೂ ನನ್ನ ಸಂಪುಟದಲ್ಲಿ ಸಚಿವರಾಗಿದ್ದವರಿಗೆ ಹಂಚಿಕೆ ಆಗಿದ್ದ ಭಂಗಲೆಯಲ್ಲಿ ಸೇರಿಕೊಳ್ಳುವುದು ಸಮಾಜವಾದಿಗೆ ಅದೆಂಥ ಸಭ್ಯತೆ? ಅದೆಂಥ ಶೋಭೆ? ಛೀ! ಛೀ!” ಎಂದು ಲೇವಡಿ ಮಾಡಿದ್ದಾರೆ.

“ವೆಸ್ಟ್ ಎಂಡ್ ನಲ್ಲಿ ಇದ್ದ ಕಾರಣವನ್ನು ನಾನು ಈಗಾಗಲೇ ತಿಳಿಸಿದ್ದೇನೆ, ನೂರಾರು ಸಲ. ಆದರೆ, ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆಯನ್ನು ಬಹಿರಂಗ ಮಾಡುವಿರಾ? ನಿಮ್ಮ ಅಂತರಂಗವನ್ನು ಒಮ್ಮೆಯಾದರೂ ಬಹಿರಂಗ ಮಾಡಿ ಸಿದ್ದರಾಮಯ್ಯನವರೇ” ಎಂದು ಕುಟುಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...