ಸೋಮವಾರ ಸಿದ್ದರಾಮಯ್ಯರಿಂದ ಜನತಾ ‌ದರ್ಶನ; ಜನರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸಲು ಸಿದ್ಧತೆ

Date:

  • 2ನೇ ಬಾರಿ ಸಿಎಂ ಆದ ಬಳಿಕ ನಡೆಯುತ್ತಿರುವ ಮೊದಲ ಪೂರ್ಣಾವಧಿ ಜನತಾ ದರ್ಶನ
  • ಸಕಲ ಮುನ್ನೆಚ್ಚರಿಕೆ, ವೈದ್ಯ ಸಿಬ್ಬಂದಿ ಸ್ಥಳದಲ್ಲಿರಲು ಸೂಚನೆ, 20 ಕೌಂಟರ್ ಸ್ಥಾಪನೆ
  • ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರ್‌ಗಳು 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ನವೆಂಬರ್ 27 ರಂದು ಬೆಳಿಗ್ಗೆ 9.30 ಗಂಟೆಯಿಂದ ಗೃಹ ಕಚೇರಿ ಕೃಷ್ಣದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ.

ಇದಕ್ಕಾಗಿ ಮುಖ್ಯಮಂತ್ರಿ ಸಚಿವಾಲಯವು ಸಕಲ ಸಿದ್ಧತೆಗಳನ್ನು ನಡೆಸಿದ್ದು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಅವರು ಇಂದು ಸಂಜೆ ಗೃಹ ಕಚೇರಿ ಕೃಷ್ಣಾ ಕ್ಕೆ ಭೇಟಿ ನೀಡಿ ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಿದರು.

ಅಹವಾಲುಗಳನ್ನು ಸ್ವೀಕರಿಸಲು ಒಟ್ಟು 20 ಕೌಂಟರುಗಳನ್ನು ಸ್ಥಾಪಿಸಲಾಗಿದ್ದು, ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಕೌಂಟರ್ ಗಳನ್ನು ಮೀಸಲಿರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಯವರು ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸುವರು.

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯವರು ಈಗಾಗಲೇ ಸುತ್ತೋಲೆ ಹೊರಡಿಸಿ ಸರ್ಕಾರದ ಎಲ್ಲ ಕಾರ್ಯದರ್ಶಿಗಳು / ಇಲಾಖಾ ಮುಖ್ಯಸ್ಥರು ಖುದ್ದು ಹಾಜರಿರುವಂತೆ ಹಾಗೂ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾ/ ಉಪವಿಭಾಗ/ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಹಾಜರಿರುವಂತೆ ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿಗಾಗಿ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿಯನ್ನು ತರುವಂತೆ ಕೋರಲಾಗಿದೆ. ಇದರಿಂದ ತಂತ್ರಾಂಶದಲ್ಲಿ ದಾಖಲಿಸುವ ಅರ್ಜಿಗಳ ಸ್ಥಿತಿಗತಿಯನ್ನು ಪತ್ತೆಹಚ್ಚಲು ಅನುಕೂಲವಾಗಲಿದೆ.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾ ದಲ್ಲಿ ಕಳೆದ ಮೂರು ದಿನಗಳಿಂದ ಸಕಲ ಸಿದ್ಧತೆ ನಡೆಸಲಾಗುತ್ತಿದ್ದು, ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರಿಗೆ ಕುಡಿಯುವ ನೀರು, ಆಹಾರ ಹಾಗೂ ಶೌಚಾಲಯ ಮತ್ತು ಇತರ ವ್ಯವಸ್ಥೆಗಳನ್ನು ಸಜ್ಜುಗೊಳಿಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...