ಸಿಎಂ ನಿವಾಸ, ಬೆಂಗಳೂರು ಪಾಸ್‌ಪೋರ್ಟ್ ಕಚೇರಿಗೆ ಆತ್ಮಹತ್ಯಾ ಬಾಂಬ್ ದಾಳಿ ಬೆದರಿಕೆ

Date:

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ಮತ್ತು ಬೆಂಗಳೂರಿನ ಕೋರಮಂಗಲದಲ್ಲಿರುವ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಶುಕ್ರವಾರ ಮುಂಜಾನೆ ಆತ್ಮಹತ್ಯಾ ಬಾಂಬ್ ದಾಳಿ ಬೆದರಿಕೆ ಬಂದಿದೆ. ದೌಡಿ ಶಂಕರ್ ಜಿವಾಲ್’ ಎಂದು ಗುರುತಿಸಿಕೊಂಡಿರುವ ವ್ಯಕ್ತಿಯ ಹೆಸರಲ್ಲಿ ಬೆದರಿಕೆ ಇಮೇಲ್‌ ಬಂದಿದೆ. ಮಧ್ಯಾಹ್ನ 3:15ರ ಹೊತ್ತಿಗೆ ಬಾಂಬ್ ದಾಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು.

ಇನ್ನು ಇಮೇಲ್‌ನಲ್ಲಿ ಈ ಯೋಜಿತ ದಾಳಿಯನ್ನು ‘ಪವಿತ್ರ ಘಟನೆ’ ಎಂದು ಉಲ್ಲೇಖಿಸಲಾಗಿದೆ. ವಿವಾದಾತ್ಮಕ ತಮಿಳು ಯೂಟ್ಯೂಬರ್ ಸವುಕ್ಕು ಶಂಕರ್ ಬಂಧನ ಮತ್ತು 26/11 ಭಯೋತ್ಪಾದಕ ಅಜ್ಮಲ್ ಕಸಬ್‌ನ ಮರಣದಂಡನೆ ವಿರುದ್ಧವಾಗಿ ಈ ದಾಳಿ ನಡೆಸಲಾಗುತ್ತದೆ ಎಂದೂ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ತಿರುಪತಿ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಮೇಲ್ ಬಂದ ಕೆಲವೇ ಸಮಯದಲ್ಲಿ ಕೋರಮಂಗಲ ಪೊಲೀಸರು ಪಾಸ್‌ಪೋರ್ಟ್ ಕಚೇರಿ ಆವರಣದಲ್ಲಿ ಶೋಧ ನಡೆಸಿದ್ದಾರೆ. ಹಾಗೆಯೇ ಇದು ಹುಸಿ ಬೆದರಿಕೆ ಎಂದಿದ್ದಾರೆ. ಸದ್ಯ ಇಮೇಲ್‌ನ ಮೂಲವನ್ನು ಪತ್ತೆಹಚ್ಚಲು ಮತ್ತು ಕಳುಹಿಸಿದವರ ಗುರುತು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ನಡುವೆ ಮುನ್ನೆಚ್ಚರಿಕೆಯಾಗಿ ಮುಖ್ಯಮಂತ್ರಿಯವರ ನಿವಾಸ ಮತ್ತು ಪಾಸ್‌ಪೋರ್ಟ್ ಕಚೇರಿಯ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಾಂಬ್ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ. 2024ರ ಮಾರ್ಚ್‌ನಲ್ಲಿ ಸಿದ್ದರಾಮಯ್ಯ ಮತ್ತು ಇತರ ಇಬ್ಬರು ಸಂಪುಟ ಸಚಿವರಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು. ಇಡೀ ನಗರವೇ ಸ್ಫೋಟದಿಂದ ನಡುಗುತ್ತದೆ ಎಂದು ಸಂದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...