ಸಿಗಂದೂರು ಸೇತುವೆ ಉದ್ಘಾಟನೆ | ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ, ಸಿಎಂ ಸುಳ್ಳು ಆರೋಪ: ಆರ್ ಅಶೋಕ್

Date:

ಸಿಗಂದೂರು ಸೇತುವೆ ಉಲ್ಲಂಘನೆ ಕಾರ್ಯಕ್ರಮದಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್
ಅಶೋಕ್ ಆರೋಪಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಎಂ ಸಿದ್ದರಾಮಯ್ಯ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿರುವುದು ಸರಿ ಅಲ್ಲ. ಸೇತುವೆ ನಿರ್ಮಾಣದ ಕ್ರೆಡಿಟ್ ಬಿಜೆಪಿಗೆ ಹೋಗುತ್ತಿದೆ ಎನ್ನುವ ಹತಾಶೆಯಿಂದ ಸಿಎಂ ಗೊಂದಲ ಸೃಷ್ಟಿ ಮಾಡಲು ಹೊರಟಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ ಕೊಟ್ಟಿದ್ದಾರೆ. ಶಿಷ್ಟಾಚಾರದ ಪ್ರಕಾರ ಮುಖ್ಯಮಂತ್ರಿಗಳ ಹೆಸರು ಹಾಕಿದ್ದಾರೆ. ಮುಖ್ಯಮಂತ್ರಿಗಳಿಗೆ ಬೇರೆ ಪೂರ್ವ ನಿಗದಿತ ಕಾರ್ಯಕ್ರಮ ಇದ್ದರೆ, ಯಾವ ಕಾರ್ಯಕ್ರಮ ಮುಖ್ಯ, ಯಾವುದಕ್ಕೆ ಆದ್ಯತೆ ಕೊಡಬೇಕು ಅನ್ನೋದನ್ನ ಅವರೇ ನಿರ್ಧಾರ ಮಾಡಬೇಕು.
ಅದು ಬಿಟ್ಟು ಮುಖ್ಯಮಂತ್ರಿಗಳನ್ನ ಕೇಳಿ ಕಾರ್ಯಕ್ರಮದ ದಿನಾಂಕ, ಸಮಯ ನಿಗದಿ ಮಾಡಬೇಕು ಅನ್ನೋದು ಸರಿಯಲ್ಲ” ಎಂದರು.

“ಇಷ್ಟಕ್ಕೂ ರಾಜ್ಯ ಸರ್ಕಾರ ಯಾವ್ಯಾವ ಕಾರ್ಯಕ್ರಮಗಳಿಗೆ ವಿರೋಧ ಪಕ್ಷದ ನಾಯಕರು ಹಾಗೂ ಶಾಸಕರ ಸಲಹೆ ಕೇಳಿದೆ. ಕಳೆದ ಎರಡು ವರ್ಷದಲ್ಲಿ ವಿಪಕ್ಷ ನಾಯಕನಾದ ನನಗೆ ಬೆಂಗಳೂರಿನಲ್ಲಿ ಜರುಗಿದ ಸೇರಿದಂತೆ ಯಾವ ಕಾರ್ಯಕ್ರಮಕ್ಕೂ ಸಲಹೆಯನ್ನೂ ಕೇಳಿಲ್ಲ, ಆಹ್ವಾನವನ್ನೂ ಕೊಟ್ಟಿಲ್ಲ. ರಾಜ್ಯ ಸರ್ಕಾರ ಮಾಡಿರೋದನ್ನೇ ಕೇಂದ್ರ ಸರ್ಕಾರ ಮಾಡಿದೆ” ಎಂದು ಹೇಳಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ಅಸ್ತ್ರವಾಗದಿರಲಿ, ಬಡವರ ಬಗ್ಗೆ ವಿವೇಚನೆಯಿಂದ ಬಳಸಲಿ

“ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಾಗರದಲ್ಲಿ ಇದ್ದರೂ ಕಾರ್ಯಕ್ರಮಕ್ಕೆ ಹೋಗಿಲ್ಲ. ಮಾಧ್ಯಮದವರ ಮುಂದೆ ಕಾರ್ಯಕ್ರಮಕ್ಕೆ ಹೋಗುತ್ತೇನೆ ಎಂದು ಹೇಳಿ ಕಡೆ ಕ್ಷಣದಲ್ಲಿ ಗೈರು ಹಾಜರಾಗಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಶಿಷ್ಟಾಚಾರ ಪಾಲನೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ” ಎಂದು ಕುಟುಕಿದರು.

ಎರಡು ವರ್ಷದಿಂದ ನನಗೆ ಮನೆ ಕೊಟ್ಟಿಲ್ಲ

“ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ನನಗೆ ಅಧಿಕೃತ ಸರ್ಕಾರಿ ನಿವಾಸ ಕೊಡಿ ಎಂದು ಈವರೆಗೂ ರಾಜ್ಯ ಸರ್ಕಾರಕ್ಕೆ ಆರು ಬಾರಿ ಪತ್ರ ಬರೆದಿದ್ದೇನೆ. ಆದರೆ ಯಾವುದೇ ಪತ್ರಕ್ಕೂ ಉತ್ತರ ಬಂದಿಲ್ಲ. ಈ ಹಿಂದೆ ನಮ್ಮ ಬಿಜೆಪಿ ಸರ್ಕಾರ ಇದ್ದಾಗ ಅಂದಿನ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯನವರಿಗೆ ಯಾವ ಮನೆ ಕೊಡಲಾಗಿತ್ತೋ ಅದೇ ಮನೆ ಕೊಡಿ ಎಂದು ಕೇಳಿದ್ದೇನೆ. ಅದರಲ್ಲಿ ತಪ್ಪೇನಿದೆ. ಎರಡು ವರ್ಷ ಆದರೂ ಇದುವೆರಗೂ ವಿರೋಧ ಪಕ್ಷದ ನಾಯಕನಿಗೆ ಅಧಿಕೃತ ಸರ್ಕಾರಿ ಮನೆ ಕೊಟ್ಟಿಲ್ಲ. ಇದು ಕಾಂಗ್ರೆಸ್ ಪಕ್ಷ ಶಿಷ್ಟಾಚಾರ ಪಾಲನೆ ಮಾಡುವ ಪರಿ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...