BREAKING NEWS | ಕಾನ್ಫಿಡೆಂಟ್ ಗ್ರೂಪ್‌ನ ಸಿ ಜೆ ರಾಯ್ ಆತ್ಮಹತ್ಯೆ: ತನಿಖೆಗೆ ಎಸ್‌ಐಟಿ ರಚನೆ

Date:

ದಕ್ಷಿಣ ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ಸಿ ಜೆ ರಾಯ್ ಶುಕ್ರವಾರ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣದ ಸಮಗ್ರ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಲಾಗಿದೆ.

ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ವಂಶಿಕೃಷ್ಣ ಮತ್ತು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ. ತಂಡದಲ್ಲಿ ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಹಾಕೇ, ಹಲಸೂರು ಉಪ ವಿಭಾಗದ ಎಸಿಪಿ ಸುಧೀರ್, ಸಿಸಿಆರ್‌ಬಿ ಎಸಿಪಿ ರಾಮಚಂದ್ರ, ಅಶೋಕನಗರ ಇನ್‌ಸ್ಪೆಕ್ಟರ್ ಕೆ ಬಿ ರವಿ ಇದ್ದಾರೆ.

ಇದನ್ನು ಓದಿದ್ದೀರಾ? ಡಾ. ಸಿ ಜೆ ರಾಯ್ ಆತ್ಮಹತ್ಯೆ: ಸಮಗ್ರ ತನಿಖೆಗೆ ಕೇರಳ ಸಂಸದ ರಹೀಮ್ ಆಗ್ರಹ, ಮೋಹನ್‌ಲಾಲ್ ಸಂತಾಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಾನ್ಫಿಡೆಂಟ್ ಗ್ರೂಪ್‌ನ ಕಚೇರಿ ಮೇಲೆ ದಾಳಿ ನಡೆಸಿದ್ದ ಸಂದರ್ಭದಲ್ಲಿ ಸಿ ಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ರಾಯ್ ಮೂಲತಃ ಕೇರಳದವರಾದ ಕಾರಣ ಕೇರಳದಲ್ಲಿಯೂ ಈ ಪ್ರಕರಣ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ಕೇಂದ್ರ ಸಂಸ್ಥೆಯ ಒತ್ತಡದಿಂದಾಗಿ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬ ಆಯಾಮದಲ್ಲಿ ತನಿಖೆ ನಡೆಯಬೇಕು ಎಂದು ಕೇರಳ ಸಂಸದ, ಸಿಪಿಐಎಂ ನಾಯಕ ಎಎ ರಹೀಮ್ ಆಗ್ರಹಿಸಿದ್ದಾರೆ.

ಇದೀಗ ಎಸ್ಐಟಿ ತಂಡವು ಕೇಂದ್ರ ಸಂಸ್ಥೆಯ ಒತ್ತಡ, ತೆರಿಗೆ ವಂಚನೆ ಮೊದಲಾದ ಆಯಾಮಗಳಿಂದ ತನಿಖೆ ನಡೆಸಲಿದೆ. ರಾಯ್ ಮೊಬೈಲ್ ಫೋನ್, ಬ್ಯಾಂಕ್ ವಹಿವಾಟು ಎಲ್ಲವನ್ನೂ ಪರಿಶೀಲಿಸಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...