ಧರ್ಮಸ್ಥಳ ಪ್ರಕರಣ | ಸತ್ಯ ಹೊರ ಬರಬೇಕೆಂಬ ಕಾರಣಕ್ಕೆ ಎಸ್ಐಟಿ ರಚನೆ: ಸಿದ್ದರಾಮಯ್ಯ

Date:

ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ಬೇರೆ ತನಿಖೆ ಅಗತ್ಯವಿಲ್ಲ ಎಂದು ನಾನು ಭಾವಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್ ಐ.ಟಿ ರಚನೆಯನ್ನು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಸ್ವಾಗತಿಸಿದ್ದಾರೆ. ಸತ್ಯ ಹೊರ ಬರಬೇಕೆಂಬ ಕಾರಣದಿಂದ ಎಸ್ಐಟಿ ರಚನೆ ಮಾಡಲಾಗಿದೆ. ಇಲ್ಲದಿದ್ದರೆ ಧರ್ಮಸ್ಥಳದ ಬಗ್ಗೆ ಯಾವಾಗಲೂ ತೂಗುಗತ್ತಿ ಇರುತಿತ್ತು. ಈ ಸಂದೇಹವನ್ನು ಹೋಗಲಾಡಿಸಲು ಎಸ್.ಐ.ಟಿ ರಚನೆ ಮಾಡಲಾಗಿದೆ. ಫೀರ್ಯಾದುದಾರ ನ್ಯಾಯಾಲಯದ ಮುಂದೆ ಹೋಗಿ 164 ಹೇಳಿಕೆಯನ್ನು ನೀಡಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಎಸ್‌ಐಟಿ ರಚಿಸಬೇಕೆಂದು ಒತ್ತಾಯವನ್ನು ಮಾಡಿದ್ದರು. ವಿಪಕ್ಷಗಳು ಕೂಡ ಇದನ್ನು ಸ್ವಾಗತಿಸಿದ್ದರು ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಗೆದಷ್ಟೂ ಆಳವಾಗುತ್ತಿದೆ ಧರ್ಮಸ್ಥಳ ಪ್ರಕರಣ; ಸೌಜನ್ಯಳಿಗೆ ಸಿಗಲಿ ನ್ಯಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸರ್ಕಾರ ಜಿ.ಎಸ್.ಟಿ ಎರಡು ಸ್ಲ್ಯಾಬ್ ಮಾಡುವುದರಿಂದ ಪ್ರತಿ ವರ್ಷ 15 ಸಾವಿರ ಕೋಟಿ ನಷ್ಟವಾಗಬಹುದೆಂದು ಅಂದಾಜಿಸಲಾಗಿದೆ. ತರ್ಕಬದ್ಧಗೊಳಿಸುವುದನ್ನು ಸ್ವಾಗತಿಸುತ್ತೇವೆ ಆದರೆ ಹಣಕಾಸಿನ ರಕ್ಷಣೆಯಾಗಬೇಕೆನ್ನುವುದು ನಮ್ಮ ಉದ್ದೇಶ. ಅದಕ್ಕಾಗಿ ಎಂಟು ರಾಜ್ಯಗಳು ದೆಹಲಿಯಲ್ಲಿ ಚರ್ಚೆ ಮಾಡಿದ್ದು, 2.50 ಲಕ್ಷ ಕೋಟಿ ರೂ. ಇಡೀ ರಾಜ್ಯದಲ್ಲಿ ಸಂಗ್ರಹವಾಗುತ್ತದೆ. 15 ಸಾವಿರ ಕೋಟಿ ನಷ್ಟವಾಗುವುದು ದೊಡ್ಡ ಮೊತ್ತ ಎಂದರು.

2017 ರಲ್ಲಿ ಜಿಎಸ್ ಟಿ ಜಾರಿಯಾದಾಗ 5 ವರ್ಷ ಮಾತ್ರ ಪರಿಹಾರ ನೀಡುವುದಾಗಿ ಹೇಳಿದ್ದರು. ಈಗ ಸುಮಾರು ಶೇ. 12 ತೆರಿಗೆ ಬೆಳವಣಿಗೆಯಾಗಿದೆ. ಲಕ್ಷುರಿ(ಸಿನ್ ಗೂಡ್ಸ್ ) ವಸ್ತುಗಳಾದ ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಬೆಂಜ್ ಕಾರುಗಳಲ್ಲಿ ಓಡಾಡುವವ ಮೇಲೆ ಸೆಸ್ ಹಾಕಿ ನಮಗೆ ಪರಿಹಾರ ಕೊಡಿ ಎಂದು ಸಲಹೆ ನೀಡಿದ್ದೇವೆ. ಸಚಿವ ಕೃಷ್ಣಭೈರೇಗೌಡ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅವರೇ ಈಗ ಎಂಟು ರಾಜ್ಯಗಳ ಆರ್ಥಿಕ ಸಚಿವರೊಂದಿಗೆ ಸಭೆ ನಡೆಸಿದ್ದಾರೆ.
ಸೆಪ್ಟೆಂಬರ್ 3 ಮತ್ತು 4 ರಂದು ನಡೆಯಲಿರುವ ಸಭೆಯಲ್ಲಿ ಇದನ್ನು ಪ್ರಸ್ತಾಪ ಮಾಡಲಿದ್ದಾರೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...