ಸ್ಮಾರ್ಟ್ ಮೀಟರ್ | ವಿದ್ಯುತ್ ಉಚಿತ ಕೊಡಿ ಎಂದು ಯಾರು ಕೇಳಿದ್ದರು: ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ

Date:

ಹೊಸ ಮನೆಗಳಿಗೆ ಸ್ಮಾರ್ಟ್ ವಿದ್ಯುತ್ ಮೀಟರ್ ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸುತ್ತಿರುವುದು ಮತ್ತು ಸ್ಮಾರ್ಟ್ ಮೀಟರ್‌ಗಳ ಬೆಲೆ ನಿಗದಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಹೊಸದಾಗಿ ನಿರ್ಮಾಣಗೊಂಡಿರುವ ತಮ್ಮ ಮನೆಗೆ ಸ್ಮಾರ್ಟ್ ಮೀಟರ್ ಹಾಕಿಸಿಕೊಳ್ಳುವಂತೆ ಒತ್ತಾಯಿಸಿ ಬೆಸ್ಕಾಂ ದೊಡ್ಡಬಳ್ಳಾಪುರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನೀಡಿದ್ದ ನೋಟಿಸ್ ಪ್ರಶ್ನಿಸಿ ಸ್ಥಳೀಯ ನಿವಾಸಿ ಜಯಲಕ್ಷ್ಮೀ ಎಂಬವರು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ನ್ಯಾ । ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಅಷ್ಟಕ್ಕೂ ವಿದ್ಯುತ್ ಉಚಿತವಾಗಿ ಕೊಡಿ ಎಂದು ನಿಮ್ಮನ್ನು ಯಾರು ಕೇಳಿದ್ದರು? ಇದೆಲ್ಲವೂ ಉಚಿತ ಗ್ಯಾರಂಟಿಗಳಿಂದ ಎದುರಾಗಿರುವ ಸಮಸ್ಯೆಗಳೇ ಎಂದು ಸರಕಾರವನ್ನು ತೀಕ್ಷ್ಮವಾಗಿ ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸುತ್ತಿರುವುದು ಹಾಗೂ ಅದಕ್ಕೆ ಹೆಚ್ಚುವರಿ ಶುಲ್ಕ ಪಡೆಯುತ್ತಿರುವ ಕ್ರಮದ ಬಗ್ಗೆ ಸರಕಾರ ಮತ್ತು ಬೆಸ್ಕಾಂ ಅನ್ನು ತರಾಟೆಗೆ ತೆಗೆದುಕೊಂಡಿತು. ಅಲ್ಲದೇ ಜಯಲಕ್ಷ್ಮೀಗೆ ದೊಡ್ಡಬಳ್ಳಾಪುರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನೀಡಿದ್ದ ನೋಟಿಸ್‌ಗೆ ತಡೆ ನೀಡಿ ಆದೇಶಿಸಿತು.

ವಿಚಾರಣೆ ವೇಳೆ ಪ್ರಕರಣವನ್ನು ಗಮನಿಸಿದ ನ್ಯಾಯಪೀಠ, ಇದೆಲ್ಲವೂ ಉಚಿತ ಗ್ಯಾರಂಟಿಗಳಿಂದ ಎದುರಾಗಿರುವರ ಸಮಸ್ಯೆಗಳೇ ಎಂದು ಸರಕಾರದ ಪರ ವಕೀಲರನ್ನು ಪ್ರಶ್ನಿಸಿತು. ಉಚಿತವಾಗಿ ವಿದ್ಯುತ್ ಕೊಡಿ ಎಂದು ನಿಮ್ಮನ್ನು ಯಾರು ಕೇಳಿದ್ದರು? ಏಕಾಏಕಿ ಈ ರೀತಿ ದರ ಏರಿಕೆ ಮಾಡಿದರೆ ಬಡವರು ಎಲ್ಲಿಗೆ ಹೋಗಬೇಕು? ಎಲ್ಲರೂ ಹೆಚ್ಚು ಹಣ ಕೊಟ್ಟು ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕು ಎಂದರೆ ಬಡವರು ಏನು ಮಾಡಬೇಕು ಎಂದು ಪ್ರಶ್ನಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...