ಪೊಲೀಸರಿಗೆ ಸಾಮಾಜಿಕ ಬದ್ಧತೆ ಮುಖ್ಯ, ಅಂದಾಗ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಸಿದ್ದರಾಮಯ್ಯ

Date:

ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಶನಿವಾರ ರಾಜಭವನದಲ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

“ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳ ಕಾರ್ಯ ಮತ್ತು ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲವರ್ಗದವರಿಗೆ ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲವಾಗಬೇಕು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದು ವಿಶಿಷ್ಠ ಸೇವೆ ಸಲ್ಲಿಸಿರುವ ಪೊಲೀಸರಿಗೆ ಕೊಡಮಾಡಲಾದ ಸೇವಾಪದಕದ ಹಿಂದೆ ಅವರ ಸೇವಾ ಮನೋಭಾವ, ಪ್ರಮಾಣಿಕತೆ ಹಾಗೂ ಪರಿಶ್ರಮವಿರುತ್ತದೆ. ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸಿದಾಗ ಮಾತ್ರ ಇಂತಹ ಸಾಧನೆ ಸಾಧ್ಯವಾಗುತ್ತದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಜನರ ಆಸ್ತಿಪಾಸ್ತಿ ಸಂರಕ್ಷಿಸುವುದು ಪೊಲೀಸರ ಜವಾಬ್ದಾರಿ. ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಸುವಲ್ಲಿ ಪೊಲೀಸರ ಪಾತ್ರ ಅತ್ಯಂತ ಮಹತ್ವವಾದುದು. ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟುವ ಜವಾಬ್ದಾರಿ ಸರ್ಕಾರ ಹಾಗೂ ಪೊಲೀಸಿನವರದ್ದಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಬಹಳಷ್ಟು ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ” ಎಂದು ಹೇಳಿದರು.

ಸಾಮಾನ್ಯ ಜನರಿಗೆ ನ್ಯಾಯ ಸಿಗುವಂತಾಗಬೇಕು

“ಪೊಲೀಸರಿಗೆ ಸಾಮಾಜಿಕ ಬದ್ದತೆಯಿದ್ದರೆ, ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಸಮಾಜದಲ್ಲಿನ ಅಸಮಾನತೆಗಳನ್ನು ತೊಡೆದು ಸಂವಿಧಾನ ನೀಡುವ ರಕ್ಷಣೆಯನ್ನು ಜಾರಿಗೊಳಿಸುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಬಲಾಢ್ಯರ ಕೈಯ್ಯಲ್ಲಿ ಅಧಿಕಾರವಿದ್ದರೆ, ದುರ್ಬಲ ವರ್ಗದವರ ಜೀವನ ದುಸ್ತರವಾಗುತ್ತದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅವರು ತಿಳಿಸಿದ್ದರು. ದುರ್ಬಲವರ್ಗಗಳ ಮೇಲಾಗುವ ದೌಜರ್ನ್ಯಗಳನ್ನು ಪೊಲೀಸರು ತಡೆಗಟ್ಟಬೇಕಿದೆ. ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿಕೊಡಬೇಕು. ಪೊಲೀಸರ ಸಂಖ್ಯೆಯ ಬಗ್ಗೆ ಗಮನಹರಿಸದೇ, ಅವರು ತಡೆಗಟ್ಟಿರುವ ಅಪರಾಧಗಳೆಷ್ಟು ಎಂದು ಪರಿಗಣಿಸಬೇಕಾಗಿದೆ” ಎಂದರು.

“ಪ್ರಶಸ್ತಿ ವಿಜೇತರ ಸಾಧನೆ ಶ್ಲಾಘನೀಯವಾಗಿದ್ದು, ಇತರರಿಗೆ ಮಾದರಿಯಾಗಬೇಕು. ಸಮಾಜದಲ್ಲಿನ ನ್ಯೂನ್ಯತೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಪೊಲೀಸ್ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಆತ್ಮವಿಮರ್ಶೆ ಮಾಡಿಕೊಂಡು ಉತ್ತಮ ಸೇವೆ ಸಲ್ಲಿಸಬೇಕು” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...