ಸೆ.22ರಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ: ಜನರು ಭಾಗಿಯಾಗಲು ಸಿಎಂ ಕರೆ

Date:

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆ.22ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ಪ್ರಾರಂಭಿಸಲಿದೆ. ವೈಜ್ಞಾನಿಕವಾಗಿ ಸಮೀಕ್ಷೆ ನಡೆಯಬೇಕು. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ಜನರು ಸಹಕರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಕರೆದು ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭಗೊಳ್ಳುವ ಕುರಿತು ಮಾಹಿತಿ ನೀಡಿದರು.

‌”ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂದನ್ ಆರ್‌ ನಾಯ್ಕ್ ಅವರ ಸಮಿತಿ ವೈಜ್ಞಾನಿಕ‌ ಮಾನದಂಡದಲ್ಲಿ ಸಮೀಕ್ಷೆ ನಡೆಸಿ ಡಿಸೆಂಬರ್ ಒಳಗೆ ವರದಿ ನೀಡಲಿದ್ದಾರೆ. ಎಲ್ಲ ಜಾತಿ-ಧರ್ಮದವರ ದತ್ತಾಂಶ ಅಂಗೈಯಲ್ಲಿದ್ದರೆ ಮಾತ್ರ ಸಾಮಾಜಿಕ ನ್ಯಾಯದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ. ನಾವು ಬಡತನ, ನಿರುದ್ಯೋಗ, ಅನಕ್ಷರತೆ ಹೋಗಲಾಡಿದಲು ಸಂವಿಧಾನದ ಕಲಂ 15(), 16(5) ಅಡಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1,75,000 ಶಿಕ್ಷಕರಿಂದ ಸಮೀಕ್ಷೆ

“ಹೊಸದಾಗಿ 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿ ಗತಿ ಅರಿಯಲು ಈ ಸಮೀಕ್ಷೆ ನಡೆಸಲಾಗುತ್ತಿದೆ. ಆದಷ್ಟೂ ಜಾಗ್ರತೆಯಿಂದ ಸಮೀಕ್ಷೆ ನಡೆಸಿ ವರದಿ ಕೊಡಲು ಸೂಚನೆ ನೀಡಿದ್ದೇವೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7 ರವರೊಳಗೆ ಸಮೀಕ್ಷೆ ಕಾರ್ಯ ನಡೆಯುತ್ತದೆ. 1,75,000 ಸರ್ಕಾರಿ ಶಾಲಾ ಶಿಕ್ಷಕರುಗಳನ್ನು ವಿಶೇಷ ಭತ್ಯೆ ನೀಡಿ ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದೇವೆ. ಶಿಕ್ಷಕರ ಭತ್ಯೆಯೇ 325 ಕೋಟಿ ರೂ. ಆಗಲಿದೆ. ಓರ್ವ ಶಿಕ್ಷಕರಿಗೆ 20 ಸಾವಿರವರೆಗೆ ಗೌರವ ಸಂಭಾವನೆ ನೀಡಲಾಗುವುದು. ಸದ್ಯ 425 ಕೋಟಿ ಹಣ ಕೊಡುವುದಾಗಿ ಹೇಳಿದ್ದೇವೆ. ಹೆಚ್ಚಿನ‌ ಹಣದ ಅಗತ್ಯಬಿದ್ದರೆ ಕೊಡುತ್ತೇವೆ” ಎಂದು ತಿಳಿಸಿದರು.

“ಮನೆ ಮನೆಗೂ ಕರೆಂಟ್ ಇದೆ. ಮೀಟರ್ ರೀಡರ್‌ಗಳು jio tag ಮಾಡುವ ಜೊತೆಗೆ 2 ಕೋಟಿ ಮನೆಗಳಿಗೆ ಪ್ರತ್ಯೇಕ ಗುರುತಿನ ನಂಬರ್ ನೀಡಿ ಸ್ಟಿಕ್ಕರ್ ಅಂಟಿಸುತ್ತಾರೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಮೊಬೈಲಿಗೆ ಲಿಂಕ್ ಮಾಡುವುದರ ಜೊತೆಗೆ ಮೊಬೈಲ್ ಇಲ್ಲದ ಮನೆಗಳಿಗೂ ಪರ್ಯಾಯ ಮಾರ್ಗ ಹುಡುಕಿಕೊಂಡಿದ್ದೇವೆ. ಒಟ್ಟು 60 ಪ್ರಶ್ನೆಗಳನ್ನು ಫೈನಲ್ ಮಾಡಲಾಗಿದ್ದು, ಈ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದು ಶಿಕ್ಷಕರು ಸಮೀಕ್ಷೆ ನಡೆಸಲಿದ್ದಾರೆ. ಪ್ರತಿ ಶಿಕ್ಷಕರಿಗೆ 120ರಿಂದ 150ಮನೆಗಳ ವ್ಯಾಪ್ತಿಯನ್ನು ನಿಗದಿಪಡಿಸಲಾಗಿದೆ. ಹಿಂದಿನ ಕಾಂತರಾಜ್‌ ಆಯೋಗವು 54 ಪ್ರಶ್ನೆಗಳನ್ನು ಕೇಳಿತ್ತು” ಎಂದು ಹೇಳಿದರು.

“ರಾಜ್ಯದ ಜನತೆ ಒಬ್ಬರೂ ತಪ್ಪಿಸಿಕೊಳ್ಳದೆ ಕಡ್ಡಾಯವಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು ಎಂದು ನಾನು ಈ ಮೂಲಕ ವಿನಂತಿಸಿಕೊಳ್ಳುವೆ. ಸಹಾಯವಾಣಿ ಸಂಖ್ಯೆ (8050770004) ತೆರೆದಿದ್ದೇವೆ. ಈ ನಂಬರ್‌ಗೆ ಕರೆ ಮಾಡಿ ಕೂಡ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು. ಹಾಗೆಯೇ ಆನ್‌ ಲೈನ್‌ ಮೂಲಕವೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು” ಎಂದರು.

“ಆಶಾ ಕಾರ್ಯಕರ್ತೆಯರು ನಾಳೆಯಿಂದಲೇ (ಸೆ.13) ಮನೆ ಮನೆಗೆ ಹೋಗಿ 60 ಪ್ರಶ್ನೆಗಳ ನಮೂನೆಯನ್ನು ಪ್ರತೀ ಮನೆಗೆ ತಲುಪಿಸುತ್ತಾರೆ. ಬಳಿಕ ಶಿಕ್ಷಕರು ಸಮೀಕ್ಷೆಗೆ ಬರುತ್ತಾರೆ. ಯಾರೂ ಸಮೀಕ್ಷೆಯಿಂದ ಹೊರಗೆ ಉಳಿಯದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಜಾತಿ ಹೇಳಿಕೊಳ್ಳಲು ಕಷ್ಟ ಆದವರು ಸಹಾಯವಾಣಿಗೆ ಕರೆ ಮಾಡಿ ಜಾತಿ ಹೇಳಬಹುದು. ಯಾವುದೇ ನ್ಯೂನ್ಯತೆಗಳು ಇಲ್ಲದಂತೆ, ಹಿಂದಿನ ಸಮೀಕ್ಷೆಗಳಲ್ಲಿ ಎದುರಾದ ಯಾವುದೇ ತಾಂತ್ರಿಕ ಸಮಸ್ಯೆ ಈ ಬಾರಿ ಇಲ್ಲದಂತೆ ಸಿದ್ಧತೆ ಮಾಡಿಕೊಂಡಿದ್ದೇವೆ. ಮತಾಂತರಗೊಂಡವರು ಅಥವಾ ಜಾತಿ ಗೊಂದಲ ಇದ್ದದ್ದನ್ನು ಆಯೋಗದ ತಜ್ಞರ ತಂಡ ವಿಶ್ಲೇಷಣೆ ಮಾಡಿ ತೀರ್ಮಾನಿಸುತ್ತಾರೆ” ಎಂದು ತಿಳಿಸಿದರು.

ಸಿಎಂ ಸುದ್ದಿಗೋಷ್ಠಿಯ ಪ್ರಮುಖ ಅಂಶಗಳು

2015ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿದ್ದರು. ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿ 10ವರ್ಷ ಆದ ಕಾರಣ ಹೊಸ ಸಮೀಕ್ಷೆಗೆ ತೀರ್ಮಾನ ಮಾಡಿ ಆ ಕಾರ್ಯವನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗ ವಹಿಸಲಾಗಿದೆ.

ಸಮಾಜದಲ್ಲಿ ಅನೇಕ ಜಾತಿಗಳು ಇದ್ದು, ವೈರುಧ್ಯತೆಯಿಂದಾಗಿ ಕೂಡಿದ್ದು, ಅಸಮಾನತೆ ಈಗಲೂ ಇದೆ. ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುತ್ತದೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಬೇಕು ಎಂದು ಸಂವಿಧಾನ ಹೇಳುತ್ತದೆ. ಡಾ.ಅಂಬೇಡ್ಕರ್ ಅವರು ಹೇಳಿದಂತೆ 1950 ಜನವರಿ 26ರಂದು ಜಾರಿಯಾದಾಗ, ನಾವು ವೈರುಧ್ಯತೆಯಿಂದ ಕೂಡಿದ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ನಮ್ಮ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ, ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವು ಅಸಮಾನತೆಯನ್ನು ತೊಲಗಿಸಲೇಬೇಕು ಎಂದು ಹೇಳಿದ್ದರು.

ಸ್ವಾತಂತ್ರ್ಯ ದೊರೆತು ಇಷ್ಟು ವರ್ಷಗಳಾದರೂ ಅಸಮಾನತೆಯನ್ನು ಸಂಪೂರ್ಣವಾಗಿ ತೊಲಗಿಸಲು ನಮಗೆ ಸಾಧ್ಯವಾಗಿಲ್ಲ. ಸಮಾನತೆಯನ್ನು , ಸಮಾನ ಅವಕಾಶ ಒದಗಿಸುವ ನಿಟ್ಟಿನಲ್ಲಿ ನಾವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದೇವೆ. ರಾಜ್ಯದಲ್ಲಿ ಸುಮಾರು 7ಕೋಟಿ ಜನಸಂಖ್ಯೆಯಿದ್ದು, ಸುಮಾರು 2ಕೋಟಿಯಷ್ಟು ಕುಟುಂಬಗಳಿವೆ. ಇವರೆಲ್ಲರಿಗೂ ಸಮಾನ ಅವಕಾಶ ಒದಗಿಸುವುದು ನಮ್ಮ ಕರ್ತವ್ಯ.

ಪ್ರತಿಯೊಬ್ಬರ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಸ್ಥಿತಿಗತಿ ಗೊತ್ತಾದರೆ ಮಾತ್ರ ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನ ಸಾಧ್ಯವಿದೆ. ದತ್ತಾಂಶ ಸರಿಯಾಗಿ ಗೊತ್ತಾದರೆ ಮಾತ್ರ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಸಾಧ್ಯ.

ಗ್ಯಾರಂಟಿ ಯೋಜನೆಗಳ ಮೂಲಕ ಅಸಮಾನತೆಯನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಲು ಪ್ರಯತ್ನ ಮಾಡಿದ್ದೇವೆ. ನಾವು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಭಾಗ್ಯ ಯೋಜನೆಗಳ ಮೂಲಕ ಸಹ ಇದನ್ನು ಸಾಧಿಸಲು ಪ್ರಯತ್ನಿಸಿದ್ದೇವೆ. ಹಿಂದುಳಿದವರ ಬಡತನ, ನಿರುದ್ಯೋಗ, ಅನಕ್ಷರತೆ ಹೋಗಬೇಕಾದರೆ ವಿಶೇಷ ಪ್ರಯತ್ನದ ಅಗತ್ಯವಿದೆ ಎಂಬುವುದನ್ನು ನಾವು ತಿಳಿದಿದ್ದೇವೆ. ಈ ಹಿನ್ನೆಲೆಯಲ್ಲಿ 7ಕೋಟಿ ಜನರ ಸಾಮಾಜಿಕ ಶೈಕ್ಷಣಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಉದ್ದೇಶದಿಂದ ಮಧುಸೂಧನ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ಸಮೀಕ್ಷೆ ಕಾರ್ಯ ಕೈಗೊಳ್ಳಲಿದೆ.

ಆದಷ್ಟು ಎಚ್ಚರಿಕೆಯಿಂದ, ಪ್ರತಿಯೊಬ್ಬರನ್ನೂ ಒಳಗೊಂಡಂತೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ಡಿಸೆಂಬರ್ ಒಳಗಾಗಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಸಮೀಕ್ಷೆ ಕಾರ್ಯ 1.75 ಲಕ್ಷ ಶಿಕ್ಷಕರನ್ನು ಈ ಕಾರ್ಯಕ್ಕೆ ಬಳಸಲಾಗುವುದು.

ಆಯೋಗ ವೈಜ್ಞಾನಿಕವಾಗಿ, ಯಾವುದೇ ಲೋಪವಾಗದಂತೆ ಸಮೀಕ್ಷೆ ಕಾರ್ಯ ನಡೆಸಬೇಕು. ನಿಗದಿತ ಅವಧಿಯ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕು. ನಾಗಮೋಹನ ದಾಸ್ ಅವರು ಒಳಮೀಸಲಾತಿ ಸಮೀಕ್ಷೆಗೆ ವಿಶೇಷ ತಂತ್ರಜ್ಞಾನ ಬಳಸಿಕೊಂಡ ರೀತಿಯಲ್ಲಿ ಈ ಸಮೀಕ್ಷೆಯನ್ನು ಸಹ ಕೈಗೊಳ್ಳಲಾಗುವುದು. ಪ್ರತಿಯೊಂದು ಮನೆಯ ವಿದ್ಯುತ್ ಮೀಟರ್ ಆಧಾರದಲ್ಲಿ ಮನೆಯ ಜಿಯೋ ಟ್ಯಾಗ್ ಮಾಡಿ UHID ವಿಶೇಷ ಸಂಖ್ಯೆಯನ್ನು ನಮೂದಿಸಲಾಗುವುದು. ಈಗಾಗಲೇ 1.55 ಲಕ್ಷ ಮನೆಗಳಿಗೆ ಸಂಖ್ಯೆಯನ್ನು ಅಳವಡಿಸಲಾಗಿದೆ. ವಿದ್ಯುತ್ ಸಂಪರ್ಕ ಇಲ್ಲದ ಮನೆಗಳ ಸಮೀಕ್ಷೆಯನ್ನು ಸಹ ಮಾಡಲಾಗುವುದು.

ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್‌ ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡುವ ಕಾರ್ಯವನ್ನು ಮಾಡಲಾಗುವುದು. ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು.

ಸಮೀಕ್ಷೆಯಲ್ಲಿ ಕೇಳುವ 60 ಪ್ರಶ್ನೆಗಳಿಗೆ ಎಲ್ಲರೂ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...