ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನವೆಂಬರ್ 10ರವರೆಗೂ ವಿಸ್ತರಿಸಲಾಗಿದೆ.
ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಪತ್ರಿಕಾ ಪ್ರಕಟಣೆ ಹೊರಡಿಸಿ ಈ ಬಗ್ಗೆ ಮಾಹಿತಿ ನೀಡಿದೆ. ಸಮೀಕ್ಷೆ ಕಾರ್ಯ 22.09.2025 ರಿಂದ ಪ್ರಾರಂಭವಾಗಿದ್ದು, 31.10.2025 ರಂದು ಮುಕ್ತಾಯಗೊಳ್ಳಲಿದೆ. ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಅವಕಾಶ ನೀಡುವ ಹಿನ್ನೆಲೆಯಲ್ಲಿ Online ಮೂಲಕ https://kscbcselfdeclaration.karnataka.gov.in ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ವಿಸ್ತರಿಸಿಲಾಗಿದೆ.





