ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ; ಬಿಟ್ಟು ಹೋದ ಜಾತಿ ಕುರಿತು ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Date:

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಆದೇಶಾನುಸಾರ ಕೈಗೊಂಡಿರುವ ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು, ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಬಿಟ್ಟು ಹೋದ ಜಾತಿಗಳ ಕುರಿತು ಮಾಹಿತಿ ನೀಡಲು ಸೆಪ್ಟೆಂಬರ್‌ 1ರವರೆಗೆ ಅವಧಿ ವಿಸ್ತರಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ಆಗಸ್ಟ್‌ 22 ರಂದು ಪತ್ರಿಕೆಗಳಲ್ಲಿ ಪ್ರಕಟಣೆ ನೀಡಿ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ, ಸೂಚನೆಗಳು ಇದ್ದಲ್ಲಿ, 7 ದಿನಗಳ ಒಳಗೆ ನೀಡಲು ಕೋರಲಾಗಿತ್ತು.

ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಈ ಅವಧಿಯನ್ನು ವಿಸ್ತರಿಸಲು ಕೋರಿರುವ ಕಾರಣ, ಈ ಬಗ್ಗೆ ಸಲಹೆ/ಸೂಚನೆ ಮನವಿಗಳನ್ನು ನೀಡುವ ಅವಧಿಯನ್ನು ಸೆ.1ರ ಸಂಜೆ 5 ಗಂಟೆವರೆಗೆ ವಿಸ್ತರಿಸಲಾಗಿದೆ. ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬ‌ರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ ಮನವಿಗಳನ್ನು ಸದಸ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶ, ವಸಂತ ನಗರ,ಬೆಂಗಳೂರು ಅಥವಾ kscbcb@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಹೆಚ್ಚಿನ‌ ವಿವರಗಳಿಗೆ ದೂ.ಸಂಖ್ಯೆ 080-29506668 ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...