ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ಮರು ತನಿಖೆ ಕೋರಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Date:

ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಂದೆ, ಧರ್ಮಸ್ಥಳದ ನಿವಾಸಿ ಚಂದಪ್ಪ ಗೌಡ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ವಜಾ ಮಾಡಿದೆ.

ಜೊತೆಗೆ ಸಿಬಿಐ ವಿಶೇಷ ಮಕ್ಕಳ ನ್ಯಾಯಾಲಯದ ಆದೇಶ ಬದಿಗೆ ಸರಿಸುವಂತೆ ಕೋರಿ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ಕೂಡಾ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಮತ್ತು ಜೆ ಎಂ ಖಾಜಿ ಅವರ ವಿಭಾಗೀಯ ಪೀಠ ಈ ಆದೇಶವನ್ನು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ‌ ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಿ ಕೇಂದ್ರೀಯ ತನಿಖಾ ದಳದ (ಸಿಬಿಐ) ವಿಶೇಷ ಮಕ್ಕಳ ನ್ಯಾಯಾಲಯ ನೀಡಿದ್ದ ತೀರ್ಪು ಪ್ರಶ್ನಿಸಿ ಸಿಬಿಐ ಅರ್ಜಿ ಸಲ್ಲಿಸಿದ್ದು, ಐಪಿಸಿ ಸೆಕ್ಷನ್‌ 302 (ಕೊಲೆ) ಮತ್ತು 376 (ಅತ್ಯಾಚಾರ) ಆರೋಪದ ಅಡಿ ಸಂತೋಷ್‌ ರಾವ್‌ ಅವರನ್ನು ದೋಷಿ ಎಂದು ಆದೇಶಿಸಬೇಕು ಎಂದು ಕೋರಿತ್ತು.

ಇನ್ನು, ವಿಚಾರಣಾಧೀನ ನ್ಯಾಯಾಲಯದಲ್ಲಿ ಖುಲಾಸೆಗೊಂಡಿರುವ ಸಂತೋಷ್‌ ರಾವ್‌ ಅವರು ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುವ ಮೂಲಕ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಚೆನ್ನೈನ ಸಿಬಿಐಗೆ ನಿರ್ದೇಶಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು.

ಮತ್ತೊಂದೆಡೆ ಸೌಜನ್ಯ ತಂದೆ ಚಂದಪ್ಪ ಗೌಡ ಅವರು ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತನಿಖಾ ದಳ ರಚಿಸಲು ಚೆನ್ನೈನ ಸಿಬಿಐಗೆ ನಿರ್ದೇಶಿಸಬೇಕು ಎಂದು ಕೋರಿದ್ದರು.

2012ರ ಅಕ್ಟೋಬರ್‌ 9ರಂದು ಸೌಜನ್ಯಳನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಬೆಳ್ತಂಗಡಿ ಠಾಣಾ ಪೊಲೀಸರು ಸಂತೋಷ್‌ ರಾವ್‌ ಎಂಬಾತನ ಬಂಧನ ಮಾಡಿದ್ದರು. ನಂತರ ಈ ಪ್ರಕರಣ ಸಿಬಿಐಗೆ ವರ್ಗಾಯಿಸಲಾಗಿದ್ದು, ಸಿಬಿಐ ತನಿಖೆ ಪೂರ್ಣಗೊಳಿಸಿ ಸಂತೋಷ್‌ ರಾವ್‌ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿತ್ತು. ಆದರೆ ವಿಶೇಷ ನ್ಯಾಯಾಲಯವು ಸೂಕ್ತ ಸಾಕ್ಷ್ಯಧಾರಗಳಿಲ್ಲ ಎಂದು ಸಂತೋಷ್‌ ರಾವ್‌ ಅವರನ್ನು 2023ರ ಜೂನ್‌ 16ರಂದು ಖುಲಾಸೆಗೊಳಿಸಿದೆ.

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಸೌಜನ್ಯ ಆರೋಪಿಗಳಿಗೆ ಕ್ರೂರ ಶಿಕ್ಷೆಯಾಗಿದ್ದರೆ, ಇಂದು ನೇಹಾಳಂತ ಹೆಣ್ಣುಮಕ್ಕಳು ಉಳಿಯುತ್ತಿದ್ದರು: ಸಾಧನಾ ಸಂಸ್ಥೆಯ ಸಂಸ್ಥಾಪಕಿ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...