ಅ.18ರವರೆಗೆ ರಾಜ್ಯದಾದ್ಯಂತ ʼಸೌಜನ್ಯ ನ್ಯಾಯ ಸಪ್ತಾಹʼ

Date:

ಧರ್ಮಸ್ಥಳದ ಸೌಜನ್ಯ ಅತ್ಯಾಚಾರಗೊಂಡು ಕೊಲೆಯಾದ ದಿನ ಅ. 9 ರಂದು ಸೌಜನ್ಯ ಮತ್ತು ಇತರ ಹೆಣ್ಣುಮಕ್ಕಳ ಅಸಹಜ ಸಾವಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ, ಪುಸ್ತಕ ಬಿಡುಗಡೆ, ಕ್ಯಾಂಡಲ್‌ ಲೈಟ್‌ ಬೆಳಗಿ ಸಂತಾಪ ಸೂಚಿಸುವುದು ಹೀಗೆ ಹಲವು ರೀತಿಯಲ್ಲಿ ನ್ಯಾಯಕ್ಕಾಗಿ ಜನಾಗ್ರಹ ಸಭೆಗಳು ನಡೆದು ರಾಜ್ಯದ ಗಮನ ಸೆಳೆದಿದೆ. ಹಲವು ಜಿಲ್ಲೆಗಳ ಸುಮಾರು 60 ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿವೆ. ʼಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆʼ ಈ ಪ್ರತಿಭಟನೆಯನ್ನು ಮುಂದಿನ ಒಂದು ವಾರ ನಡೆಸಲು ಕರೆ ಕೊಟ್ಟಿದೆ.

“ಸೌಜನ್ಯ ಜನ್ಮದಿನ ಅ.18ರವರೆಗೆ ನ್ಯಾಯಕ್ಕಾಗಿ ಜನಾಗ್ರಹ ಮುಂದುವರಿಯಲಿದೆ” ಎಂದು ವೇದಿಕೆಯ ಸಂಚಾಲಕರಲ್ಲಿ ಒಬ್ಬರಾದ ನವೀನ್‌ ಸೂರಿಂಜೆ ತಿಳಿಸಿದ್ದಾರೆ. ಇದೇ 17 ಉಡುಪಿಯಲ್ಲಿ ದೊಡ್ಡ ಮಟ್ಟದ ಜನಾಗ್ರಹ ಸಮಾವೇಶ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಸೆ. 9 ರಂದು ಬೆಂಗಳೂರಿನ ಹಲವೆಡೆ ಸೇರಿದಂತೆ, ಮಂಡ್ಯ, ಮೈಸೂರು, ಕೋಲಾರ, ಕಲಬುರ್ಗಿ, ದಾವಣಗೆರೆ, ಚಿತ್ರದುರ್ಗ, ಉಡುಪಿ, ಬೆಳ್ತಂಗಡಿ, ತುಮಕೂರು, ರಾಯಚೂರು, ಬಳ್ಳಾರಿ, ಹಾಸನ, ಕಾರವಾರ, ಹೊಸಪೇಟೆ, ಯಾದಗಿರಿ ಸೇರಿದಂತೆ ಹಲವು ಕಡೆಗಳಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ತಮ್ಮ ಅಹವಾಲು ಸಲ್ಲಿಸಿದರು. ಸೌಜನ್ಯ ಅತ್ಯಾಚಾರ ಪ್ರಕರಣದ ಮರುತನಿಖೆ ನಡೆಸಬೇಕು. ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವುಗಳ ಸಮಗ್ರ ತನಿಖೆ ನಡೆದು ನೈಜ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...