ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಜಾರಿ ಬಗ್ಗೆ ಚರ್ಚಿಸಲು ವಿಶೇಷ ಸಚಿವ ಸಂಪುಟ, ಸೆ‌.16ಕ್ಕೆ ತೀರ್ಮಾನ

Date:

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಕಾಮಗಾರಿಗಳಿಗಾಗಿ ಅವಶ್ಯವಿರುವ ಜಮೀನಿಗೆ ಪರಿಹಾರ ನೀಡಲು ಮತ್ತು ಭೂಸ್ವಾಧೀನ ಸಂಬಂಧ ಅಂತಿಮ ನಿರ್ಣಯ ಕೈಗೊಳ್ಳಲು ಸೆ‌.16ರಂದು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ‌. ಪಾಟೀಲ್ ತಿಳಿಸಿದರು.

ಜಮೀನು ಕಳೆದುಕೊಳ್ಳುವ ರೈತರಿಗೆ ನ್ಯಾಯಯುತವಾದ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದ್ದು, ಸಂತ್ರಸ್ತರಿಗೆ ಸೂಕ್ತ ಪುನರ್ವಸತಿಯನ್ನು ಸಹ ಕಲ್ಪಿಸಲಾಗುವುದು. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು.

ಗುರುವಾರ ಸಿಎಂ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಈ ಬಗ್ಗೆ ಚರ್ಚಿಸಲು ವಿಶೇಷ ಸಚಿವ ಸಂಪುಟ ಸಭೆ ಕರೆಯುವ ಬಗ್ಗೆ ಸಿಎಂ ತೀರ್ಮಾನಿಸಿದ್ದಾರೆ ಎಂದು ಹೆಚ್.ಕೆ‌. ಪಾಟೀಲ್ ಮಾಧ್ಯಮದವರಿಗೆ ಸಭೆ ಬಳಿಕ ವಿವರಿಸಿದರು.

“ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ತ್ವರಿತವಾಗಿ ಕೈಗೊಳ್ಳುವ ಕುರಿತಂತೆ ಒಪ್ಪಂದದ ಐತೀರ್ಪು ರಚಿಸಲು, ಏಕರೂಪದ ದರ ನಿಗದಿಪಡಿಸಲು ಹಾಗೂ ಇನ್ನಿತರ ಆಡಳಿತಾತ್ಮಕ ವಿಷಯಗಳಿಗೆ ಅನುಮೋದನೆ ನೀಡುವ ಕುರಿತು ವಿಸ್ತೃತವಾದ ಹಾಗೂ ಸಕಾರಾತ್ಮಕ ಚರ್ಚೆ ನಡೆದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೃಷ್ಣಾ ಮೇಲ್ದಂಡೆ ಯೋಜನೆ 3 ಅನುಷ್ಠಾನ ಸಂಬಂಧ ರಾಜ್ಯ ಸರ್ಕಾರ ಬದ್ಧತೆ ತೋರಿದೆ. ಅದನ್ನು ಪೂರ್ಣಗೊಳಿಸುವ ಸಂಬಂಧ ಸಿಎಂ ತಮ್ಮ ಸ್ಪಷ್ಟ ನಿಲುವು ತಿಳಿಸಿದ್ದಾರೆ. ಆ ಭಾಗದ ಮುಖಂಡರು, ರೈತರನ್ನು ಕರೆದು ಸಿಎಂ ಹಲವು ಬಾರಿ ಸಭೆ ಮಾಡಿದ್ದಾರೆ. ಬಹಳಷ್ಟು ಪ್ರಮಾಣದ ಕೇಸ್ ಕೋರ್ಟ್​ನಲ್ಲಿದೆ. ಈ ಯೋಜನೆಗೆ ಮುಳುಗಡೆಯಾಗುವ ಭೂಮಿ 75,000 ಎಕರೆ. ಈ ಯೋಜನೆಯನ್ನು ಪೂರ್ಣ ಮಾಡಲು ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದೆ. ಭೂಮಿ ಸ್ವಾಧೀನ ಪಡಿಸಲು ಅನೇಕ ಪ್ರಕ್ರಿಯೆಗಳಿವೆ” ಎಂದು ಹೇಳಿದರು.

“ತಾಂತ್ರಿಕ ಹಾಗೂ ಕಾನೂನಾತ್ಮಕ ವಿಷಯಗಳ ಬಗ್ಗೆ ತೀರ್ಮಾನ ಕೈಗೊಳ್ಳಬೇಕಾಗಿದೆ. ಈ ಹಿನ್ನೆಲೆ ಸಚಿವ ಸಂಪುಟ ಹಲವು ಅಂಶಗಳ ಬಗ್ಗೆ ಚರ್ಚೆ ಮಾಡಿದೆ. ರೈತ ಮುಖಂಡರ ಅಭಿಪ್ರಾಯಗಳನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಆದರೆ ಚರ್ಚೆ ಅಪೂರ್ಣವಾಗಿದೆ. ಸೆ.16ರಂದು ಈ ವಿಚಾರವಾಗಿ ಸಚಿವ ಸಂಪುಟದ ವಿಶೇಷ ಸಭೆಯನ್ನು ಕರೆದು, ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ” ಎಂದರು.

ಏನಿದು ಯೋಜನೆ

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3ರಲ್ಲಿ ನೀರಿನ ಬಳಕೆಗಾಗಿ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟವನ್ನು 519 ಮೀಟರ್​ನಿಂದ 524 ಮೀಟರ್​ಗೆ ಎತ್ತರಿಸುವುದರಿಂದ ಹೆಚ್ಚುವರಿಯಾಗಿ 100 ಟಿಎಂಸಿ ನೀರಿನ ಪ್ರಮಾಣ ಸಂಗ್ರಹ ಅಂದಾಜಿಸಲಾಗಿದೆ.

ಯೋಜನೆ ಅನುಷ್ಠಾನಕ್ಕೆ ಒಟ್ಟು 1,33,867 ಎಕರೆ ಜಮೀನು ಭೂಸ್ವಾಧೀನ ಅಗತ್ಯವಿದ್ದು, ಇದರಲ್ಲಿ 75,563 ಎಕರೆ ಹಿನ್ನೀರಿನಲ್ಲಿ ಮುಳುಗಡೆಯಾಗುವ ಜಮೀನು ಸೇರಿದೆ. ಇದುವರೆಗೆ 29,566 ಎಕರೆಗೆ ಭೂಸ್ವಾಧೀನ ಐತೀರ್ಪು ಹೊರಡಿಸಲಾಗಿದೆ. 59,354 ಎಕರೆ ಜಮೀನು ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಬೇಕಿದೆ.

ಮುಳುಗಡೆ ಹೊಂದಲಿರುವ ಜಮೀನನ್ನು 2ಹಂತದಲ್ಲಿ ಭೂಸ್ವಾಧೀನಕ್ಕೆ ಒಳಪಡಿಸುವ ಬದಲು ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಲು ಈಗಾಗಲೇ ತೀರ್ಮಾನಿಸಲಾಗಿದೆ. ಯೋಜನೆ ಅನುಷ್ಠಾನಕ್ಕೆ ಆರಂಭದಲ್ಲಿ 51,148 ಕೋಟಿ ಯೋಜನಾ ಮೊತ್ತ ಅಂದಾಜಿಸಲಾಗಿತ್ತು. ಈಗ ಪರಿಷ್ಕೃತ 87,818 ಕೋಟಿ ಅಂದಾಜಿಸಲಾಗಿದೆ. ಇದರಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ 17,627 ಕೋಟಿ ಆರಂಭದಲ್ಲಿ ಅಂದಾಜಿಸಲಾಗಿತ್ತು. ಪ್ರಸ್ತುತ ಪರಿಷ್ಕೃತ ಮೊತ್ತ 40,557.09 ಕೋಟಿ ರೂಪಾಯಿ ಅಂದಾಜಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...