ಕಾಲ್ತುಳಿತ | ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್‌ ನಿಂಬಾಳ್ಕರ್ ವರ್ಗಾವಣೆಗೊಳಿಸಿ ಆದೇಶ

Date:

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿ ಐದು ಪೊಲೀಸ್ ಅಧಿಕಾರಿಗಳನ್ನು ಸರ್ಕಾರ ಅಮಾನತ್ತು ಮಾಡಿದ ಬೆನ್ನಲ್ಲೇ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ.

ಗುಪ್ತಚರ ಇಲಾಖೆಯ ಅಧಿಕಾರಿಗಳ ವಿರುದ್ಧ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಒತ್ತಡ ಹೇರಲಾಗಿತ್ತು. ಆದರೆ ಇದೀಗ ಗುಪ್ತಚರ ಇಲಾಖೆಯ ಎಡಿಜಿಪಿ ವಿರುದ್ಧವೂ ಸರ್ಕಾರ ಕ್ರಮ ಕೈಗೊಂಡಿದೆ.

ಕಾಲ್ತುಳಿತ ಪ್ರಕರಣದಲ್ಲಿ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ದೂರು ಕೂಡಾ ನೀಡಿದ್ದರು. ಇಂಟಲಿಜೆನ್ಸ್ ಫೈಲ್ಯೂರ್ ಆದ್ರೂ ಕ್ರಮ ಯಾಕೆ ತೆಗೆದುಕೊಂಡಿಲ್ಲ ಎಂದು ಗೃಹ ಸಚಿವರಿಗೆ ದೂರು ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಗೋವಿಂದರಾಜ್ ಅವರ ಒತ್ತಡದ ಕಾರಣದಿಂದಲೇ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲು ಅನುಮತಿ ನೀಡಲಾಗಿತ್ತು ಎಂದು ಬಿಜೆಪಿ ಮತ್ತು ಜೆಡಿಎಸ್ ಆರೋಪಿಸಿದ್ದವು. ಲಕ್ಷಾಂತರ ಜನರು ಸೇರುವ ಬಗ್ಗೆ ಮಾಹಿತಿ ನೀಡುವಲ್ಲಿ ಗುಪ್ತಚರ ಇಲಾಖೆಯು ವಿಫಲವಾಗಿತ್ತು ಎಂದೂ ವಿರೋಧಪಕ್ಷಗಳು ಆರೋಪಿಸಿದ್ದವು.

ಕೊನೆಗೂ ಒತ್ತಡಕ್ಕೆ ಮಣಿದು ಎಡಿಜಿಪಿ ಹೇಮಂತ್‌ ನಿಂಬಾಳ್ಕರ್ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...