ಕಾಲ್ತುಳಿತ | ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ, ಸಿಎಂ ಮನೆಗೆ ಮುತ್ತಿಗೆ ಯತ್ನ- ಬಂಧನ

Date:

ಆರ್.ಸಿ.ಬಿ. ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನ ಅಮಾಯಕರ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಕಾರಣ ಎಂದು ಆರೋಪಿಸಿ ಬಿಜೆಪಿ ರಾಜ್ಯ ಘಟಕ ಮಂಗಳವಾರ ಪ್ರತಿಭಟನೆ ನಡೆಸಿತು.

ಪ್ರತಿಭಟನೆ ವೇಳೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌, “ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ” ಎಂದು ಹೇಳಿದರು.

“ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರು ಕ್ರಿಕೆಟಿಗರ ಜೊತೆಗೆ ಫೋಟೋ ಶೂಟ್‌ ಮಾಡಿಕೊಂಡಿದ್ದರಿಂದಲೇ 11 ಜನರು ಮೃತರಾಗಿದ್ದಾರೆ. ಬಿಜೆಪಿ ಎಲ್ಲ ಬಗೆಯ ಹೋರಾಟಗಳನ್ನು ಮಾಡಿದೆ. ಇನ್ನು ಮುಂದೆಯೂ ಹೋರಾಟ ಮಾಡಲಾಗುವುದು. ಸರ್ಕಾರವೇ ಜನರನ್ನು ವಿಧಾನಸೌಧಕ್ಕೆ ಆಹ್ವಾನಿಸಿದೆ. ಹಾಗೆ ಆಹ್ವಾನ ನೀಡದೇ ಹೋಗಿದ್ದರೆ ಈ ದುರಂತ ನಡೆಯುತ್ತಿರಲಿಲ್ಲ. ನಾವು ಪ್ರತಿಭಟನೆ ಮಾಡಿದಾಗ ನೂರಾರು ಪೊಲೀಸರು ಬಂದಿದ್ದರು. ಅದೇ ರೀತಿ ಎರಡು ಲಕ್ಷ ಜನರನ್ನು ನಿಯಂತ್ರಣ ಮಾಡಲು ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಂಗಾರು ಮಳೆಗೆ ಸರ್ಕಾರ ಸಿದ್ಧವಿದೆಯೇ?

“ಮುಖ್ಯಮಂತ್ರಿಗಳ ಜನಪ್ರಿಯತೆ ಹೆಚ್ಚಿಸಲು ಮತ್ತು ಇಮೇಜ್ ವೃದ್ಧಿಗೆ ಆರ್.ಸಿ.ಬಿ. ವಿಜಯೋತ್ಸವದ ಕಾರ್ಯಕ್ರಮ ಏರ್ಪಡಿಸಿದ್ದಾರೆ ಹಾಗೂ 11 ಜನರ ಸಾವಿಗೆ ಕಾರಣವಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

“ಇಂಥ ಭಂಡ ಸರಕಾರ, ಮುಖ್ಯಮಂತ್ರಿ- ಉಪ ಮುಖ್ಯಮಂತ್ರಿಗಳು ಜನಪ್ರಿಯತೆ ಕಳಕೊಂಡಿದ್ದಾರೆ. ರಾಜ್ಯ ಸರಕಾರದ ಪ್ರಾಯೋಜಕತ್ವದಲ್ಲಿ ಈ 11 ಜನರು ಸಾಯುವಂತಾಗಿದೆ. ಲಜ್ಜೆಗೆಟ್ಟ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು” ಎಂದು ಆಗ್ರಹಿಸಿದರು.

ಸಿಎಂ ಮನೆಗೆ ಮುತ್ತಿಗೆ ಯತ್ನ- ಬಂಧನ

ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಮುಂದಾದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಬಂಧನದ ವೇಳೆ ಬಿ.ವೈ. ವಿಜಯೇಂದ್ರ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರು ‘ತೊಲಗಲಿ ತೊಲಗಲಿ ಸರಕಾರ ತೊಲಗಲಿ’, ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...