ಬೆಂಗಳೂರು | ರಾಜ್ಯದಲ್ಲಿ ಯುವ ಆಯೋಗ ಸ್ಥಾಪಿಸಲು ಆಗ್ರಹ: ಶಾಸಕ ಎನ್.ಎ. ಹ್ಯಾರಿಸ್‌ಗೆ ಸೋಲಿಡಾರಿಟಿ ಮನವಿ

Date:

ಸೋಲಿಡಾರಿಟಿ ಯೂತ್ ಮೂವ್ಮೆಂಟ್‌ನ ರಾಜ್ಯ ತಂಡವು ಬೆಂಗಳೂರಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಅಧ್ಯಕ್ಷರು ಹಾಗೂ ಶಾಸಕರಾದ ಎನ್.ಎ. ಹಾರಿಸ್ ಅವರನ್ನು ಭೇಟಿ ಮಾಡಿ, ಕರ್ನಾಟಕದಲ್ಲಿ ರಾಜ್ಯ ಯುವ ಆಯೋಗವನ್ನು ಸ್ಥಾಪಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿತು.

ಪ್ರಸ್ತಾವಿತ ರಾಜ್ಯ ಯುವ ಆಯೋಗವು ಯುವಕರಿಗೆ ಶಿಕ್ಷಣ, ಸಬಲೀಕರಣ ಹಾಗೂ ಮಾರ್ಗದರ್ಶನ ಒದಗಿಸುವುದರ ಜೊತೆಗೆ, ಯುವಕರ ಹಕ್ಕುಗಳನ್ನು ರಕ್ಷಿಸಿ, ಅವರ ಸಮಸ್ಯೆಗಳು ಹಾಗೂ ಅಗತ್ಯಗಳಿಗೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ನೋಡಿಕೊಳ್ಳುವ ಉದ್ದೇಶ ಹೊಂದಿರಲಿದೆ.
ಈ ಬೇಡಿಕೆಯನ್ನು ಇನ್ನಷ್ಟು ಬಲಪಡಿಸುವ ಸಲುವಾಗಿ ಮುಂದಿನ ದಿನಗಳಲ್ಲಿ ತಂಡವು ಮಾನ್ಯ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಇತರ ಪ್ರಮುಖ ಸಚಿವರನ್ನು ಭೇಟಿಯಾಗಲು ನಿರ್ಧರಿಸಿದೆ. ಜೊತೆಗೆ ರಾಜ್ಯದಾದ್ಯಂತ ಇರುವ ಕಾರ್ಯಕರ್ತರು ಈ ಬೇಡಿಕೆಗೆ ಬೆಂಬಲ ಸೂಚಿಸಿ ಮನವಿಪತ್ರಗಳನ್ನು ಸಲ್ಲಿಸಲಿದ್ದಾರೆ.

ಅಸ್ಸಾಂ, ಬಿಹಾರ, ಕೇರಳ ಮತ್ತು ಮಿಜೋರಂ ಮುಂತಾದ ರಾಜ್ಯಗಳಲ್ಲಿ ಈಗಾಗಲೇ ಯುವ ಆಯೋಗಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕದಲ್ಲಿಯೂ ಇಂತಹ ಆಯೋಗ ಸ್ಥಾಪನೆ ಅಗತ್ಯವೆಂಬುದು ಈ ಸಂದರ್ಭದಲ್ಲಿ ಒತ್ತಿ ಹೇಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್‌ನ ರಾಜ್ಯಾಧ್ಯಕ್ಷರಾದ ಡಾ. ನಸೀಮ್ ಅಹ್ಮದ್,ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಮಾಯಿಲ್ ಹಾಗೂ ರಾಜ್ಯ ಕಾರ್ಯದರ್ಶಿ ಅಸಾದುಲ್ಲಾ ಖಾನ್ ಝಕಿ ಅವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...