ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್‌ಅನ್ನು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ. 2026-27ನೇ ಸಾಲಿನ ಬಜೆಟ್ ಗ್ರಾತ್ರವು 4.48ಲಕ್ಷ ಕೋಟಿ ರೂ. ಇದೆ. ಬೆಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿ ಒತ್ತು ನೀಡುವ ಉದ್ದೇಶದಿಂದ 800 ಕರ್ನಾಟಕ ಪಬ್ಲಿಕ್ ಶಾಲೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕ ವಲಯದಲ್ಲಿ ಖಾಲಿ ಇರುವ ಉದ್ಯೋಗಗಳ ಪೈಕಿ 56,000 ಉದ್ಯೋಗ ಭರ್ತಿ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ.
ಇದೇ ವೇಳೆ, ಕೇಂದ್ರ ಸರ್ಕಾರದ ತಾರತಮ್ಯ ಧೋರಣೆ ಕುರಿತು ಮಾತನಾಡಿದ ಸಿದ್ದರಾಮಯ್ಯ, “ರಾಜ್ಯವು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. 8.1%ರಷ್ಟು ನೈಜ ಬೆಳವಣಿಗೆ ದಾಖಲಿಸಿದೆ. ಆದರೆ, ಕೇಂದ್ರ ಸರ್ಕಾರದ ತೆರೆಗೆ ನೀತಿಯಿಂದಾಗಿ ರಾಜ್ಯಸ್ವ ಸಂಗ್ರಹಕ್ಕೆ ಸವಾಲು ಎದುರಾಗಿದೆ. ರಾಜ್ಯದ ಹಿತಾಸಕ್ತಿಯನ್ನು ಕೇಂದ್ರ ರಕ್ಷಿಸಬೇಕು. ಏಳು ರಾಜ್ಯಗಳ ಒಕ್ಕೂಟ ಸಲ್ಲಿಸಿದ ಮನವಿಯನ್ನು ಕೇಂದ್ರ ಗಮನ ಹರಿಸಬೇಕು” ಎಂದು ಆಗ್ರಹಿಸಿದ್ದಾರೆ.




