ರಾಜ್ಯ ಬಜೆಟ್‌ | ಕೃಷಿಗೆ 8,363 ಕೋಟಿ ರೂ.; ರೈತರಿಗೆ ಸಿಕ್ಕಿದ್ದೇನು?

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್‌ ಮಂಡಿಸುತ್ತಿದ್ದಾರೆ. 4.41 ಲಕ್ಷ ಕೋಟಿ ರೂ. ಗಾತ್ರದ 2026-27ನೇ ಸಾಲಿನ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ 8,373 ಕೋಟಿ ರೂ. ಹಣವನ್ನು ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ

ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕಾಗಿ ಘೋಷಿಸಿದ ಪ್ರಮುಖ ಘೋಷಣೆಗಳು ಹೀಗಿವೆ;

  • ರೈತರ ಆದಾಯ ವೃದ್ಧಿಗೆ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ.
  • ಯೋಜನೆಯಡಿ ಮುಂದಿನ ಮೂರು ವರ್ಷಗಳಲ್ಲಿ 100 ಕೋಟಿ ರೂ. ವೆಚ್ಚ
  • ಬೆಳೆ ವಿಮೆ ಯೋಜನೆಯಡಿ 11 ಲಕ್ಷ ರೈತರಿಗೆ ಒಟ್ಟು 2,378 ಕೋಟಿ ರೂ. ಬೆಳೆ ವಿಮೆ ಪರಿಹಾರ ಘೋಷಣೆ
  • ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಅಭಿವೃದ್ಧಿಗಾಗಿ ‘ಮಿಲೆಟ್ ಹಬ್’ ಸ್ಥಾಪನೆ.
  • ಮೆಲೆಟ್ ಹಬ್‌ ಅಡಿಯಲ್ಲಿ ನವ ಉದ್ಯಮಿಗಳಿಗೆ (ಗ್ರಾಮೀಣ ಯುವಜನತೆ) ತಾಂತ್ರಿಕ ಪ್ರೋತ್ಸಾಹ. ಸಂಸ್ಕರಣಾ ಸೌಲಭ್ಯ, ಗುಣಮಟ್ಟ ಪ್ರಮಾಣೀಕರಣ, ಮಾರುಕಟ್ಟೆ ವ್ಯವಸ್ಥೆ
  • ಎಐ ತಂತ್ರಜ್ಞಾನದೊಂದಿಗೆ ಕೃಷಿ ಇಲಾಖೆಯಲ್ಲಿ ʼರೈತ ಕರೆ ಕೇಂದ್ರʼಗಳ ಸುಧಾರಣೆ
  • ರೈತರಿಗೆ ಮಣ್ಣು, ನೀರು, ಬೀಜ ಹಾಗೂ ರಸಗೊಬ್ಬರ ಪರೀಕ್ಷೆಗಳಲ್ಲಿ ನಿಖರ ಫಲಿತಾಂಶಗಳನ್ನು ಒದಗಿಸಲು ಎಲ್ಲ ಪ್ರಯೋಗಾಲಯಗಳಿಗೆ NABL ಮಾನ್ಯತೆಯ ವೈಜ್ಞಾನಿಕ ಪರೀಕ್ಷಣಾ ಸೌಲಭ್ಯ
  • ದ್ವಿದಳ ಧಾನ್ಯ ತಳಿಗಳ ಬಿತ್ತನೆ ಬೀಜಗಳ ಬಳಕೆಯನ್ನು  ಪ್ರೇರೇಪಿಸಲು ಸಹಾಯಧನ ಹೆಚ್ಚಿಳ.
  • ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ʻವಸುಧಾಮೃತʼ ಕಾರ್ಯಕ್ರಮ. ಮುಂದಿನ ಮೂರು ವರ್ಷಗಳಲ್ಲಿ ಹಂತ-ಹಂತವಾಗಿ ಜಾರಿ.
  • ಬೆಳೆಗಳಲ್ಲಿ ಕೀಟ ಹಾಗೂ ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ, ನಿಯಂತ್ರಿಸಲು ಪರಿಸರ ಸ್ನೇಹಿ ಜೈವಿಕ ಕೀಟನಾಶಕಗಳ ಪೂರೈಕೆಗಾಗಿ ʻಸಸ್ಯ ಸಂಜೀವಿನಿ’ ಯೋಜನೆ. ಮುಂದಿನ ಮೂರು ವರ್ಷಗಳಲ್ಲಿ ಅನುಷ್ಠಾನ.
  • ಚಿತ್ರದುರ್ಗ ಜಿಲ್ಲೆಯ ಬಬ್ಬೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರವನ್ನು ರಾಜ್ಯಮಟ್ಟದ ʻಕೃಷಿ ಉದ್ದಿಮೆ ತರಬೇತಿ ಕೇಂದ್ರʼ ವನ್ನಾಗಿ ಉನ್ನತೀಕರಣ.
  • ಕೃಷಿ ಸಂಬಂಧಿತ ಕಸುಬುಗಳನ್ನು ಮತ್ತು ಸ್ಥಳೀಯ ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಹಾಗೂ ಸಣ್ಣ, ಅತೀ ಸಣ್ಣ ರೈತರಿಗೆ ‘ಕೃಷಿ ಯಾಂತ್ರೀಕರಣ ಯೋಜನೆ’ಯಡಿ ಉಪಕರಣಗಳ ಪೂರೈಕೆ.
  • ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕನ್ನು ಸಂಪೂರ್ಣ ಸಾವಯವ ತಾಲೂಕನ್ನಾಗಿ ಪರಿವರ್ತನೆಗೆ ಆದ್ಯತೆ
  • ರೈತರಿಗೆ ಬಿತ್ತನೆ ಬೀಜಗಳು, ಕೀಟನಾಶಕಗಳು, ರಸಗೊಬ್ಬರಗಳು ಹಾಗೂ ಕೃಷಿ ಯಂತ್ರೋಪಕರಣಗಳು ಒಂದೇ ಸೂರಿನಡಿ ದೊರಕಿಸಲು ರೈತ ಮಾಲ್‌ಗಳ ಸ್ಥಾಪನೆ. ಕೋಲಾರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ.
  • ಅಥಣಿಯಲ್ಲಿ ಕೃಷಿ ಕಾಲೇಜು ಸ್ಥಾಪನೆ ಮತ್ತು ಮೂಲಸೌಕರ್ಯ
  • ಪ್ರವಾಸಿಗರನ್ನು ಆಕರ್ಷಿಸಲು ಮೈಸೂರಿನ ಲಿಂಗಾಂಬುದಿ ಸಸ್ಯ ತೋಟದ ಸಮಗ್ರ ಅಭಿವೃದ್ಧಿ.
  • ರಾಜ್ಯದ ಎಲ್ಲ ಕೃಷಿ ಮಾರುಕಟ್ಟೆಯಲ್ಲಿ ಶೀತಲ ಗೃಹಗಳ ಸ್ಥಾಪನೆ
  • ಅಡಿಕೆ ಬೆಳೆಯ ಎಲೆಚುಕ್ಕಿ, ಬಿಳಿ ನೊಣಗಳ ನಿಯಂತ್ರಣಕ್ಕೆ ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದಲ್ಲಿ ಕ್ರಮ. 10 ಕೋಟಿ ರೂ. ಅನುದಾನ.
  • ಹೊಸದಾಗಿ 89,000 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೇಸಾಯ ಅಳವಡಿಕೆ
  • 2.23 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹನಿ ನೀರಾವರಿ ಅಳವಡಿಕೆ – 2.36 ಲಕ್ಷ ರೈತರಿಗೆ ಅನುಕೂಲ
  • 21,360 ಫಲಾನುಭವಿಗಳಿಗಾಗಿ 9,800 ಕೊಯ್ಲೋತ್ತರ ಘಟಕಗಳ ನಿರ್ಮಾಣ.
  • ಪಿಪಿಪಿ ಮಾದರಿಯಲ್ಲಿ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳ ಸ್ಥಾಪನೆ.
  • ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಮತ್ತು ವಿಜಯಪುರ ಜಿಲ್ಲೆಯ ತೊರವಿಯಲ್ಲಿ ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳ ಸ್ಥಾಪನೆ. 64 ಕೋಟಿ ರೂ. ವೆಚ್ಚ.
  • ನೀರಿನ ಸಂರಕ್ಷಣೆ ಮತ್ತು ಮಣ್ಣಿನಿಂದ ಹರಡುವ ರೋಗಗಳನ್ನು ತಡೆಗಟ್ಟಲು ಹೈಡ್ರೋಪೊನಿಕ್ಸ್ (Hydroponics) ಹಾಗೂ ಕೋಕೋಪೀಟ್ (Coco peat) ಆಧಾರಿತ ಮಣ್ಣಿಲ್ಲದ ಕೃಷಿಯನ್ನು ಪ್ರೋತ್ಸಾಹಿಸಲಾಗುವುದು.
  • ಭಾರತದ ರೇಷ್ಮೆ ಉತ್ಪಾದನೆಯಲ್ಲಿ ಕರ್ನಾಟುವ 46% ಪಾಲು ಹೊಂದಿದ್ದು, ರೇಷ್ಮೆಗೆ ಪ್ರೋತ್ಸಾಹ ನೀಡಲು ರೀಲಿಂಗ್ ಶೆಡ್ ನಿರ್ಮಾಣ, ಹನಿ ನೀರಾವರಿ ಘಟಕಗಳ ಸ್ಥಾಪನೆ.
  •  ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉತ್ಪಾದಿಸುವ ರೇಷ್ಮೆ ಗೂಡನ್ನು ಸರ್ಕಾರದ ಯಾವುದೇ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಪ್ರತಿ ಕೆ.ಜಿ. ಗೂಡಿಗೆ ನೀಡಲಾಗುತ್ತಿದ್ದ ಸಾಗಾಣಿಕೆ ವೆಚ್ಚ 10 ರೂ.ನಿಂದ 20 ರೂ.ಗೆ ಹೆಚ್ಚಳ,
  • ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ ಕಲಬುರಗಿಯಲ್ಲಿ ರೇಷ್ಮೇ ಪಾರ್ಕ್‌ ಸ್ಥಾಪನೆ.
  • 300 ಪಶುವೈದ್ಯ ಸಂಸ್ಥೆಗಳಿಗಾಗಿ ನಬಾರ್ಡ್ ಸಹಯೋಗದೊಂದಿಗೆ ಹೊಸದಾಗಿ 100 ಕಟ್ಟಡಗಳನ್ನು ನಿರ್ಮಾಣ.
  • ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಆಯ್ದ 10,000 ಫಲಾನುಭವಿಗಳಿಗೆ 25%ರಷ್ಟು ಸಹಾಯಧನ.
  •  ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗಾಗಿ ಆಯ್ದ 10,000 ಫಲಾನುಭವಿಗಳಿಗೆ 25%ರಷ್ಟು ಸಹಾಯಧನ.  (ಒಟ್ಟು 40 ಕೋಟಿ ರೂ. ಅನುದಾನ)
  • ಜಿಲ್ಲಾ ಹಂತದಲ್ಲಿರುವ ತಜ್ಞ ಪಶುವೈದ್ಯಕೀಯ ವಿಶೇಷ ಸೇವೆ ವ್ಯವಸ್ಥೆಯನ್ನು ತಾಲೂಕು ಹಂತಕ್ಕೆ ವಿಸ್ತರಣೆ. 20 ತಾಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್‌ಗಳನ್ನಾಗಿ ಉನ್ನತೀಕರಣ.
  • ಮೈಸೂರಿನಲ್ಲಿ ಬೋಯರ್ ಮೇಕೆ ತಳಿ ಸಂವರ್ಧನಾ ಕೇಂದ್ರ ಸ್ಥಾಪನೆ.
  • ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದಲ್ಲಿ ಬಂಡೂರು ಕುರಿ ತಳಿ ಸಂವರ್ಧನಾ ಕೇಂದ್ರದ ಅಭಿವೃದ್ಧಿ.
  • ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆಗಳನ್ನು ನಿವಾರಿಸಲು ʻವರ್ಷಕ್ಕೊಂದು ಕರುʼ ಎಂಬ ಘೋಷಣೆಯಡಿ 1,000 ಗ್ರಾಮ ಪಂಚಾಯತಿಗಳಲ್ಲಿ ʻಫಲಧಾರೆʼ ಶಿಬಿರ ಆಯೋಜನೆ.
  • ಬೆಂಗಳೂರು ಮತ್ತು ಬೀದರ್‌ನ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶು ಆಸ್ಪತ್ರೆಗಳಲ್ಲಿ ಜಾನುವಾರುಗಳ ಸಿ.ಟಿ. ಸ್ಕ್ಯಾನಿಂಗ್ ಕೇಂದ್ರಗಳ ಸ್ಥಾಪನೆ.
  • ಬೆಂಗಳೂರು ಹಾಗೂ ಬೀದರ್‌ನಲ್ಲಿ ʻಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರʼ ಸ್ಥಾಪನೆ.
  • ಸಹಕಾರ ಇಲಾಖೆಯಡಿ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30,000 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿ.
  • ಯಶಸ್ವಿನಿ ಯೋಜನೆಯಡಿ ಇದುವರೆಗೆ ರಾಜ್ಯಾದ್ಯಂತ 870 ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು 150 ಕೋಟಿ ರೂ. ಮೀಸಲು.
  • ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಕೇಂದ್ರ ಪುರಸ್ಕೃತ ಗಣಕೀಕರಣ ಯೋಜನೆಯಡಿ 3,863 ಸಂಘಗಳು ಗಣಕೀರಣಗೊಂಡಿವೆ. ಬಾಕಿ ಉಳಿದ 1,628 ಸಹಕಾರ ಸಂಘಗಳ ಗಣಕೀಕರಣಕ್ಕೆ ಕ್ರಮ.
  • ಮೆಕ್ಕೆಜೋಳದ ಬೆಲೆ ಕುಸಿತದಿಂದ ಸಂಕಷ್ಟಕ್ಕೀಡಾದ ರೈತರ ಹಿತ ಕಾಪಾಡಲು ಮೆಕ್ಕೆಜೋಳ ಖರೀದಿಗಾಗಿ 100 ಕೋಟಿ ರೂ.ಗಳ ಆರ್ಥಿಕ ನೆರವು.
  • ಕರ್ನಾಟಕ ರಾಜ್ಯ ಉಗ್ರಾಣ ನಿಗಮವನ್ನು ಆರ್ಥಿಕವಾಗಿ ಸದೃಢಗೊಳಿಸಲು ಮೈಸೂರು (ಬಂಬೂ ಬಜಾರ್)  ಮತ್ತು ಹುಬ್ಬಳ್ಳಿ (ಕಾಟನ್ ಮಾರ್ಕೆಟ್)  ಕೇಂದ್ರಗಳಲ್ಲಿ ಪಿಪಿಪಿ ಮಾದರಿಯಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ.
  • ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಕಾರ್ಯಚಟುವಟಿಕೆಗಳ ಡಿಜಿಟಲೀಕರಣಕ್ಕೆ 10 ಕೋಟಿ ರೂ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...