ರಾಜ್ಯ ಬಜೆಟ್‌ | ನೀರಾವರಿಗೆ ಒತ್ತು; 22,436 ಕೋಟಿ ರೂ. ಮೀಸಲು

Date:

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 4,41 ಲಕ್ಷ ಕೋಟಿ ರೂ. ಮೊತ್ತದ ಬೃಹತ್ ಬಜೆಟ್‌ ಮಂಡಿಸಿದ್ದಾರೆ. ಗ್ರಾಮೀಣ ಭಾಗಗಳಿಗೆ ನೀರೊದಗಿಸಲು ಹಲವಾರು ಯೋಜನೆಗಳನ್ನು ರೂಪಿಸಿರುವುದಾಗಿ ಘೋಷಿಸಿದ್ದಾರೆ. ಅದಕ್ಕಾಗಿ, ಸಣ್ಣ ಮತ್ತು ಬೃಹತ್ ನಿರಾವರಿಗಾಗಿ 22,436 ಕೋಟಿ ರೂ. ಬಜೆಟ್‌ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಬಜೆಟ್‌ನಲ್ಲಿ ಘೋಷಿಸಲಾದ ನೀರಾವರಿ ಯೋಜನೆಗಳ ಪ್ರಮುಖ ಅಂಶಗಳು;

  • ಮೇಕೆದಾಟು ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು (DPR) ಸಿದ್ಧಪಡಿಸಿ ಅನುಮೋದನೆಗೆ ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಶೀಘ್ರ ಸಲ್ಲಿಕೆ.
  • ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ ಹಂತದಲ್ಲಿ ಬಾಕಿ ಇರುವ 18.73 ಕಿ.ಮೀ ಉದ್ದದ ಕಾಲುವೆ ಕಾಮಗಾರಿ ಪೂರ್ಣಗೊಳಿಸಲು ಒತ್ತು. ಕೊರಟಗೆರೆ ತಾಲೂಕಿನ ವಡೇರಹಳ್ಳಿ ಸಮೀಪ 1.2 ಟಿ.ಎಂ.ಸಿ ಸಾಮರ್ಥ್ಯದ ಸಮತೋಲನಾ ಜಲಾಶಯ ನಿರ್ಮಾಣ.
  • ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರವು 5,300 ಕೋಟಿ ರೂ. ಒದಗಿಸಿಲ್ಲ. ಆದರೂ, ಯೋಜನೆಗಾಗಿ 11,343 ಕೋಟಿ ರೂ.ಗಳ ಭರಿಸಲಾಗಿದೆ. ಈ ವರ್ಷ, 135 ಕಿ.ಮೀ ಉದ್ದದ ಚಿತ್ರದುರ್ಗ ಶಾಖಾ ಕಾಲುವೆ ಮತ್ತು ಫೀಡರ್ ಕಾಮಗಾರಿಗಳನ್ನು ಪೂರ್ಣಗೊಳಿಸಿ 157 ಕೆರೆ ತುಂಬಿಸಲು ಕ್ರಮ.
  • ಕೃಷ್ಣಾ ಮೇಲ್ದಂಡೆ ಯೋಜನೆಯಡಿ 3ನೇ ಹಂತದಲ್ಲಿ ಆಲಮಟ್ಟಿ ಅಣೆಕಟ್ಟನ್ನು 519.6 ಮೀ. ಯಿಂದ 524.256 ಮೀ. ಗೆ ಎತ್ತರಿಸಲು ತ್ವರಿತ ಕಾಮಗಾರಿ. ರೈತರು ಮತ್ತು ಸಂತ್ರಸ್ತರ ಬೇಡಿಕೆಯಂತೆ ಮುಳುಗಡೆಗೊಳ್ಳುವ ಖುಷ್ಕಿ ಜಮೀನಿಗೆ ಪ್ರತಿ ಎಕರೆಗೆ 30 ಲಕ್ಷ ರೂ. ಹಾಗೂ ತರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ ರೂ. ಪರಿಹಾರ ನಿಗದಿ.
  • ತುಂಗಭದ್ರಾ ಅಣೆಕಟ್ಟಿನ ಶಿಥಿಲಗೊಂಡಿರುವ 33 ಗೇಟುಗಳನ್ನು ಬದಲಾಯಿಸಲು ಕ್ರಮ.
  • ತುಂಗಭದ್ರಾ ನದಿಗೆ ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ ಒತ್ತು.
  • ಮಹದಾಯಿ ಕಣಿವೆಯ ಕಳಸಾ-ಬಂಡೂರಾ ನಾಲಾ ಯೋಜನೆಗಳಡಿ ಕೇಂದ್ರ ಪರಿಸರ ಸಚಿವಾಲಯದಿಂದ ಅರಣ್ಯ ತೀರುವಳಿ ಪಡೆಯಲು ಪ್ರಯತ್ನ.
  • ಚಾಮರಾಜನಗರದ ಹನೂರು ತಾಲೂಕಿನಲ್ಲಿ ಅಂತರ್ಜಲ ಹೆಚ್ಚಿಸುವ ಮತ್ತು ನೀರಾವರಿ ಒದಗಿಸಲು ಉಡುತೊರೆಹಳ್ಳ ಯೋಜನೆಗೆ 490 ಕೋಟಿ ರೂ. ಅನುದಾನ.
  • ವಿಜಯಪುರ ಜಿಲ್ಲೆಯ ಬಾಬಾ ನಗರದಲ್ಲಿ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ 0.67 ಟಿ.ಎಂ.ಸಿ ಸಾಮರ್ಥ್ಯದ ಸಂಗ್ರಹಣಾ ಜಲಾಶಯ ನಿರ್ಮಾಣಕ್ಕೆ ಕ್ರಮ.
  • ಕಾಮಗಾರಿ ಹಂತದಲ್ಲಿರುವ 12 ನೀರಾವರಿ ಯೋಜನೆಗಳು, 22 ಕೆರೆ ತುಂಬುವ ಯೋಜನೆಗಳು ಮತ್ತು ಮೂರು ಆಧುನೀಕರಣ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ.
  • ಕೃಷ್ಣಾ, ಕಾವೇರಿ, ಗೋದಾವರಿ ಹಾಗೂ ಇತರೆ ನದಿ ಕಣಿವೆಗಳಲ್ಲಿ ಒಟ್ಟಾರೆ 8,045 ಕೋಟಿ ರೂ. ಮೊತ್ತದ 75 ನೀರಾವರಿ ಕಾಮಗಾರಿಗಳ ಅನುಷ್ಠಾನ.
  • ಶಿಡ್ಲಘಟ್ಟ ತಾಲೂಕಿನ 45 ಕೆರೆಗಳಿಗೆ ಮತ್ತು ಚಿಂತಾಮಣಿ ತಾಲೂಕಿನ 119 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು 237 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
  • ಹೊಸಕೋಟೆ ತಾಲೂಕಿನ ಸೂಲಿಬೆಲೆ ಮತ್ತು ನಂದಗುಡಿ ಹೋಬಳಿಗಳ 59 ಕೆರೆಗಳಿಗೆ ಹೆಚ್.ಎನ್ ವ್ಯಾಲಿ ಯೋಜನೆಯಿಂದ  ನೀರು ತುಂಬಿಸಲು 140 ಕೋಟಿ ರೂ. ಮೊತ್ತದಲ್ಲಿ ಕಾಮಕಾರಿ.
  • ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರದ 259 ಕೆರೆಗಳಿಗೆ ನೀರುವ ತುಂಬಿಸುವ ಯೋಜನೆಗೆ 650 ಕೋಟಿ ರೂ. ಮೀಸಲು.
  • ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಏತ ನೀರಾವರಿ, ಚೆಕ್ ಡ್ಯಾಂ, ಕೆರೆಗಳ ಪುನಃಶ್ಚೇತನ ಅಭಿವೃದ್ಧಿಯ 112 ಕಾಮಗಾರಿಳಿಗೆ 1,793 ಕೋಟಿ ರೂ. ಅನುದಾನ.
  • ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಕುಕನೂರು ಹಾಗೂ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಜಿಡಗಾದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಅಂತರ್ಜಲ ಹೆಚ್ಚಿಸಲು ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕ್-ಅಪ್ ಹಾಗೂ ಚೆಕ್ಡ್ಯಾಂ ಕಾಮಗಾರಿಗಳ ಅನುಷ್ಠಾನ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...