ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ: ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕ; 15,000 ಶಿಕ್ಷಕರ ನೇಮಕಾತಿ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡಿಸಿದ್ದಾರೆ. ಬಜೆಟ್‌ನ ಒಟ್ಟು ಮೊತ್ತದಲ್ಲಿ ಅತೀ ಹೆಚ್ಚು ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ಹಂಚಿಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಶಾಲಾ ಮತ್ತು ಉನ್ನತ ಶಿಕ್ಷಣಕ್ಕಾಗಿ 47,224 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಹಂಚಿಕೆ ಮಾಡಲಾಗಿದೆ ಎಂದು ಘೋಷಿಸಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮೇಲಿನ ಜಾತಿ ಆಧಾರಿತ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ತಡೆಯಲು ʻರೋಹಿತ್ ವೇಮುಲ ಕಾಯ್ದೆʼ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಲಾದ ಕೊಡುಗೆಗಳ ಪ್ರಮುಖ ಅಂಶಗಳು;

  • 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಮತ್ತು 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಣ.
  • ವಿದ್ಯಾರ್ಥಿಗಳಿಗೆ ಗ್ರಾಮೀಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರಗಳನ್ನು ಆನ್-ಲೈನ್ ಮೂಲಕ ವಿತರಣೆ.
  • ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಣ. ಇದಕ್ಕಾಗಿ ಮೂರು ವರ್ಷಗಳಲ್ಲಿ 3,900 ಕೋಟಿ ರೂ. ಬಳಕೆ.
  • ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿನ (KPS) ಶಿಕ್ಷಕರ ಹುದ್ದೆಗಳನ್ನು ಮಹತ್ವದ ಹುದ್ದೆಗಳೆಂದು ಪರಿಗಣನೆ. ಖಾಲಿ ಇರುವ ಹುದ್ದೆಗಳಿಗೆ ಶಿಕ್ಷಕರ ನೇಮಕಾತಿಗೆ ಆದ್ಯತೆ.
  • ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸುವ ‘ವಿದ್ಯಾವಿಕಾಸ ಯೋಜನೆ’ಯನ್ನು ಪದವಿ ಪೂರ್ವ ಶಿಕ್ಷಣಕ್ಕೂ ವಿಸ್ತರಣೆ. ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕ ವಿತರಣೆ.
  • ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ದುರಸ್ತಿಗೆ 565 ಕೋಟಿ ರೂ., ಶೌಚಾಲಯ ನಿರ್ಮಾಣಕ್ಕೆ 75 ಕೋಟಿ ರೂ. ಹಾಗೂ ಶಾಲೆಗಳಿಗೆ ಪೀಠೋಪಕರಣ ಖರೀದಿಗೆ 25 ಕೋಟಿ ರೂ, ಅನುದಾನ.
  • ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ 125 ಕೋಟಿ ರೂ. ಅನುದಾನ.
  • ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಜಾರಿಗೊಳಿಸಲು ಇಂಗ್ಲಿಷ್ ಭಾಷಾ ತರಬೇತಿ ಕಾರ್ಯಕ್ರಮಕ್ಕಾಗಿ 24 ಕೋಟಿ ರೂ. ಅನುದಾನ.
  • IIT ಧಾರವಾಡದ ಸಹಯೋಗದೊಂದಿಗೆ 8 ರಿಂದ 12ನೇ ತರಗತಿಯಲ್ಲಿರುವ ಸುಮಾರು 12.28 ಲಕ್ಷ ವಿದ್ಯಾರ್ಥಿಗಳ ಕಲಿಕಾ ಪ್ರಕ್ರಿಯೆಗಾಗಿ ಅಂದಾಜು 5 ಕೋಟಿ ರೂ.ಗಳ ವೆಚ್ಚದಲ್ಲಿ AI ತಂತ್ರಜ್ಞಾನ ಅಳವಡಿಕೆ.
  • 2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
  • ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯ ಸುಧಾರಣೆಗೆ 204 BRC ಕೇಂದ್ರಗಳಿಗೆ ಮಾನಸಿಕ ಆರೋಗ್ಯ ಸಲಹೆಗಾರರ ನೇಮಕ.
  • ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳ ಪುನರ್‌ ನಿರ್ಮಾಣ – 10 ಕೋಟಿ ರೂ. ಹಂಚಿಕೆ.
  • 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆ ನಿಷೇಧ.
  • ಶಾಲಾ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಗೆ ಕಟ್ಟುನಿಟ್ಟಿನ ನಿರ್ಬಂಧ. ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ.
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಪಾಲಿಟೆಕ್ನಿಕ್‌ಗಳ ಬಲವರ್ಧನೆ, ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸಲು ʻಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆʼಗೆ 2,500 ಕೋಟಿ ರೂ. ಅನುದಾನ.
  • ಹೆಚ್ಚಿಸಲು ʻಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆʼಯಡಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್‌ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿ.
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್ನಿಕ್‌ಗಳು ಹಾಗೂ ಯುವಿಸಿಇ ವಿಶ್ವವಿದ್ಯಾಲಯಗಳ ಒಟ್ಟು 2,000 ಬೋಧಕ ಹುದ್ದೆಗಳ ಭರ್ತಿ.
  • ಶೇ.50ಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವ 31 ಕಾಲೇಜುಗಳಲ್ಲಿ ತಲಾ 1 ಕೋಟಿ ರೂ.ಗಳಂತೆ ಒಟ್ಟು 31 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗೆ ಅವಶ್ಯವಿರುವ ಮೂಲ ಸೌಲಭ್ಯ ನಿರ್ಮಾಣ.
  • 1,000ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಒಟ್ಟು 50 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೆ 100 ಕೋಟಿ ರೂ. ಹಂಚಿಕೆ. ಮುಂದಿನ ಮೂರು ವರ್ಷಗಳಲ್ಲಿ ಅನುಷ್ಠಾನ.
  • ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ 75 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, 23 ಪಾಲಿಟೆಕ್ನಿಕ್ ಹಾಗೂ ಐದು ಇಂಜಿನಿಯರಿಂಗ್ ಕಾಲೇಜುಗಳಿಗೆ ಮೂಲಭೂತ ಸೌಕರ್ಯ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ನೆರವು.
  • ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರ ಹಾಗೂ ರಾಯಚೂರಿನ ಮಸ್ಕಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ಥಾಪಿನೆ.
  • ಕಲಬುರಗಿ ಜಿಲ್ಲೆಯ ನಿಂಬರಗಾ, ಯಾದಗಿರಿ ಜಿಲ್ಲೆಯ ಕಕ್ಕೇರಾ, ರಾಯಚೂರು ಜಿಲ್ಲೆಯ ಅಂಬಾಮಠ ಮತ್ತು ಕೊಪ್ಪಳ ಜಿಲ್ಲೆಯ ಬೇವೂರು ಗ್ರಾಮಗಳಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳ ನಿರ್ಮಾಣ. ತಲಾ 18 ಕೋಟಿ ರೂ. ವೆಚ್ಚ.
  • ಸರ್ಕಾರದ 11 ಪಾಲಿಟೆಕ್ನಿಕ್‌ಗಳಲ್ಲಿ ಹಾಗೂ ಚಿತ್ರದುರ್ಗ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹೊಸದಾಗಿ AI, ಮಷಿನ್ ಲರ್ನಿಂಗ್, ಕ್ಲೌಡ್ ಕಂಪ್ಯೂಟಿಂಗ್, ಮೈನಿಂಗ್ ಇಂಜಿನಿಯರಿಂಗ್, ಆಟೋಮೇಷನ್ ಇಂಜಿನಿಯರಿಂಗ್ ಮುಂತಾದ 15 ಹೊಸ ಕೋರ್ಸ್‌ಗಳ ಆರಂಭ.
  • ವೃತ್ತಿ ಜೀವನದ ಆರಂಭಿಕ ಹಂತದಲ್ಲಿರುವ ವಿಜ್ಞಾನ, ತಾಂತ್ರಿಕ, ಗಣಿತ ಮತ್ತು ಇಂಜಿನಿಯರಿಂಗ್ (STEM) ವಿಭಾಗಗಳಲ್ಲಿನ ಆಯ್ದ 3,000 ಮಹಿಳಾ ಪದವೀಧರರಿಗೆ ಕೌಶಲ್ಯಾಭಿವೃದ್ಧಿ/ವೃತ್ತಿನಿರತ ತರಬೇತಿ. ಒಟ್ಟು 13.50 ಕೋಟಿ ರೂ. ವೆಚ್ಚ.
  • ಐಐಟಿ ಮಾದರಿಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ಅಭಿವೃದ್ಧಿ.
  • 2025-26ನೇ ಸಾಲಿನಿಂದ ಉನ್ನತ ಶಿಕ್ಷಣವನ್ನು ಮುಂದುವರೆಸುತ್ತಿರುವ 37,000 ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ.ಗಳ ವಿದ್ಯಾರ್ಥಿ ವೇತನ. ಅಜೀಂ ಪ್ರೇಮ್‌ಜಿ ಫೌಂಡೇಶನ್ ಮತ್ತು ರಾಜ್ಯ ಸರ್ಕಾರದಿಂದ ಜಂಟಿಯಾಗಿ ಅನುಷ್ಠಾನ.
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ.
  • ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಮೇಲಿನ ಜಾತಿ ಆಧಾರಿತ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼ ಜಾರಿ.
  • ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ಸರ್ಕಾರ ಸಿದ್ದ.
  • ಧಾರವಾಡ ಮತ್ತು ಬೆಂಗಳೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗಾಗಿ ತಲಾ 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಅಧ್ಯಯನ ಕೇಂದ್ರ ಸ್ಥಾಪನೆ.
  • ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು 25 ಎಕರೆ ಜಮೀನನ್ನು ಮಂಜೂರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...