ನವೆಂಬರ್‌ನಲ್ಲಿ ರಾಜ್ಯದ ಜಾತಿಗಣತಿ ವರದಿ ನನ್ನ ಕೈ ಸೇರಲಿದೆ: ಸಿಎಂ ಸಿದ್ದರಾಮಯ್ಯ

Date:

  • ಕಾಂತರಾಜ ವರದಿ ಸಿದ್ದಪಡಿಸಿಕೊಡಿ ಎಂದು ಈಗಾಗಲೇ ಸೂಚಿಸಿದ್ದೇನೆ
  • ಜಾತಿಗಣತಿ ಸಮಾಜ ವಿಂಗಡಿಸುವುದಿಲ್ಲ, ಮೋದಿ ವಿರೋಧಕ್ಕೆ ಅರ್ಥವಿಲ್ಲ

ನವೆಂಬರ್‌ನಲ್ಲಿ ಕರ್ನಾಟಕದ ಜಾತಿಗಣತಿ ವರದಿ ನನ್ನ ಕೈ ಸೇರಬಹುದು. ಕಾಂತರಾಜ ವರದಿಯನ್ನು ಸಿದ್ದಪಡಿಸಿ ಕೊಡಿ ಎಂದು ಈಗಾಗಲೇ ಸೂಚಿಸಿದ್ದೇನೆ. ವರದಿ ಕೈ ಸೇರಿದ ಬಳಿಕ ಪರಿಶೀಲಿಸಿ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಾತಿಗಣತಿ ಸಮಾಜವನ್ನು ವಿಂಗಡಿಸುವುದಿಲ್ಲ. ಯಾವ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ ಎಂಬುದನ್ನು ತಿಳಿದುಕೊಳ್ಳಲು ಅಂಕಿ ಅಂಶಗಳು ಸರ್ಕಾರಕ್ಕೆ ಬೇಕು. ಹೀಗಾಗಿ ನಾನೇ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುವಂತೆ ಸೂಚಿಸಿದ್ದೆ” ಎಂದರು.

“ಪ್ರಧಾನಿ ಮೋದಿ ಬಾಯಲ್ಲಿ ಮಾತ್ರ ‘ಸಬ್‌ ಕಾ ಸಾಥ್ ಸಬ್ ಕಾ ವಿಕಾಸ್’ ಅನ್ನುತ್ತಾರೆ. ಆದರೆ ಅವರ ನಡೆನುಡಿಗೆ ಬಹಳ ವ್ಯತ್ಯಾಸಗಳಿವೆ. ಹೀಗಾಗಿ ಜಾತಿ ಗಣತಿ ವಿರೋಧಿಸುತ್ತಾರೆ. ʼಸಬ್‌ ಕಾ ಸಾಥ್ ಸಬ್ ಕಾ ವಿಕಾಸ್’ ಎನ್ನುವವರು ಮುಸ್ಲಿಂ ಸಮುದಾಯಕ್ಕೆ ಟಿಕೆಟ್‌ ಕೊಡಲಿ ನೋಡೋಣ” ಎಂದು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಣದ ಕೊರತೆ ಇಲ್ಲ

“ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ ಇಲ್ಲ. ಬರಗಾಲಕ್ಕೆ ನಾವು ಕೇಂದ್ರ ಸರ್ಕಾರದ ಬಳಿ 4,860 ಕೋಟಿ ರೂ ಅನುದಾನ ಕೇಳಿದ್ದೇವೆ. ಬೆಳೆ ನಾಶ ಆಗಿರುವುದು 40 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಇದಕ್ಕೆ ಲೆಕ್ಕ ಹಾಕಿದರೆ 30 ಸಾವಿರಕ್ಕೂ ಹೆಚ್ಚು ಕೋಟಿ ಬೇಕಾಗುತ್ತದೆ. ಎನ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ 4,860 ಕೋಟಿ ಕೇಳಿದ್ದೇವೆ” ಎಂದು ತಿಳಿಸಿದರು.

“ಬರ ವೀಕ್ಷಣೆಗೆ ಕೇಂದ್ರ ಸರ್ಕಾರದ ತಂಡ ಬಂದಿದೆ. ಮೂರು ಟೀಮ್‌ ಮಾಡಿಕೊಂಡು ಬಂದಿದ್ದಾರೆ. ಸುಮಾರು ಹನ್ನೊಂದು ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ. ಅವರು ವರದಿ ಸಲ್ಲಿಸಿದ ಬಳಿಕ ಕೇಂದ್ರ ಸರ್ಕಾರ ಹಣ ಕೊಡುವ ಬಗ್ಗೆ ನಿರ್ಧರಿಸುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದಲ್ಲಿ ಸ್ವತಂತ್ರ ಮಾಧ್ಯಮದ ಪಾಲಿಗೆ ಇದು ಅತ್ಯಂತ ಕರಾಳ ಕಾಲ

ಮದ್ಯದಂಗಡಿ ಪ್ರಸ್ತಾವ ಇಲ್ಲ

ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಹೊಸ ಬಾರ್ ಲೈಸನ್ಸ್ ಕೊಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ಡಿ.ಕೆ ಶಿವಕುಮಾರ್ ಎಲ್ಲೂ ಕೂಡ ಹೊಸ ಲೈಸನ್ಸ್ ಕೊಡುತ್ತೇವೆಂದು ಹೇಳಿಲ್ಲ‌. ಸದ್ಯಕ್ಕೆ ಆ ವಿಚಾರದಲ್ಲಿ ಯಾವ ಚರ್ಚೆಗಳು ಬೇಡ. ಜನರ ಭಾವನೆಗಳನ್ನು ಕೇಳಬೇಕು, ಗೌರವಿಸಬೇಕು‌. ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಹೊಸ ಲೈಸನ್ಸ್‌ಗಳು ಯಾವುದು ಇಲ್ಲ” ಎಂದರು.

“ಮಹಿಷ ದಸರಾವನ್ನು ಸರ್ಕಾರ ಮಾಡಿಲ್ಲ. ನಾವು ಹಿಂದೆಯೂ ಮಾಡಿಲ್ಲ ಈಗಲೂ ಮಾಡುತ್ತಿಲ್ಲ. ಯಾರೋ ಹಿಂದಿನಿಂದ ಮಹಿಷ ದಸರಾ ಮೈಸೂರಿನಲ್ಲಿ ಮಾಡುತ್ತಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಏನು ಮಾಡಿಲ್ಲ. ಈಗ ಆ ವಿಚಾರದಲ್ಲಿ ಜಿಲ್ಲಾಡಳಿತ ತೀರ್ಮಾನ ಕೈಗೊಳ್ಳುತ್ತದೆ” ಎಂದರು.

ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರಕ್ಕೆ ಕೇಳಿದ ಪ್ರಶ್ನೆಗೆ ನಾನು ಈ ವಿಚಾರದಲ್ಲಿ ಯಾವ ಪ್ರತಿಕ್ರಿಯೆಯನ್ನು ನೀಡಲ್ಲ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...