ಮೆಕ್ಕೆಜೋಳ ಖರೀದಿ | ಪೋಸ್ಟ್‌ಮನ್ ಕೆಲಸ ಮಾಡುತ್ತಿರುವ ರಾಜ್ಯ ಸರ್ಕಾರ: ಬೊಮ್ಮಾಯಿ

Date:

ಮೆಕ್ಕೆಳ ಖರೀದಿಸು ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮನ್ ಕೆಲಸ ಮಾಡುತ್ತಿದ್ದು, ಇವರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ರೈತರ ಬೇಡಿಕೆಯಂತೆ ಪ್ರತಿ ಕ್ವಿಂಟಾಲ್‌ಗೆ 3000 ರೂ. ಕೊಟ್ಟು ಮೆಕ್ಕೆಜೋಳ ಖರೀದಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಮ್ಮ ದೇಶಕ್ಕೆ ಎಷ್ಟು ಮೆಕ್ಕೆಜೋಳ ಬೇಕೊ ಅದರ ಆಧಾರದ ಮೇಲೆ ರಫ್ತಾಗುತ್ತದೆ. ಈ ವರ್ಷ ಕರ್ನಾಟಕದಲ್ಲಿ 17ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 54 ಲಕ್ಷ ಟನ್ ಬೆಳೆದಿದ್ದಾರೆ. ಈ ವರ್ಷ ಕನಿಷ್ಠ 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಅದಕ್ಕಂತೂ ರಾಜ್ಯ ಸರ್ಕಾರ ಪರಿಹಾರ ಕೊಡುವುದಿಲ್ಲ. ಮುಖ್ಯಮಂತ್ರಿಗಳು ರೈತರ ವಿಚಾರದಲ್ಲಿ ಕೇವಲ ಪೋಸ್ಟ್‌ಮನ್ ಕೆಲಸ ಮಾಡುತ್ತಿದ್ದಾರೆ” ಎಂದು ಟೀಕಿಸಿದರು.

“ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಇದ್ದಾಗ ರಾಜ್ಯ ಸರ್ಕಾರದಿಂದ ಖರೀದಿ ಮಾಡಿದ್ದರು. ಅವರು ಕೇಂದ್ರದ ಕಡೆಗೆ ಬೆರಳು ಮಾಡಿರಲಿಲ್ಲ. ಇದೇನು ಹಾಳಾಗುವ ಬೆಳೆ ಅಲ್ಲ. ಅದನ್ನು ಇಟ್ಟುಕೊಂಡು ಬೆಲೆ ಬಂದಾಗ ಮಾರಾಟ ಮಾಡಬಹುದು. ವ್ಯತ್ಯಾಸ ಬಂದರೆ ಕೇಂದ್ರ ಸರ್ಕಾರ ಕೊಡುತ್ತದೆ. ಆದ್ದರಿಂದ ರೈತರ ಬೇಡಿಕೆಯಂತೆ ಎಂಎಸ್‌ಪಿ 2400 ರೂ. ಇದೆ. ರೈತರ ಬಗ್ಗೆ ಕಳಕಳಿ, ಪ್ರೀತಿ ಇದ್ದರೆ ಇನ್ನೂ 600 ಸೇರಿಸಿ ಪ್ರತಿ ಕ್ವಿಂಟಾಲ್‌ಗೆ 3000 ರೂ. ಕೊಟ್ಟು ಖರೀದಿಸಿಲಿ” ಎಂದು ಒತ್ತಾಯಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಬಗ್ಗೆ ಮಾತ್ರ ಪ್ರಸ್ತಾಪ ಆಗಿರುವ ಕುರಿತು ಕೇಳಿದ ಪ್ರಶ್ನೆಗೆ ಇದು ರಾಜ್ಯ ಸರ್ಕಾರ ಅಲ್ಲಾ, ಪೋಸ್ಟ್ ಆಫೀಸ್ ಆಗಿದೆ ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...