ಕಾರ್ಮಿಕರ ಪರ ವಾದಿಸಲು ವಕೀಲರ ಪಟ್ಟಿ ರಚನೆಗೆ ರಾಜ್ಯ ಸರ್ಕಾರದ ಅನುಮೋದನೆ

Date:

ಕಾರ್ಮಿಕರ ಕಾನೂನುಬದ್ಧ ಹಕ್ಕುಗಳನ್ನು ಕಾಪಾಡಿ ಅವರಿಗೆ ನ್ಯಾಯ ಒದಗಿಸಿ ಕೊಡಲು ಅನುಭವವುಳ್ಳ ವಕೀಲರು ಹಾಗೂ ಕಾರ್ಮಿಕ ಕಾನೂನು ತಜ್ಞರನ್ನು ಒಳಗೊಂಡ ವಕೀಲರ ಯಾದಿ/ ಪಟ್ಟಿ (Panel of Advocates) ರಚಿಸಲು ಕಾರ್ಮಿಕ ಇಲಾಖೆ ಮುಂದಾಗಿದ್ದು, ಈ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ನ್ಯಾಯಾಲಯಗಳಲ್ಲಿ ಕಾರ್ಮಿಕರು, ಕಾರ್ಮಿಕ ಸಂಘಗಳು ಮತ್ತು ಆಡಳಿತ ಮಂಡಳಿ ವಿರುದ್ಧ ಹಲವು ಪ್ರಕರಣಗಳು ಸದ್ಯ ಬಾಕಿ ಉಳಿದಿವೆ. ಪ್ರಕರಣಗಳು ವಿವಿಧ ಕಾರಣಗಳಿಂದ ವಿಳಂಭವಾಗುತ್ತಿರುವುದರಿಂದ ಕಾರ್ಮಿಕರಿಗೆ ತೊಂದರೆ ಉಂಟಾಗುತ್ತಿದೆ. ಇದಕ್ಕೆ ಪರಿಹಾರ ಒದಗಿಸಲು ಕಾರ್ಮಿಕ ಇಲಾಖೆ ಈ ವಿಶಿಷ್ಟ ಕ್ರಮ ಕೈಗೊಂಡಿದೆ. ಈ ಮೂಲಕ ಕಾರ್ಮಿಕರ ಕಾನೂನುಬದ್ದ ಹಕ್ಕುಗಳನ್ನು ರಕ್ಷಿಸುವಲ್ಲಿ ಅವರಿಗೆ ಕಾನೂನು ನೆರವು ನೀಡಲು ಮುಂದಾಗಿರುವ ಕಾರ್ಮಿಕ ಇಲಾಖೆಯು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.

ಈ ಹಿನ್ನೆಲೆಯಲ್ಲಿ, ಹತ್ತು ಜನ ವಕೀಲರ ಯಾದಿ/ಪಟ್ಟಿ ರಚಿಸಲು ಅನುಮೋದನೆ ನೀಡಿದ್ದು, ವಕೀಲರ ನೇಮಕದಲ್ಲಿ ಪಾರದರ್ಶಕತೆ, ಕಾರ್ಮಿಕ ಕಾನೂನು ಕುರಿತು ಜ್ಞಾನ/ ಪರಿಣತಿ/ ಅನುಭವ ಇರುವವರಿಗೆ ಆದ್ಯತೆ ಸೇರಿದಂತೆ, ವಕೀಲರ ಆಯ್ಕೆ, ಕಾರ್ಯವಿಧಾನ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಕಾರ್ಯಾಚರಣಾ (ಎಸ್‌ಒಪಿ) ತಯಾರಿಸಬೇಕಿದೆ. ಈ ವಕೀಲರಿಗೆ ಪಾವತಿಸಬೇಕಾದ ಸಂಭಾವನೆಗೆ ಕಾನೂನು ಇಲಾಖೆಯ ಆದೇಶಗಳನ್ನು ಅನುಸರಿಸಬೇಕೆಂಬ ಷರತ್ತುಗಳನ್ನು ವಿಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರದಲ್ಲಿ ಬೆಕ್ಕಿಗೆ ಗಂಟೆ ಕಟ್ಟುವವರು ಯಾರು?

ರಾಜ್ಯದ ಕಾರ್ಮಿಕ ನ್ಯಾಯಾಲಯ ಹಾಗೂ ಕೈಗಾರಿಕಾ ನ್ಯಾಯಮಂಡಳಿಗಳಲ್ಲಿ ಸಾಕಷ್ಟು ಕಾರ್ಮಿಕ ಸಂಬಂಧಿತ ದಾವೆಗಳು ಬಾಕಿ ಉಳಿದಿದ್ದು, ಅವುಗಳ ಅಂಕಿ ಅಂಶ ಇಂತಿದೆ:
ಬೆಂಗಳೂರು ನಗರ ಮತ್ತು ಗ್ರಾಮೀಣ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2023-24 ರಲ್ಲಿ 563 ದಾವೆಗಳು ಹಾಗೂ 2024-25 ರಲ್ಲಿ 446 ದಾವೆಗಳು ಬಾಕಿ ಇವೆ. ಮೈಸೂರು, ಮಂಡ್ಯ, ಚಾಮರಾಜನಗರದಲ್ಲಿ 2023-24 ರಲ್ಲಿ 91 ದಾವೆಗಳು, 2024-25 ರಲ್ಲಿ 99 ದಾವೆಗಳು ಬಾಕಿ ಇವೆ. ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ 2023-24 ರಲ್ಲಿ 424 ದಾವೆಗಳು, 2024-25 ರಲ್ಲಿ 200 ದಾವೆಗಳು ಬಾಕಿ ಇವೆ. ಹುಬ್ಬಳ್ಳಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ದಾವಣಗೆರೆ, ಹಾವೇರಿ, ಮಂಗಳೂರು, ಉಡುಪಿ, ಕಾರವಾರದಲ್ಲಿ 2023-24 ರಲ್ಲಿ 346 ದಾವೆಗಳು, 2024-25 ರಲ್ಲಿ 212 ದಾವೆಗಳು ಬಾಕಿ ಇವೆ. ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಮಡಿಕೇರಿಗಳಲ್ಲಿ 2023-24 ರಲ್ಲಿ 59 ಹಾಗೂ 2024-25 ರಲ್ಲಿ 59 ದಾವೆಗಳು ಬಾಕಿ ಇವೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...