ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕಕ್ಕೆ ಕಡಿವಾಣ; ಡೆಂಘೀ ಪರೀಕ್ಷೆಗೆ ದರ ನಿಗದಿಪಡಿಸಿದ ಆರೋಗ್ಯ ಇಲಾಖೆ

Date:

ಡೆಂಘೀ ಪರೀಕ್ಷೆಗೆ ದುಬಾರಿ ಶುಲ್ಕವನ್ನು ವಿಧಿಸುವ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಿರುವ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ಡೆಂಘೀ ಪರೀಕ್ಷೆಗೆ ದರ ನಿಗದಿಪಡಿಸಿದೆ.

ಡೆಂಘೀ ಜ್ವರವು ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಆಸ್ಪತ್ರೆಗಳು ಪರೀಕ್ಷೆಗೆ ಅಧಿಕ ಶುಲ್ಕವನ್ನು ವಸೂಲಿ ಮಾಡುತ್ತಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಜನಸಾಮಾನ್ಯರಿಗೆ ಹೊರೆಯಾಗದಂತೆ ಮಹತ್ವದ ಆದೇಶವನ್ನು ಪ್ರಕಟಿಸಿದೆ.

ಪ್ರಸ್ತುತ ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಘೀ ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಮನಬಂದಂತೆ ಡೆಂಘೀ ಪರೀಕ್ಷೆಗೆ ಬೆಲೆ ವಿಧಿಸದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವರ ಸೂಚನೆ ಮೇರೆಗೆ ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ಡೆಂಘೀ ಪರೀಕ್ಷೆಗೆ ದರ ನಿಗದಿಪಡಿಸಿದೆ. ಎರಡು ರೀತಿಯ ಪರೀಕ್ಷೆಗಳಿಗೆ ಒಟ್ಟು 600 ರೂಪಾಯಿ ದರ ನಿಗದಿ ಮಾಡಿ ಆದೇಶಿಸಿದೆ.

ಆರೋಗ್ಯ ಇಲಾಖೆ

ಇದನ್ನು ಓದಿದ್ದೀರಾ?  ಬೆಂಗಳೂರಿನಲ್ಲಿ ಡೆಂಘೀಗೆ 27 ವರ್ಷದ ಯುವಕ ಬಲಿ: ರಾಜ್ಯಾದ್ಯಂತ ಸಾವಿನ ಸಂಖ್ಯೆ 6ಕ್ಕೆ ಏರಿಕೆ

NS1 ಹಾಗೂ Igm ಎರಡು ಪರೀಕ್ಷೆಗಳಿಗೆ ತಲಾ 300 ರೂಪಾಯಿಗಳನ್ನು ನಿಗದಿಪಡಿಸಲಾಗಿದೆ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬ್ ರೋಟರಿಗಳು ಡೆಂಘೀ ಪರೀಕ್ಷೆಗೆ 600 ರೂಪಾಯಿಗಿಂತ ಹೆಚ್ಚು ವಿಧಿಸುವಂತಿಲ್ಲ.

ಇನ್ನು ಈಗಾಗಲೇ ಡೆಂಘೀ ನಿಯಂತ್ರಣ ಮುಂಜಾಗೃತ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ವಿಡಿಯೋ ಕಾನ್ಫರೆನ್ಸ್ ಸಭೆ ಕರೆದಿದ್ದಾರೆ.

ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒ, ನಗರ ಸ್ಥಳೀಯ ಸಂಸ್ಥೆಗಳು, ಡೆಂಘೀ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕ್ರಮಗಳತ್ತ ಹೆಚ್ಚಿನ ಗಮನ ಹರಿಸಬೇಕಾಗಿದ್ದು, ಈ ನಿಟ್ಟಿಯಲ್ಲಿ ಸಭೆಯನ್ನು ಕರೆಯಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಡೆಂಘೀ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಕೈಗೊಂಡಿರುವ ಮುಂಜಾಗೃತ ಕ್ರಮಗಳ ಕುರಿತು ಪರಾಮರ್ಶೆ ನಡೆಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...