ರಾಜ್ಯ ಗುಪ್ತದಳ ಕೇಂದ್ರದ ಇಂಟಲಿಜೆನ್ಸ್‌ನೊಂದಿಗೆ ನಿರಂತರ ಸಂಪರ್ಕದಲ್ಲಿ: ‌ಗೃಹ ಸಚಿವ ಪರಮೇಶ್ವರ್

Date:

ಪಾಕಿಸ್ತಾನ ಉಗ್ರಗಾಮಿ‌ ನೆಲೆಗಳ ಮೇಲೆ ನಮ್ಮ ರಕ್ಷಣಾ ಇಲಾಖೆಯು ದಾಳಿ ನಡೆಸಿರುವುದಕ್ಕೆ ನಮ್ಮೆಲ್ಲರ ಬೆಂಬಲವಿದೆ. ರಾಜ್ಯ ಗುಪ್ತದಳವು ಕೇಂದ್ರದ ಇಂಟಲಿಜೆನ್ಸ್‌ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಲು ಸೂಚಿಸಲಾಗಿದೆ ಎಂದು ಗೃಹ ಸಚಿವ ಜಿ‌.ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ಗುಂಡಿನ ದಾಳಿ ಬಳಿಕ ಪ್ರತ್ಯುತ್ತರಕ್ಕೆ ನಮ್ಮೆಲ್ಲರ ಬೆಂಬಲವಿದೆ. ದೇಶದ ಹಿತವನ್ನು ಕಾಪಾಡಲು ನಾವೆಲ್ಲ ಒಟ್ಟಾಗಿರುತ್ತೇವೆ. ಇಡೀ ಜನಸಮುದಾಯ ದೇಶದ ರಕ್ಷಣೆಗೆ ಜೊತೆಯಾಗಿ ನಿಲ್ಲಲಿದೆ” ಎಂದರು.

“ನಮಗೆ ಈಗಾಗಲೇ‌ ಕೇಂದ್ರ ಗೃಹ ಇಲಾಖೆ ಮತ್ತು ರಕ್ಷಣಾ ಇಲಾಖೆಯಿಂದ ಕೆಲವು ಸೂಚನೆಗಳು ಬಂದಿವೆ. ನಾಗರಿಕರ ರಕ್ಷಣೆ ಮಾಡುವ ಕುರಿತ ತಯಾರಿಗೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ವಿದ್ಯುತ್ ಸ್ಥಾವರ, ಅಣೆಕಟ್ಟು, ವಿಮಾನ ನಿಲ್ದಾಣಗಳ ಸೇರಿದಂತೆ ಇನ್ನಿತರ ಪ್ರಮುಳ ಸ್ಥಳಗಳಲ್ಲಿ ಕೆಎಸ್‌ಐಎಸ್‌ ತಂಡವನ್ನು ನಿಯೋಜಿಸಲಾಗಿದೆ‌‌‌. ರಾಜ್ಯ ಗುಪ್ತದಳವು ಕೇಂದ್ರದ ಇಂಟಲಿಜೆನ್ಸ್‌ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಲು ಸೂಚಿಸಲಾಗಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಸಿವಿಲ್ ಡಿಫೆನ್ಸ್ ವತಿಯಿಂದ ಡ್ರಿಲ್‌ ಮಾಡಲಿದ್ದಾರೆ” ಎಂದು ಹೇಳಿದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಾಗಲೇ ಕೇಂದ್ರ ಸರ್ಕಾರ ಭದ್ರತೆ ನೀಡುತ್ತಿರುವ ಸ್ಥಳಗಳನ್ನು ಅವರೇ ಭದ್ರತೆ ನೀಡಲಿದ್ದಾರೆ. ನಮ್ಮ ಜವಾಬ್ಧಾರಿ ಇರುವ ಕಡೆ ನಾವು ಮಾಡುತ್ತೇವೆ. ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸರಿಗೆ ಸೂಚಿಸಿದ್ದೇವೆ. ಈಗಾಗಲೇ ಪಾಕಿಸ್ತಾನ ಪ್ರಜೆಗಳನ್ನು ಕಳಿಸಲಾಗಿದೆ. ಎಫ್‌ಆರ್‌ಆರ್‌ಒ ಸಂಪರ್ಕದಲ್ಲಿದ್ದು, ಅವರು ನೀಡುವ ಮಾಹಿತಿ ಆಧಾರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದರು.

ರಾಯಚೂರಿನಲ್ಲಿ‌ನಡೆಯಬೇಕಿದ್ದ ಕಾರ್ಯಕ್ರಮವನ್ನು ರದ್ದುಪಡಿಸಿರುವ ಕುರಿತು ಮಾತನಾಡಿ, “ಬೇರೆ ಎಲ್ಲ ಕಾರ್ಯಕ್ರಮಗಳಿಗಿಂತ ರಕ್ಷಣೆ ವಿಚಾರ ಮುಖ್ಯ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯವರು ರದ್ದುಪಡಿಸಿದ್ದಾರೆ. ದೇಶದ ಭದ್ರತೆ ಪ್ರಶ್ನೆ. ಈ ಸಂದರ್ಭದಲ್ಲಿ ನಮ್ಮ‌ ನಡುವೆ ಸಣ್ಣಪುಟ್ಟ ವ್ಯತ್ಯಾಸ, ಅಭಿಪ್ರಾಯಗಳಿದ್ದರೆ ಅದೆಲ್ಲವನ್ನು ಬದಿಗೊತ್ತಿ ದೇಶದ ರಕ್ಷಣೆಗೆ ಕೈಜೋಡಿಸಬೇಕು” ಎಂದು ಹೇಳಿದರು‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...