ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ; ವಿಜಯಪುರದಲ್ಲಿ 1.50 ಲಕ್ಷ ರೂ. ಜಫ್ತಿ

Date:

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಸಂಬಂಧ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಕೋಲಾರ, ಯಾದಗಿರಿ, ದಾವಣಗೆರೆ, ಬೆಂಗಳೂರು ಹಾಗೂ ವಿಜಯಪುರದ ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

ಕೋಲಾರ ತಾಲ್ಲೂಕಿನ ಭೂಮಾಪನಾ ಇಲಾಖೆ ಸರ್ವೇ ಅಧಿಕಾರಿ ಸುರೇಶ್ ಬಾಬು ಜಿ., ಸುರಪುರ ತಾಲ್ಲೂಕು ಆರೋಗ್ಯಾಧಿಕಾರಿ ರಾಜೀವ್ ವೆಂಕಟಪ್ಪ ನಾಯಕ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ದಾವಣಗೆರೆ) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ ಬಿ ರವಿ ಹಾಗೂ ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಿ. ಶ್ರೀನಿವಾಸ ಮೂರ್ತಿ ಅವರ ನಿವಾಸ ಹಾಗೂ ಕಚೇರಿಗಳಲ್ಲಿ ಶೋಧ ನಡೆಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಪರೇಷನ್ ಸಿಂಧೂರ – ಪಾಕ್ ಭಯೋತ್ಪಾದನೆಗೆ ತಕ್ಕ ಶಾಸ್ತಿ!

ವಿಜಯಪುರ ಜಿಲ್ಲೆಯ ನಗರದ ಪ್ರಾದೇಶಿಕ ಸಾರಿಗೆ (ಆರ್‌ಟಿಒ) ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ದಿಢೀರ್ ದಾಳಿ ನಡೆಸಿ, ಅಲ್ಲಿನ ಅಧಿಕಾರಿಗಳು ಮತ್ತು ಖಾಸಗಿ ಎಜೆಂಟ್‌ಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಆರ್‌ಟಿಒ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಹಾಗೂ ಏಜೆಂಟರ ಮೂಲಕ ಹಣ ಸಂಗ್ರಹ ಮಾಡುತ್ತಿದ್ದಾರೆ ಎಂಬ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್‌ಪಿ ಟಿ. ಮಲ್ಲೇಶ ನೇತೃತ್ವದಲ್ಲಿ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿ ತಪಾಸಣೆ ನಡೆಸಿದರು.

ఆರ್‌ಟಿಒ ವಾಸೀಂ ಬಾಬಾ ಹಾಗೂ ಇತರ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ದಾಖಲಾತಿಗಳ ಪರಿಶೀಲನೆ ಮಾಡಿದರು. ಇದೇ ವೇಳೆ, 24 ಎಜೆಂಟರನ್ನು ವಶಕ್ಕೆ ಪಡೆದ ಅಧಿಕಾರಿಗಳು, ಎಜೆಂಟರ ಬಳಿಯಿದ್ದ ಅನಧೀಕೃತ 1.50 ಲಕ್ಷ ರೂ. ನಗದು ಹಣ ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಲೈಸನ್ಸ್, ದಾಖಲಾತಿ ವರ್ಗಾವಣೆ ಹಾಗೂ ಇತರ ಕೆಲಸ ಕಾರ್ಯಗಳಿಗಾಗಿ ಗ್ರಾಹಕರಿಂದ ಏಜೆಂಟರು ಹಣ ಸಂಗ್ರಹ ಮಾಡಿದ್ದರು ಎಂದು ತಿಳಿದು ಬಂದಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...