ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ಸು ಕಳಿಸಲು ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಶನಿವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ರಾಜ್ಯದ ವಿವಿಧ ನಗರಗಳಲ್ಲಿ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು” ಎಂದರು.

ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಬೇಕಿತ್ತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯ ಬಗ್ಗೆ ಮಾತನಾಡಿ, “ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು.ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯಲ್ಲಿ ಭದ್ರತಾ ವೈಫಲ್ಯವಾಗಿದೆ. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ? ಕಾಶ್ಮೀರದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಿದ್ದು, ಅವರು ಎಲ್ಲ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತಂದಿದ್ದಾರೆ” ಎಂದು ಹೇಳಿದರು.

ನಾವು ಯುದ್ಧದ ಪರ ಇಲ್ಲ

ಉಗ್ರರ ದಾಳಿಗೆ ಸಂಬಂಧಿಸಿದಂತೆ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, “ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು” ಎಂದರು.

ಪ್ರಧಾನಿಯಿಂದ ಜನರಿಗೆ ಟೋಪಿ

ಕಾಶ್ಮೀರದ ಉಗ್ರರ ದಾಳಿಗೆ ಸಂಭಂಧಿಸಿದಂತೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿಯವರು ಭಾಗವಹಿಸದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಇದು ಮಹತ್ವಯುತ ಸಭೆಯಾಗಿದ್ದು, ಪ್ರಧಾನಿಯವರು ಈ ಸಭೆಯಲ್ಲಿ ಹಾಜರಿರಬೇಕಿತ್ತು. ಆದರೆ ಅವರಿಗೆ ಈ ಸಭೆಗಿಂತ ಬಿಹಾರದ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ. ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ” ಎಂದು ಟೀಕಿಸಿದರು.

ಚಾಮರಾಜನಗರಕ್ಕೆ 20 ಬಾರಿ ಮುಖ್ಯಮಂತ್ರಿಯಾಗಿ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಚಾಮರಾಜನಗರಕ್ಕೆ ಮೊದಲ ಬಾರಿ ಭೇಟಿ ನೀಡಿದಾಗಲೇ, ಅಲ್ಲಿಗೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆಂಬ ಕಳಂಕ ತೊಡೆದುಹೋಯಿತು” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...