ಕ್ಯಾಬ್‌ ಸೇವೆಗೆ ಮುನ್ನ ಟಿಪ್ಸ್‌ ಪಡೆದರೆ ಕಟ್ಟುನಿಟ್ಟಿನ ಕ್ರಮ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Date:

ತ್ವರಿತ ಸೇವೆ ಒದಗಿಸಲು ಗ್ರಾಹಕರಿಂದ ಮುಂಗಡವಾಗಿ ಟಿಪ್ಸ್‌ ಪಡೆಯುತ್ತಿರುವ ಕ್ಯಾಬ್‌ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ.

ಟ್ಯಾಕ್ಸಿ ಸೇವೆಗೆ ಗ್ರಾಹಕರಿಂದ ಬುಕ್‌ ಮಾಡುವಾಗಲೇ ಟಿಪ್ಸ್‌ ರೂಪದಲ್ಲಿ ಹೆಚ್ಚುವರಿ ಹಣ ಪಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈಗಾಗಲೇ ಈ ಸಂಬಂಧ ಪ್ರಮುಖ ಕ್ಯಾಬ್‌ ಸರ್ವೀಸ್‌ Uber ಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಜೋಶಿ ತಿಳಿಸಿದ್ದಾರೆ.

ಟ್ಯಾಕ್ಸಿ ಸೇವೆ ಒದಗಿಸಲು Uber ನಂತಹ ಸೇವಾ ಸಂಸ್ಥೆಗಳು ಗ್ರಾಹಕರಿಂದ ಮುಂಚಿತವಾಗಿಯೇ ಒತ್ತಾಯದಿಂದ ಟಿಪ್ಸ್‌ ಪಡೆಯುತ್ತಿರುವುದು ಕಳವಳಕಾರಿ ಬೆಳವಣಿಗೆ. ಟಿಪ್ಸ್‌ ಎನ್ನುವುದು ಗ್ರಾಹಕರು ಉತ್ತಮ ಸೇವೆಗೆ ಮೆಚ್ಚಿ ಕೊಡುವಂಥದ್ದು. ಇದನ್ನು ಯಾರೂ ಒತ್ತಾಯದಿಂದ ಪಡೆಯಬಾರದು ಎಂದು ಸಚಿವ ಪ್ರಲ್ಹಾದ ಜೋಶಿ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಯಾಬ್‌ನವರು ಗ್ರಾಹಕರಿಗೆ ಸೇವೆ ಕಲ್ಪಿಸುವ ಮೊದಲೇ ಟಿಪ್ಸ್‌ ಪಡೆಯುವುದು ದಬ್ಬಾಳಿಕೆಯಾಗುತ್ತದೆ. ಗ್ರಾಹಕರ ಶೋಷಣೆಯಾಗುತ್ತದೆ. ಹಾಗಾಗಿ ಈ ಮುಂಗಡ ಟಿಪ್ಸ್‌ ಬಗ್ಗೆ ಪರಿಶೀಲಿಸುವಂತೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ(CCPA)ಕ್ಕೆ ಸೂಚನೆ ನೀಡಿದ್ದೆ. CCPA ತಪಾಸಣೆ ವೇಳೆ Uber ಸೇವೆಗೆ ಮುಂಗಡ ಟಿಪ್ಸ್‌ ಪಡೆಯುತ್ತಿರುವುದು ಸಾಬೀತಾದ್ದರಿಂದ ನೋಟಿಸ್ ಜಾರಿ ಮಾಡಿ ವಿವರಣೆ ಕೇಳಲಾಗಿದೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...