ಕೇಂದ್ರ ಸರ್ಕಾರ ಮಂಡಿಸಿದ ಮಸೂದೆಗಳ ಕುರಿತು ಅಧ್ಯಯನ ಸಮಿತಿಯಿಂದ ಸಿಎಂಗೆ ವರದಿ ಸಲ್ಲಿಕೆ

Date:

  • ಕೇಂದ್ರ ಗೃಹ ಸಚಿವರೊಂದಿಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
  • ಪ್ರತಿ ಸೆಕ್ಷನ್‌ ಬಗ್ಗೆ ಸವಿವರವಾಗಿ ಅಧ್ಯಯನ: ಎಚ್‌ ಕೆ ಪಾಟೀಲ

ಭಾರತ ಸರ್ಕಾರ ಲೋಕಸಭೆಯಲ್ಲಿ ಇತ್ತೀಚೆಗೆ ಮಂಡಿಸಿದ ಭಾರತೀಯ ನ್ಯಾಯ ಸಂಹಿತ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತ ಹಾಗೂ ಭಾರತೀಯ ಸಾಕ್ಷ್ಯ ಮಸೂದೆ 2023 ಮಸೂದೆಗಳ ಕುರಿತು ಅಧ್ಯಯನ ಮಾಡಲು ಕಾನೂನು ಮತ್ತು ಸಂಸದೀಯ ವ್ಯವಹಾರ ಮತ್ತು ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು ತನ್ನ ವರದಿಯನ್ನು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತು.

ಈ ಸಂದರ್ಭದಲ್ಲಿ ವರದಿಯ ಮುಖ್ಯಾಂಶಗಳ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ವರದಿಯನ್ನು ಪರಿಶೀಲಿಸಿ, ಸರ್ಕಾರ ತನ್ನ ಅಭಿಪ್ರಾಯವನ್ನು ಕೇಂದ್ರ ಗೃಹ ಸಚಿವರಿಗೆ ತಿಳಿಸಲಿದೆ. ತಾವು ಗೃಹ ಸಚಿವರನ್ನು ಭೇಟಿಯಾಗುವ ಸಂದರ್ಭದಲ್ಲಿಯೂ ಈ ವಿಷಯ ಕುರಿತು ಚರ್ಚಿಸುವುದಾಗಿ ತಿಳಿಸಿದರು.

ಪರಿಣತರ ಸಮಿತಿಯ ಸದಸ್ಯರು ತಮ್ಮ ಪರಿಶ್ರಮ, ಜ್ಞಾನ ಹಾಗೂ ಅನುಭವದ ಆಧಾರದಲ್ಲಿ ಈ ವರದಿಯನ್ನು ಸಿದ್ಧಪಡಿಸಿರುವ ಕುರಿತು ಮುಖ್ಯಮಂತ್ರಿಗಳ ಸಮಿತಿಯನ್ನು ಅಭಿನಂದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕನ್ನಡ ಆಡಳಿತ ಭಾಷೆಯಾಗಿದ್ದರೂ ಇದು ಪಾಲನೆಯಾಗಿಲ್ಲ: ಸಿದ್ದರಾಮಯ್ಯ ಬೇಸರ

ಪ್ರಾಸ್ತಾವಿಕವಾಗಿ ಮಾತನಾಡಿದ ಸಚಿವ ಎಚ್ ಕೆ ಪಾಟೀಲ, “ಸಮಿತಿಯು 10 ಸಭೆಗಳನ್ನು ನಡೆಸಿ, ಮೂರೂ ಮಸೂದೆಗಳ ಪ್ರತಿಯೊಂದು ಸೆಕ್ಷನ್‌ ಕುರಿತೂ ಸಹ ಸವಿವರವಾಗಿ ಅಧ್ಯಯನ ನಡೆಸಿ, ಚರ್ಚಿಸಿ, ವರದಿ ರೂಪಿಸಿದೆ” ಎಂದು ತಿಳಿಸಿದರು.

ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಪಿ.ಎನ್. ದೇಸಾಯಿ, ಕಾನೂನು, ನ್ಯಾಯ ಮತ್ತು ಮಾನವಹಕ್ಕುಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರಭಾವತಿ ಎಂ. ಹಿರೇಮಠ, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆಯ ಕಾರ್ಯದರ್ಶಿ ಶ್ರೀಧರ್‌ ಜಿ., ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ವಿಶೇಷ ಕಾರ್ಯದರ್ಶಿ ಹಾಗೂ ಪ್ರಾಸಿಕ್ಯೂಷನ್‌ ಮತ್ತು ಸರ್ಕಾರಿ ವ್ಯಾಜ್ಯಗಳ ನಿರ್ದೇಶಕ ಹೆಚ್.ಕೆ. ಜಗದೀಶ್‌, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಅಪರ ಕಾರ್ಯದರ್ಶಿ ಶ್ರೀಮತಿ ಶೀಲಾ ಬಿ.ಎಂ., ನಿವೃತ್ತ ಪ್ರೊಫೆಸರ್‌ ಚಿದಾನಂದ ಪಾಟೀಲ, ವಕೀಲರಾದ ಶಶಿಕಾಂತ್‌ ಕರೋಶಿ, ನಿವೃತ್ತ ಪೊಲೀಸ್‌ ಮಹಾ ನಿರ್ದೇಶಕ ಎನ್ಸ್. ಮೇಘರಿಖ್‌, ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾ ಯುನಿವರ್ಸಿಟಿಯ ಪ್ರೊಫೆಸರ್‌ ಎಸ್‌.ವಿ. ಜೋಗರಾವ್‌, ಕಾನೂನು, ನ್ಯಾಯ ಮತ್ತು ಮಾನವಹಕ್ಕುಗಳ ಇಲಾಖೆಯ ನಿವೃತ್ತ ಅಪರ ಕಾರ್ಯದರ್ಶಿ ಮೊಹಮ್ಮದ್‌ ಇಸ್ಮಾಯಿಲ್‌ ಸಮಿತಿಯ ಸದಸ್ಯರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...