ಸರ್ಕಾರದಿಂದ ಆದೇಶ ಜಾರಿ, ಪ್ರತಿಭಟನೆ ವಾಪಸ್‌ ಪಡೆದ ಕಬ್ಬು ಹೋರಾಟಗಾರರು

Date:

ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಶುಕ್ರವಾರ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ಟನ್ ಕಬ್ಬಿಗೆ 3,300 ರೂ. ಕೊಡಲು ನಿರ್ಧರಿಸಿರುವ ಬೆನ್ನಲ್ಲೇ ಈ ಆದೇಶವನ್ನು ಶನಿವಾರದಿಂದಲೇ ಸರ್ಕಾರ ಜಾರಿ ಮಾಡಿದೆ.

2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಸಂಬಂಧಿಸಿದ ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕಾದ ಕನಿಷ್ಠ ಹೆಚ್ಚುವರಿ ಕಬ್ಬು ಬೆಲೆಯನ್ನು ನಿಗದಿಪಡಿಸಲು ಹಾಗೂ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವನ್ನು ಒಂದು ಬಾರಿಗೆ ಹಂಚಿಕೆ ಮಾಡಿ ಇಂದು (ನ.8) ಆದೇಶಿಸಿದೆ.

ಕಾರ್ಖಾನೆಗಳು ಒಂದು ಟನ್‌ಗೆ ಹಿಂದೆ ನಿಗದಿಯಾಗಿದ್ದ ₹3,200ರ ಜತೆಗೆ ಹೆಚ್ಚುವರಿಯಾಗಿ ₹50 ಹಾಗೂ ರಾಜ್ಯ ಸರ್ಕಾರವು ಒಂದು ಅವಧಿಯ ಪ್ರೋತ್ಸಾಹ ಧನವಾಗಿ ₹50 ಪಾವತಿಸಲಿದೆ. ಸಾಗಣೆ ಮತ್ತು ಕಟಾವು ವೆಚ್ಚ ಹೊರತುಪಡಿಸಿ ಶೇ 11.25 ಇಳುವರಿ ಪ್ರಮಾಣ ಇರುವ ಪ್ರತಿ ಟನ್ ಕಬ್ಬಿಗೆ ₹3,896 ಹಾಗೂ ಶೇ 10.5 ಇಳುವರಿ ಪ್ರಮಾಣ ಇರುವ ಕಬ್ಬಿಗೆ ₹3,550 ದರ ಸಿಗಲಿದೆ. ಶೇ.9.5 ಅಥವಾ ಅದಕ್ಕಿಂತ ಕಡಿಮೆ ಇಳುವರಿ ಇದ್ದರೆ ಪ್ರತಿ ಟನ್‌ ಕಬ್ಬಿಗೆ 3,290 ರೂ. ಸಿಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶೇ.11.25 – 10.25 ಸಕ್ಕರೆ ಇಳುವರಿ ಪ್ರಮಾಣದ ನಡುವೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ ಪುತಿ ಶೇ.0.1 ಕಡಿಮೆ ಸಕ್ಕರೆ ಇಳುವರಿಗೆ ಅನುಪಾತಕ್ಕೆ ಅನುಗುಣವಾಗಿ ರೂ.1.00 ಮೊತ್ತವನ್ನು ಪ್ರತಿ ಕ್ವಿಂಟಾಲ್‌ಗೆ ಪರಿಗಣಿಸುವುದು. ಕಾರ್ಖಾನೆಗಳು ಪ್ರಥಮ ಕಂತಿನ ಮೊತ್ತವನ್ನು ಸಕ್ಕರೆ ನಿಯಂತ್ರಣ ಕಾಯ್ದೆಯಡಿಯಲ್ಲಿ ನಿಗದಿಪಡಿಸಿರುವಂತೆ 14 ದಿನಗಳಲ್ಲಿ ಹಣವನ್ನು ರೈತರಿಗೆ ಸಂದಾಯ ಮಾಡತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಕ್ಕರೆ ಶಿವನಾಂದ ಪಾಟೀಲ್‌ ಅವರು ಪ್ರತಿಭಟನಾ ಸ್ಥಳಕ್ಕೆ ಹೋಗಿ ಸರ್ಕಾರದ ಆದೇಶ ಪ್ರತಿಯನ್ನು ರೈತ ಮುಖಂಡರಿಗೆ ತಲುಪಿಸಿದ್ದಾರೆ. ಸರ್ಕಾರದ ನಿರ್ಧಾರಕ್ಕೆ ಬಹುತೇಕ ರೈತ ನಾಯಕರು ಒಪ್ಪಿಕೊಂಡಿದ್ದು, ಪ್ರತಿಭಟನೆ ಕೈಬಿಡುವುದಾಗಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...