ಬೆಳಗಾವಿ | ಡಿಸೆಂಬರ್ 8ರಿಂದ ಚಳಿಗಾಲದ ಅಧಿವೇಶನ!

Date:

ರಾಜ್ಯದ ವಿಧಾನಮಂಡಲ ಚಳಿಗಾಲ ಅಧಿವೇಶನವು ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ನಡೆಸಲು ಚರ್ಚಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಕುರಿತು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಪ್ರಸ್ತಾಪಿತ ವೇಳಾಪಟ್ಟಿಯನ್ನು ಅವರು ಒಪ್ಪಿಕೊಂಡಿದ್ದಾರೆ. ಈ ವಿಚಾರವಾಗಿ ಮುಂದಿನ ವಾರ ಬೆಳಗಾವಿ ಜಿಲ್ಲಾಧಿಕಾರಿಯೊಂದಿಗೆ ಸಭೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

“ಉತ್ತರ ಕರ್ನಾಟಕದ ಕೆಲವು ಚುನಾಯಿತ ಜನಪ್ರತಿನಿಧಿಗಳು ತಮ್ಮ ಪ್ರದೇಶದ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವುದಿಲ್ಲ. ಹೀಗಾಗಿ, ಉತ್ತರ ಕರ್ನಾಟಕದ ಕುರಿತು ಚರ್ಚೆ ನಡೆಸಲು ಎರಡು ದಿನಗಳನ್ನು ಮೀಸಲಿಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...