ಸುಳ್ಳು ಸುದ್ದಿ ಹರಡುತ್ತಿರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Date:

ರಾಮೇಶ್ವರ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಅವರು ಇಂದು ಗೃಹ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜನನಿಬಿಡ ಸ್ಥಳಗಳನ್ನು ಗುರುತಿಸಿ ಅಂಥ ಪ್ರದೇಶಗಳಲ್ಲಿ ಪೊಲೀಸ್‌ ಗಸ್ತು ಹೆಚ್ಚಿಸಿ, ಜನರಿಗೆ ರಕ್ಷಣೆ ಒದಗಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲು ಸೂಚಿಸಿದ ಮುಖ್ಯಮಂತ್ರಿಗಳು ಇಂಥ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕೆಂದರು.

ಪೊಲೀಸರು ಇಂಥ ಘಟನೆ ನಡೆದಾಗ ಎಚ್ಚರಿಕೆ ವಹಿಸಿ ನಂತರ ಮರೆಯುವುದಾಗಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಾರಿ ತಪ್ಪಿಸುವ ಕೆಲಸವನ್ನು ಮಟ್ಟ ಹಾಕುವಂತೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ʼಹಸಿವು ಮುಕ್ತ ಕರ್ನಾಟಕʼಕ್ಕೆ ಬೇಕಿದೆ ಅಧಿಕಾರಿಗಳ ಬದ್ಧತೆ

ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಿ. ಇಂಟೆಲಿಜೆನ್ಸ್ ಹೆಚ್ಚು ಜಾಗೃತವಾಗಿರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.

ಈ ಬಗ್ಗೆಯೇ ಪೊಲೀಸ್ ಇಲಾಖೆ ಜೊತೆಗೆ ಪ್ರತ್ಯೇಕ ಸಭೆ ಕರೆಯುವುದಾಗಿ ಹೇಳಿದರು. ಸಮಯ ಸಂದರ್ಭಕ್ಕೆ ತಕ್ಕಂತೆ ನಾವೂ ಬದಲಾಗಬೇಕು. ತ್ವರಿತಗತಿಯಲ್ಲಿ ಕೆಲಸ ಮಾಡಬೇಕು ಎಂದರು.

ಸಚಿವ ಪ್ರಿಯಾಂಕ ಖರ್ಗೆ, ಸಭೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾರ್ಯದರ್ಶಿ ಡಾ. ತ್ರಿಲೋಕ್ ಚಂದ್ರ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಪೊಲೀಸ್ ಆಯುಕ್ತ ಬಿ. ದಯಾನಂದ್ ಮೊದಲಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...