ಟೆಲಿಫೋನ್‌ ಕದ್ದಾಲಿಕೆ ಪ್ರಕರಣ: ಸಿಎಟಿ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

Date:

ಟೆಲಿಫೋನ್‌ ಕದ್ದಾಲಿಕೆ ಪ್ರಕರಣದಲ್ಲಿ ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್ ಕುಮಾರ್‌ ವಿರುದ್ಧ ಇಲಾಖಾವಾರು ತನಿಖೆಯನ್ನು ರದ್ದುಗೊಳಿಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ(ಸಿಎಟಿ) ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ.

ಅಲೋಕ್‌ ಕುಮಾರ್ ಅವರು ಟಲಿಫೋನ್‌ ಕದ್ದಾಲಿಕೆ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಆರೋಪಗಳ ಕುರಿತು ಸಿಬಿಐ ತನಿಖೆ ನಡೆಸಿದ್ದ ಸಿಬಿಐ, ‘ಅಲೋಕ್‌ ಕುಮಾರ್ ವಿರುದ್ಧ ಕ್ರಿಮಿನಲ್ ಆರೋಪವಿಲ್ಲ’ ಎಂದು ಹೇಳಿ, ಪ್ರಕರಣವನ್ನು ಮುಕ್ತಾಯಗೊಳಿಸಿತ್ತು. ಅಲ್ಲದೆ, ಇಲಾಖಾವಾರು ತನಿಖೆ ನಡೆಸಲು ಸರ್ಕಾರಕ್ಕೆ ಸಲಹೆ ನೀಡಿತ್ತು. ಅದರಂತೆ, ಇಲಾಖಾವಾರು ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿತ್ತು.

ಆದರೆ, ಸರ್ಕಾರದ ಆದೇಶವನ್ನು ಪ್ರಶ್ನಿಸಿ ಅಲೋಕ್​ ಕುಮಾರ್ ಸಿಎಟಿ ಮೊರೆ ಹೋಗಿದ್ದರು. ಅವರ ಅರ್ಜಿಯನ್ನು ಆಲಿಸಿದ್ದ ಸಿಎಟಿ ಇಲಾಖಾವಾರು ತನಿಖೆಯನ್ನು ರದ್ದುಪಡಿಸಿ ಆದೇಶಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಟಿಯ ಆದೇಶವನ್ನು ಪ್ರಶ್ನಿಸಿ ಸರ್ಕಾರವು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿತ್ತು. ಸರ್ಕಾರದ ಅರ್ಜಿಯನ್ನು ಆಲಿಸಿದ ಹೈಕೋರ್ಟ್‌ ನ್ಯಾಯಪೀಠವು ಸಿಎಟಿ ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿದೆ.

ಸಿಎಟಿ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಬಿ ಎಂ ಶ್ಯಾಮ್‌ ಪ್ರಸಾದ್‌ ಮತ್ತು ಟಿ ಎಂ ನದಾಫ್‌ ಅವರ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿರುವ ಹೈಕೋರ್ಟ್‌, ವಿಚಾರಣೆಯನ್ನು ಡಿಸೆಂಬರ್‌ 4ಕ್ಕೆ ಮುಂದೂಡಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...